ಬ್ರೇಕಿಂಗ್ ನ್ಯೂಸ್
24-11-24 01:18 pm Mangalore Correspondent ಕರಾವಳಿ
ಉಳ್ಳಾಲ, ನ.24: ಸೋಮೇಶ್ವರ ಸಮುದ್ರ ತೀರದ ರುದ್ರಪಾದೆ(ಬಂಡೆ)ಯಿಂದ ಹಾರಿ ಆತ್ಮಹತ್ಯೆಗೈಯಲು ಯತ್ನಿಸಿದ ಕಾಲೇಜು ವಿದ್ಯಾರ್ಥಿನಿಯನ್ನ ಜೀವರಕ್ಷಕ ಸಿಬ್ಬಂದಿ ಮತ್ತು ಸ್ಥಳೀಯ ಈಜುಗಾರರು ಸೇರಿ ರಕ್ಷಿಸಿದ ಘಟನೆ ಇಂದು ಬೆಳಗ್ಗೆ ಸಂಭವಿಸಿದೆ.
ಕೋಟೆಕಾರು ಮಾಡೂರಿನ ಬಾಡಿಗೆ ಮನೆಯಲ್ಲಿ ವಾಸವಿದ್ದು ಮಂಗಳೂರಿನಲ್ಲಿ ಕಾಲೇಜು ಕಲಿಯುತ್ತಿದ್ದ ಯುವತಿ ಸಮುದ್ರಕ್ಕೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಆತ್ಮಹತ್ಯೆಗೆ ಯತ್ನಿಸಿದ ಯುವತಿ ಮಂಗಳೂರಿನ ಕಾಲೇಜೊಂದರ ಪದವಿ ವಿದ್ಯಾರ್ಥಿನಿಯಾಗಿದ್ದಾಳೆ.


ಇಂದು ಬೆಳಗ್ಗೆ ವಿದ್ಯಾರ್ಥಿನಿ ಸಮುದ್ರ ತೀರದ ರುದ್ರಪಾದೆಯಿಂದ ನೀರಿಗೆ ಜಿಗಿದಿದ್ದಾಳೆ. ರುದ್ರಪಾದೆಯಲ್ಲಿದ್ದ ಹೊರ ರಾಜ್ಯದ ವಲಸೆ ಕಾರ್ಮಿಕನೋರ್ವ ತಕ್ಷಣವೇ ನೀರಿಗೆ ಜಿಗಿದು ಯುವತಿಯನ್ನ ರಕ್ಷಿಸಿ ದಡದತ್ತ ಸೆಳೆಯಲು ಮುಂದಾಗಿದ್ದಾನೆ. ಆದರೆ ಯುವತಿ ಪ್ರಾಣ ಸಂಕಟದಿಂದ ವಲಸೆ ಕಾರ್ಮಿಕನನ್ನು ಗಟ್ಟಿಯಾಗಿ ಬಿಗಿದಪ್ಪಿದ್ದು, ಇಬ್ಬರೂ ನೀರುಪಾಲಾಗುವ ಅಪಾಯಕ್ಕೀಡಾಗಿದ್ದರು. ಕೂಡಲೇ ಸ್ಥಳದಲ್ಲಿದ್ದ ಕರಾವಳಿ ಕಾವಲು ಪಡೆಯ ಜೀವರಕ್ಷಕ ಸಿಬ್ಬಂದಿ ಸುಜಿತ್ ಟಯರ್ ಟ್ಯೂಬ್ ಮೂಲಕ ಯುವತಿ ಮತ್ತು ವಲಸೆ ಕಾರ್ಮಿಕನನ್ನ ದಡಕ್ಕೆ ಎಳೆದು ರಕ್ಷಿಸಿದ್ದಾರೆ. ಸ್ಥಳೀಯರು ಜೀವ ರಕ್ಷಕ ಸಿಬ್ಬಂದಿ ಸುಜಿತ್ ಗೆ ಸಹಕಾರ ನೀಡಿದ್ದಾರೆ.
ಯುವತಿ ಪ್ರಾಣಾಪಾಯದಿಂದ ಪಾರಾಗಿದ್ದು, ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.
Mangalore college student girl attempts suicide by jumping into Someshwara sea, rescued by life gaurds. A labourer form other state immediately jumped into the water to rescue her
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm