ಬ್ರೇಕಿಂಗ್ ನ್ಯೂಸ್
03-12-24 12:06 pm Mangalore Correspondent ಕರಾವಳಿ
ಮಂಗಳೂರು, ಡಿ.3: ಫೆಂಗಲ್ ಚಂಡಮಾರುತದ ಪ್ರಭಾವ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಿಗೆ ತಟ್ಟಿದ್ದು ನಿನ್ನೆ ಸಂಜೆಯಿಂದ ರಾತ್ರಿಯಿಡೀ ಭಾರೀ ಮಳೆಯಾಗಿದೆ. ರಾಜ್ಯದಲ್ಲಿ ಎಂಟು ಜಿಲ್ಲೆಗಳಲ್ಲಿ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಹಾಸನ, ಶಿವಮೊಗ್ಗ, ಕೊಡಗು, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಸಿಡಿಲು ಸಹಿತ ಭಾರೀ ಮಳೆ ಸುರಿದಿದೆ.
ಮಂಗಳೂರು ಸಹಿತ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ರಾತ್ರಿಯಿಡೀ ಮಳೆಯಾಗಿದೆ. ಹವಾಮಾನ ಇಲಾಖೆ ಪ್ರಕಾರ, ಕರಾವಳಿ ಕರ್ನಾಟಕ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಮಂಗಳವಾರ ಇಡೀ ದಿನ ಸಾಧಾರಣ ಮಳೆಯಾಗಲಿದ್ದು ಬುಧವಾರ ಮಳೆ ಕಡಿಮೆಯಾಗುವ ಸಾಧ್ಯತೆಯಿದೆ.


ಮಂಗಳೂರು ಹೊರವಲಯದ ಏರ್ಪೋರ್ಟ್ ಬಳಿಯ ಅದ್ಯಪಾಡಿಯಲ್ಲಿ ರನ್ ವೇಯಿಂದ ಮಳೆ ನೀರು ಹರಿದು ಕೆಳಭಾಗದ ಉಮಾನಾಥ ಸಾಲ್ಯಾನ್ ಎಂಬವರ ಮನೆಗೆ ನೀರು ನುಗ್ಗಿದೆ. ಮನೆಯ ಅಂಗಳದಲ್ಲಿ ಪೂರ್ತಿಯಾಗಿ ಮಣ್ಣು ಬಿದ್ದಿದೆ. ಬಜ್ಪೆ - ಅದ್ಯಪಾಡಿ ಸಂಪರ್ಕ ರಸ್ತೆಯ ಮೇಲೂ ಕೆಸರು ಮಣ್ಣು ಬಿದ್ದು ಸ್ಥಳೀಯರು ಸಂಕಷ್ಟಕ್ಕೀಡಾಗಿದ್ದಾರೆ. ಮಂಗಳೂರಿನ ಹಲವೆಡೆ ತಗ್ಗು ಪ್ರದೇಶಗಳಲ್ಲಿ ನೀರು ನುಗ್ಗಿದ್ದು ಜನರು ಬೆಳ್ಳಂಬೆಳಗ್ಗೆ ಕಷ್ಟ ಅನುಭವಿಸಿದ್ದಾರೆ.
ಉಡುಪಿಯಲ್ಲಿ ಬೈಂದೂರು, ಕುಂದಾಪುರ, ಹಾಲಾಡಿ, ಹೆಬ್ರಿ, ಕಾರ್ಕಳ, ಕೋಟ, ಸಾಲಿಗ್ರಾಮ, ಉಪ್ಪೂರು, ಬ್ರಹ್ಮಾವರ, ಹಿರಿಯಡ್ಕ, ಕಾಪು, ಕಟಪಾಡಿ, ಪಡುಬಿದ್ರಿ ಭಾಗದಲ್ಲಿ ಭಾರೀ ಮಳೆಯಾಗಿದೆ. ಪ್ರತಿಕೂಲ ಹವಾಮಾನದಿಂದಾಗಿ ಮಲ್ಪೆ ಬಂದರಿನಲ್ಲಿ ಬೋಟ್ಗಳು ಲಂಗರು ಹಾಕಿವೆ. ಮಂಗಳೂರು, ಉಡುಪಿ ಭಾಗದಲ್ಲಿ 20 ಸೆ.ಮೀ. ಹೆಚ್ಚು ಮಳೆಯಾಗಿದೆ. ಮಂಗಳೂರು 22, ಕಾರ್ಕಳ 26, ಕಾಪು ಹೆಜ್ಮಾಡಿಯಲ್ಲಿ 23 ಸೆ.ಮೀ ಮಳೆಯಾಗಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ತಮಿಳುನಾಡು ಕಡೆಯಿಂದ ದಕ್ಷಿಣ ಕರ್ನಾಟಕ, ಉತ್ತರ ಕೇರಳದ ಮೂಲಕ ಅರಬ್ಬಿ ಸಮುದ್ರದತ್ತ ಚಂಡಮಾರುತ ಹಾದು ಹೋಗಿರುವ ಚಿತ್ರಣವನ್ನು ಹವಾಮಾನ ಇಲಾಖೆ ನೀಡಿದೆ. ಇದರ ಪರಿಣಾಮವಾಗಿ ಕರಾವಳಿ ಪ್ರದೇಶದಲ್ಲಿ ಮಳೆಯಾಗುತ್ತಿದೆ. ಉತ್ತರ ಕೇರಳದ ಐದು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಭಾರೀ ಮಳೆಯಿಂದಾಗಿ ಮಂಗಳೂರು ದಕ್ಕೆಯಲ್ಲಿ ನಿಲ್ಲಿಸಿದ್ದ ಪರ್ಶಿನ್ ಬೋಟ್ ಗಳಿಗೂ ಹಾನಿಯಾಗಿದೆ. ಚಂಡಮಾರುತದ ಅಬ್ಬರಕ್ಕೆ 10ಕ್ಕೂ ಹೆಚ್ಚು ಬೋಟ್ ನೀರುಪಾಲಾಗಿದೆ.
Cyclone Fengal, Torrential rains put Kerala Karnataka on edge,
Five districts of Karnataka locks down its schools. Cyclone Fengal, now weakened into a low-pressure area, continues to wreak havoc with heavy rainfall and disruptions across south India. The India Meteorological Department (IMD) has warned of intensified rainfall in Kerala as the system shifts toward the Arabian Sea near the Kerala and Karnataka coasts by December 3.
26-05-26 11:03 pm
HK News Desk
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 09:02 pm
HK News Staffer
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm