ಬ್ರೇಕಿಂಗ್ ನ್ಯೂಸ್
25-11-24 02:44 pm Mangalore Correspondent ಕರಾವಳಿ
ಉಳ್ಳಾಲ, ನ.25: ಉಳ್ಳಾಲದಲ್ಲಿ ಧಾರ್ಮಿಕ ಶಿಕ್ಷಣ ರಂಗ ಅಭಿವೃದ್ಧಿ ಹೊಂದಲು ತಾಜುಲ್ ಉಲಮಾ ಅಬ್ದುಲ್ ರಹಿಮಾನ್ ಕುಂಞಿ ಕೋಯ ತಂಙಳ್ ಕಾರಣರಾಗಿದ್ದಾರೆ. 2025ನೇ ಸಾಲಿನ ಉರೂಸ್ ದಿನ ನಿಗದಿ ಈಗಾಗಲೇ ಮಾಡಲಾಗಿದೆ. ಎಪ್ರಿಲ್ 24 ರಿಂದ ಮೇ 18 ವರೆಗೆ ಉರೂಸ್ ನಡೆಯಲಿದೆ. ಎಲ್ಲರೂ ಒಗ್ಗಟ್ಟಾಗಿ ಉರೂಸನ್ನು ಯಶಸ್ವಿಯಾಗಿ ನೆರವೇರಿಸಬೇಕೆಂದು ಎಂದು ಉಳ್ಳಾಲ ಖಾಝಿ ಇಂಡಿಯನ್ ಗ್ರ್ಯಾಂಡ್ ಮುಫ್ತಿ ಸುಲ್ತಾನುಲ್ ಉಲಮಾ ಎಪಿ ಅಬೂಬಕ್ಕರ್ ಮುಸ್ಲಿಯಾರ್ ಹೇಳಿದರು.
ಉಳ್ಳಾಲ ಉಳ್ಳಾಲ ದರ್ಗಾದಲ್ಲಿ ಅಂತ್ಯ ವಿಶ್ರಾಂತಿ ಪಡೆಯುತ್ತಿರುವ ಖುತುಬುಝ್ಝಮಾನ್ ಅಸ್ಸಯ್ಯದ್ ಮುಹಮ್ಮದ್ ಶರೀಫುಲ್ ಮದನಿ (ಖ.ಸಿ.) ಅವರ ಹೆಸರಿನಲ್ಲಿ 2025 ಎಪ್ರಿಲ್ ತಿಂಗಳಲ್ಲಿ ನಡೆಯುವ 22ನೇ ಪಂಚವಾರ್ಷಿಕ ಹಾಗೂ 432 ನೇ ವಾರ್ಷಿಕ ಉಳ್ಳಾಲ ಉರೂಸ್ ಪ್ರಯುಕ್ತ ಭಾನುವಾರ ನಡೆದ ಉರೂಸ್ ದಿನ ಘೋಷಣೆ ಹಾಗೂ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ಈ ಉರೂಸ್ ಕೇವಲ ಮುಸ್ಲಿಮರಿಗೆ ಮಾತ್ರ ಸೀಮಿತವಾಗಿ ನಡೆಯುತ್ತಿಲ್ಲ. ಇಲ್ಲಿ ಜಾತಿ ಧರ್ಮ ಇಲ್ಲ. ಎಲ್ಲಾ ಧರ್ಮದವರಿಗೂ ಈ ಕಾರ್ಯಕ್ರಮದಲ್ಲಿ ಭಾಗವಹಿಸಬಹುದು. ರಾಜಕೀಯ ಮುಖಂಡರು ಭಾಗವಹಿಸಲಿದ್ದಾರೆ. ಎಲ್ಲರ ಸಹಕಾರ ಅಗತ್ಯ ಇದೆ ಎಂದರು.
ಕಾರ್ಯಕ್ರಮ ಉದ್ಘಾಟಿಸಿದ ಉಡುಪಿ ಖಾಝಿ ಅಬ್ದುಲ್ ಹಮೀದ್ ಮುಸ್ಲಿಯಾರ್ ಮಾಣಿ ಮಾತನಾಡಿ, 2025ರ ಉರೂಸ್ ಯಶಸ್ವಿ ಆಗಬೇಕು. ಇದಕ್ಕೆ ಎಲ್ಲರ ಸಹಕಾರ ಬೇಕು ಎಂದು ಕರೆ ನೀಡಿದರು. ದರ್ಗಾ ಅಧ್ಯಕ್ಷ ಹನೀಫ್ ಹಾಜಿ ಮಾತನಾಡಿ
ಉಳ್ಳಾಲ ಉರೂಸ್ ಧ್ವಜಾರೋಹಣ ಆಗಿದೆ. ಇನ್ನು ಉರೂಸ್ ಗೆ ಸಂಬಂಧಿಸಿದ ಎಲ್ಲ ಕಾರ್ಯಕ್ರಮ ನಡೆಯಲಿದೆ. ಹಿಂದೂ, ಮುಸ್ಲಿಂ, ಕ್ರೈಸ್ತ ಎಂಬ ಭೇದ ಭಾವ ಇಲ್ಲದೇ ಸೌಹಾರ್ದತೆಯಿಂದ ನಡೆಯುವ ಉರೂಸ್ ಕಾರ್ಯಕ್ರಮದ ಎಲ್ಲಾ ನಿಯಮಗಳನ್ನು ನಾವು ಪಾಲನೆ ಮಾಡಬೇಕು ಎಂದು ಕರೆ ನೀಡಿದರು.
ಸ್ಪೀಕರ್ ಯು.ಟಿ ಖಾದರ್ ಮಾತನಾಡಿ, ಎಪ್ರಿಲ್ ತಿಂಗಳಲ್ಲಿ ಉಳ್ಳಾಲ ಉರೂಸ್ ನಡೆಯಲಿದ್ದು, ದಿನ ಯಾವಾಗ ಬರುತ್ತದೆ ಎಂದು ಭಕ್ತಾದಿಗಳು ಕಾಯುತ್ತಿರುತ್ತಾರೆ. ಈ ಬಾರಿ ಉರೂಸ್ ನಲ್ಲಿ ಹಲವು ವಿಶೇಷ ಕಾರ್ಯಕ್ರಮಗಳು ಖಾಝಿ ಸುಲ್ತಾನ್ ಉಲೆಮಾ
ಎಪಿ ಉಸ್ತಾದ್ ಅವರ ನೇತೃತ್ವದಲ್ಲಿ ನಡೆಯಲಿದೆ. ಇಲ್ಲಿ ಅಭಿವೃದ್ಧಿ ಕಾಣಲು ಇಲ್ಲಿನ ಮಣ್ಣಿನ ಗುಣ ಕಾರಣ ಎಂದರು.
ಈ ಸಂದರ್ಭದಲ್ಲಿ ಉರೂಸ್ ನ ಪೋಸ್ಟರ್ ಬಿಡುಗಡೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಉಳ್ಳಾಲ ಜುಮಾ ಮಸೀದಿ ಖತೀಬರಾದ ಇಬ್ರಾಹೀಮ್ ಸಅದಿ, ದರ್ಗಾ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಶಿಹಾಬುದ್ದೀನ್ ಸಖಾಫಿ, ಅರೇಬಿಕ್ ಕಾಲೇಜು ಪ್ರಾಂಶುಪಾಲ ಅಹ್ಮದ್ ಕುಟ್ಟಿ ಸಖಾಫಿ, ದರ್ಗಾ ಮಾಜಿ ಅಧ್ಯಕ್ಷ ಹಾಜಿ ಕಣಚೂರು ಮೋನು, ಬಿ.ಎಂ.ಫಾರೂಕ್, ದರ್ಗಾ ಉಪಾಧ್ಯಕ್ಷ ಅಶ್ರಫ್ ರೈಟ್ ವೇ, ಜತೆ ಕಾರ್ಯದರ್ಶಿ ಮುಸ್ತಫಾ ಮದನಿನಗರ, ಇಸ್ಹಾಕ್ ಮೇಲಂಗಡಿ, ಕೋಶಾಧಿಕಾರಿ ನಾಝೀಮ್ ಮುಕ್ಕಚ್ಚೇರಿ, ಅರೆಬಿಕ್ ಟ್ರಸ್ಟ್ ಉಪಾಧ್ಯಕ್ಷ ಅಶ್ರಫ್ ಹಾಜಿ, ಪ್ರಧಾನ ಕಾರ್ಯದರ್ಶಿ ಬಶೀರ್ ಸಖಾಫಿ, ಜತೆ ಕಾರ್ಯದರ್ಶಿ ಸಯ್ಯಿದ್ ಜಲಾಲ್ ತಂಗಳ್, ಕೋಶಾಧಿಕಾರಿ ಮುಸ್ತಫ ದಾರಂದಬಾಗಿಲು, ಚಾರಿಟೇಬಲ್ ಟ್ರಸ್ಟ್ ಉಪಾಧ್ಯಕ್ಷ ಫಾರೂಕ್ ಯು.ಎಚ್. ಜಬ್ಬಾರ್ ಮೇಲಂಗಡಿ, ಪ್ರಧಾನ ಕಾರ್ಯದರ್ಶಿ ಇಮ್ತಿಯಾಝ್ ಪಿಲಾರ್, ಜತೆ ಕಾರ್ಯದರ್ಶಿ ಅಬ್ದುಲ್ ಅಝೀಝ್ ಕೋಡಿ, ಕೋಶಾಧಿಕಾರಿ ಫಾರೂಕ್ ಮುಕ್ಕಚ್ಚೇರಿ, ಅಬ್ದುಲ್ ರಶೀದ್ ಝೈನಿ, ಕೆಕೆಎಂ ಕಾಮಿಲ್ ಸಖಾಫಿ, ತೋಕೆ ಮುಹಿಯದ್ದೀನ್ ಕಾಮಿಲ್ ಸಖಾಫಿ, ಕಾಂಗ್ರೆಸ್ ಮುಖಂಡ ಇನಾಯತ್ ಅಲಿ, ವಕ್ಫ್ ಜಿಲ್ಲಾ ಸಲಹಾ ಸಮಿತಿ ಅಧ್ಯಕ್ಷ ಅಬ್ದುಲ್ ನಾಸಿರ್ ಲಕ್ಕಿ ಸ್ಟಾರ್, ಎಸ್.ಎಂ ರಶೀದ್ ಹಾಜಿ, ಜಿಲ್ಲಾ ವಕ್ಫ್ ಅಧಿಕಾರಿ ಅಬೂಬಕ್ಕರ್, ದರ್ಗಾ ಮಾಜಿ ಅಧ್ಯಕ್ಷ ಹಂಝ ಹಾಜಿ, ಹೈದರ್ ಪರ್ತಿಪ್ಪಾಡಿ, ಐಸಮ್ ಶಾಕಿರ್ ಹಾಜಿ ಮತ್ತಿತರರು ಉಪಸ್ಥಿತರಿದ್ದರು.
Tajul Ulama Abdul Rahman Kunhi Koya Thangal is responsible for the development of the religious education sector in Ullal. The date of Uruz 2025 has already been fixed. Uruz will be held from April 24 to May 18. Ullal Qazi Indian Grand Mufti Sultanul Ulama AP Abubakkar Musliyar said that everyone should unite and make Uruz a success.
05-05-25 01:30 pm
HK News Desk
ಅಲ್ಲೊಂದು, ಇಲ್ಲೊಂದು ಕೊಲೆ ಆಗತ್ತೆ, ಅದನ್ಯಾಕೆ ಧರ್ಮ...
04-05-25 09:55 pm
ಸಿಇಟಿ ಬಳಿಕ ನೀಟ್ ಪರೀಕ್ಷೆಗೂ ಜನಿವಾರಕ್ಕೆ ಕತ್ತರಿ !...
04-05-25 09:26 pm
ಹಿಮಾಲಯ - ದೆಹಲಿಗೆ ಸುನಾಮಿ, ಮಹಾನ್ ನಾಯಕರ ದುರ್ಮರಣ...
04-05-25 09:15 pm
Bangalore Girl Naked, HSR Layout: ಬೆಂಗಳೂರಿನಲ್...
04-05-25 02:27 pm
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
05-05-25 03:24 pm
Mangalore Correspondent
Paakashala Resturant, Mangalore: ಮಂಗಳೂರಿನಲ್ಲು...
05-05-25 11:22 am
Sharan Pumpwell, Mangalore, threat: ಶರಣ್ ಪಂಪ್...
04-05-25 11:26 pm
Mangalore, Hate speech, BJP MLA Harish Poonja...
04-05-25 08:49 pm
Minister Gundu Rao, Mangalore: ಮುಸ್ಲಿಂ ಮುಖಂಡರ...
04-05-25 08:39 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm