ಬ್ರೇಕಿಂಗ್ ನ್ಯೂಸ್
26-11-24 11:23 pm Udupi Correspondent ಕರಾವಳಿ
ಉಡುಪಿ, ನ 26: ಬ್ರಹ್ಮಾವರ ಠಾಣೆಯ ಪೊಲೀಸರ ವಶದಲ್ಲಿದ್ದ ವೇಳೆ ಕೇರಳದ ಕೊಲ್ಲಂನ ಕೊಟ್ಟಾರಕರ ನಿವಾಸಿ ಬಿಜು ಯೋಹನ್ನಾನ್ (42) ಎಂಬುವವರು ಮೃತಪಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿ ಅವರ ಕುಟುಂಬದವರು ಕೇರಳ ಮುಖ್ಯಮಂತ್ರಿ ಮತ್ತು ಮಾನವ ಹಕ್ಕುಗಳ ಆಯೋಗಕ್ಕೆ ದೂರು ನೀಡಲು ಸಿದ್ಧತೆ ನಡೆಸಿದ್ದಾರೆ.
ಅಣ್ಣನ ಸಾವಿಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಕೇರಳ ಮುಖ್ಯಮಂತ್ರಿಗೆ ಹಾಗೂ ಮಾನವ ಹಕ್ಕುಗಳ ಆಯೋಗಕ್ಕೆ ದೂರು ನೀಡಲು ಸಿದ್ಧತೆ ನಡೆಸಿದ್ದೇವೆ. ಮರಣೋತ್ತರ ಪರೀಕ್ಷೆ ಮತ್ತು ವಿಧಿ ವಿಜ್ಞಾನ ಪರೀಕ್ಷೆಯ ವರದಿಗಳು ಇನ್ನೂ ನಮ್ಮ ಕೈಸೇರಿಲ್ಲ. ಅದು ಸಿಕ್ಕಿದ ಕೂಡಲೇ ದೂರು ನೀಡುತ್ತೇವೆ' ಎಂದು ಬಿಜು ಅವರ ತಮ್ಮ ಬಿನು ಯೋಹನ್ನಾನ್ ತಿಳಿಸಿದರು.
ಅಣ್ಣ ಶೌಚಾಲಯದಲ್ಲಿ ಕುಸಿದು ಬಿದ್ದು ಮೃತಪಟ್ಟಿರುವುದಾಗಿ ಪೊಲೀಸರು ನಮಗೆ ತಿಳಿಸಿದ್ದರು. ನಾವು ಜಿಲ್ಲಾ ಮ್ಯಾಜಿಸ್ಟ್ರೇಟ್ ಅನುಮತಿ ಪಡೆದು ಮೃತದೇಹವನ್ನು ನೋಡಿದ್ದೆವು. ಮೊಣಕಾಲು ಮತ್ತು ತೊಡೆಯಲ್ಲಿ ಗಾಯದ ಗುರುತುಗಳಿದ್ದವು ಇದು ಸಂಶಯಕ್ಕೆ ಎಡೆ ಮಾಡಿಕೊಟ್ಟಿದೆ' ಎಂದರು.
'ಅಣ್ಣ ಐಟಿಐ ಪೂರೈಸಿದ್ದು, ಬ್ರಹ್ಮಾವರ ಬಳಿಯ ಶಿಪ್‌ಯಾರ್ಡ್‌ವೊಂದಕ್ಕೆ ಕೆಲಸಕ್ಕೆ ಬಂದಿದ್ದ. 12 ದಿವಸ ಮಾತ್ರ ಬ್ರಹ್ಮಾವರದಲ್ಲಿ ಉಳಿದುಕೊಂಡಿದ್ದ' ಎಂದು ಬಿನು ತಿಳಿಸಿದರು.
ಅಣ್ಣ ಮದ್ಯಪಾನ ಮಾಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಆದರೆ ಅವರು ವೈದ್ಯಕೀಯ ಪರೀಕ್ಷೆ ಮಾಡಿಸಿಲ್ಲ. ಅಣ್ಣ ವಾಸವಿದ್ದ ರೂಮ್ ಮಾಲೀಕರನ್ನೂ ನಾವು ಮಾತನಾಡಿಸಿದ್ದೆವು. ಅವರು ಕೂಡ ಯಾವುದೇ ಕೆಟ್ಟ ಅಭಿಪ್ರಾಯ ಹೇಳಿಲ್ಲ. ಮಹಿಳೆಯೊಬ್ಬರು ಅಣ್ಣನ ವಿರುದ್ಧ ದೂರು ನೀಡಿದ್ದಾರೆ ಎನ್ನಲಾಗಿದೆ, ಆದರೆ ದೂರಿನ ಪ್ರತಿಯನ್ನು ನಮಗೆ ನೀಡಿಲ್ಲ' ಎಂದು ಬಿನು ಹೇಳಿದರು. ಸಿಐಡಿ ಪೊಲೀಸರು ಈ ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.
ಆರೋಪಿಗಳನ್ನು ಬಂಧಿಸುವಾಗ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಸುಪ್ರೀಂ ಕೋರ್ಟ್ ನೀಡಿರುವ ನಿರ್ದೇಶನಗಳನ್ನು ಪಾಲಿಸದ ಕಾರಣಕ್ಕೆ ಬ್ರಹ್ಮಾವರ ಪೊಲೀಸ್ ಠಾಣೆಯ ಸಬ್ ಇನ್‌ಸ್ಪೆಕ್ಟರ್ ಮಧು ಪಿ. ಮತ್ತು ಪ್ರಭಾರ ಠಾಣಾಧಿಕಾರಿಯಾಗಿದ್ದ ಸುಜಾತಾ ಅವರನ್ನು ಅಮಾನತು ಮಾಡಲಾಗಿತ್ತು.
Quote - ಪೊಲೀಸ್ ವಶದಲ್ಲಿದ್ದ ವ್ಯಕ್ತಿ ಮೃತಪಟ್ಟಿರುವ ಪ್ರಕರಣದ ತನಿಖೆಯನ್ನು ಸಿಐಡಿ ಪೊಲೀಸರು ನಡೆಸುತ್ತಿದ್ದಾರೆ. ಮೃತ ವ್ಯಕ್ತಿಯ ಮನೆಯವರು ಕೇರಳ ಮುಖ್ಯಮಂತ್ರಿಗೆ ದೂರು ನೀಡಲು ಸಿದ್ಧತೆ ನಡೆಸಿರುವ ಕುರಿತು ನಮಗೆ ಯಾವುದೇ ಮಾಹಿತಿ ಇಲ್ಲ ಅರುಣ್ ಕೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ
Kerala native accused dies at Brahmavara Police Station in Udupi, family demands probe.
26-08-25 06:06 pm
Bangalore Correspondent
Dharmasthala Case SIT Officer M.N. Anucheth:...
26-08-25 04:48 pm
DK Shivakumar, BBMP, Potholea: ಬೆಂಗಳೂರಿನಲ್ಲಿ...
26-08-25 02:04 pm
SIT Issues Notice, Sujatha Bhat: ಸುಳ್ಳಜ್ಜಿ ಸು...
25-08-25 10:55 pm
K N Rajanna, Dk Shivakumar: ಅವ್ರು ಆರೆಸ್ಸೆಸ್ ಗ...
25-08-25 06:07 pm
24-08-25 01:47 pm
HK News Desk
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
26-08-25 10:36 am
Mangalore Correspondent
Mangalore, Rushabh Rao: ವಿಯಟ್ನಾಂ ಫ್ಯಾಷನ್ ಶೋ ಸ...
25-08-25 10:59 pm
Mangalore, Esyasoft, AI, Bajpe: ಬಜ್ಪೆ ; ಎಸ್ಯಾ...
25-08-25 10:44 pm
Sameer MD, Latest News: ಬುರುಡೆ ರಹಸ್ಯ ; ಬೆಳ್ತಂ...
25-08-25 10:28 pm
Elevate Brand Mangalore 2025: 'ಎಲಿವೇಟ್ ಬ್ರ್ಯಾ...
25-08-25 05:24 pm
26-08-25 05:24 pm
HK News Desk
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm
How Did Pastor John Shamine and Criminal Mada...
25-08-25 07:31 pm
Online Fraud, cyber, Mangalore : ರಸಗೊಬ್ಬರ ಕಂಪ...
25-08-25 04:39 pm