ಬ್ರೇಕಿಂಗ್ ನ್ಯೂಸ್
17-11-24 12:22 pm Mangaluru Correspondent ಕರಾವಳಿ
ಉಳ್ಳಾಲ, ನ.17: ಸೋಮೇಶ್ವರ ಉಚ್ಚಿಲದ ವಾಝ್ಕೊ ಬೀಚ್ ರೆಸಾರ್ಟ್ ಈಜುಕೊಳದಲ್ಲಿ ನೀರಾಟ ಆಡುತ್ತಿದ್ದ ಮೈಸೂರು ಮೂಲದ ಮೂವರು ಯುವತಿಯರು ಉಸಿರುಗಟ್ಟಿ ಸಾವನ್ನಪ್ಪಿದ ಘಟನೆ ಇಂದು ಬೆಳಗ್ಗೆ ನಡೆದಿದೆ.
ಮೈಸೂರು ಕುರುಬರ ಹಳ್ಳಿ ನಾಲ್ಕನೇ ಕ್ರಾಸ್ ನಿವಾಸಿ ನಿಶಿತಾ ಎಂ.ಡಿ. (21), ಮೈಸೂರು ರಾಮಾನುಜ ರಸ್ತೆ ,ಕೆ.ಆರ್ ಮೊಹಲ್ಲಾ ನಿವಾಸಿ ಪಾರ್ವತಿ ಎಸ್ (20), ಮೈಸೂರು ವಿಜಯನಗರ ದೇವರಾಜ ಮೊಹಲ್ಲ ನಿವಾಸಿ ಕೀರ್ತನ ಎನ್(21)ಸಾವನ್ನಪ್ಪಿದ ಯುವತಿಯರು. ನಿನ್ನೆ ಬೆಳಗ್ಗೆ ವಾಝ್ಕೊ ಬೀಚ್ ರೆಸಾರ್ಟ್ ಗೆ ಬಂದಿದ್ದ ಮೂವರು ಯುವತಿಯರು ರೂಮ್ ನಂ 2'ರಲ್ಲಿ ತಂಗಿದ್ದರು. ಇಂದು ಬೆಳಗ್ಗೆ ಹತ್ತು ಗಂಟೆ ಸುಮಾರಿಗೆ ರೆಸಾರ್ಟ್ ಮುಂಭಾಗದಲ್ಲಿ ಈಜು ಕೊಳಕ್ಕಿಳಿದು ನೀರಾಟ ಆಡುತ್ತಿದ್ದ ವೇಳೆ ಮುಳುಗಿ ಸಾವನ್ನಪ್ಪಿದ್ದಾರೆ.





ಯುವತಿಯರು ಈಜುಕೊಳದ ದಂಡೆಯಲ್ಲಿ ಹೊರ ಉಡುಪುಗಳನ್ನ ಕಳಚಿಟ್ಟಿದ್ದು ಐಪೋನ್ ಒಂದನ್ನ ಈಜು ಕೊಳದ ನೀರಿಗೆ ಗುರಿಯಾಗಿ ರೆಕಾರ್ಡ್ ಇಟ್ಟು ನೀರಾಟಕ್ಕಿಳಿದಿದ್ದಾರೆ. ಯುವತಿಯರಿಗೆ ಈಜು ತಿಳಿಯದೆ ಇರುವುದರಿಂದ ಘಟನೆ ಸಂಭವಿಸಿದೆ ಎನ್ನಲಾಗಿದೆ. ರೆಸಾರ್ಟ್ ಸಿಬ್ಬಂದಿಗಳು ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ.
ಯುವತಿಯರು ನೀರಲ್ಲಿ ಮುಳುಗುತ್ತಿರುವ ಘಟನೆಯ ವೀಡಿಯೋ ಚಿತ್ರಣ ರೆಸಾರ್ಟ್ ಸಿಸಿಟಿವಿಯಲ್ಲಿ ದಾಖಲಾಗಿದೆ. ಉಳ್ಳಾಲ ಪೊಲೀಸ್ ಇನ್ಸ್ ಪೆಕ್ಟರ್ ಹೆಚ್.ಎನ್ ಬಾಲಕೃಷ್ಣ ನೇತೃತ್ವದ ತಂಡ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
Vazco beach resort tragedy, three girls die drowning in swimming pool at Someshwara in Mangalore. The deceased have been identified as Nishita (21) Parvathi (21) and Keerthana (21) all are native of Mysuru. The three have drowned and while they were recording them swimming on their iPhone. Ullal police are investigating the case.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am