ಬ್ರೇಕಿಂಗ್ ನ್ಯೂಸ್
08-12-24 09:18 pm Mangalore Correspondent ಕರಾವಳಿ
ಮಂಗಳೂರು, ಡಿ.8: ಬಂಗಾಳ ಕೊಲ್ಲಿಯಲ್ಲಿ ಕಾಣಿಸಿಕೊಂಡಿದ್ದ ಫೆಂಗಲ್ ಚಂಡಮಾರುತ ಅಬ್ಬರಕ್ಕೆ ದಕ್ಷಿಣ ಕರ್ನಾಟಕ ಹಾಗೂ ಕರಾವಳಿ ಜನ ಕಂಗಾಲಾಗಿದ್ದರು. ಒಮ್ಮಿಂದೊಮ್ಮೆಲೇ ಭಾರೀ ಮಳೆಯಾಗಿದ್ದು ಇಡೀ ಮಳೆಗಾಲದ ಮಳೆಯನ್ನು ಒಂದೇ ದಿನ ಅನುಭವಿಸಿದ್ದೂ ಆಗಿತ್ತು. ಇದೀಗ ಮತ್ತೆ ಚಂಡಮಾರುತ ಕಾಣಿಸುವ ಬಗ್ಗೆ ಸೂಚನೆ ನೀಡಲಾಗಿದ್ದು ಮುಂದಿನ ಎರಡು ವಾರಗಳಲ್ಲಿ ಮತ್ತೊಮ್ಮೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಹವಾಮಾನ ತಜ್ಞ ಶ್ರೀನಿವಾಸ್ ರೆಡ್ಡಿ ಈ ಬಗ್ಗೆ ಮಾಹಿತಿ ನೀಡಿದ್ದು, ಮುಂದಿನ 10 ದಿನದಲ್ಲಿ ಬಂಗಾಳಕೊಲ್ಲಿಯಲ್ಲಿ ಎರಡು ಬಾರಿ ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆ ಇದ್ದು, ಇದರ ಪ್ರಭಾವದಿಂದ ರಾಜ್ಯದಲ್ಲೂ ಮಳೆಯಾಗಲಿದೆ ಎಂದು ತಿಳಿಸಿದ್ದಾರೆ.
ಡಿಸೆಂಬರ್ ಆರಂಭದಲ್ಲಿ ತಮಿಳುನಾಡಿನಿಂದ ಕರ್ನಾಟಕಕ್ಕೆ ಎಂಟ್ರಿ ಕೊಟ್ಟ ಫೆಂಗಲ್ ಚಂಡಮಾರುತವು ಅರಬ್ಬಿ ಸಮುದ್ರದತ್ತ ಹಾದುಹೋಗಿತ್ತು. ಅಪರೂಪ ಎನ್ನುವಂತೆ ಮಾರುತ ನಿಧಾನ ಗತಿಯಲ್ಲಿ ಸಾಗಿದ್ದರಿಂದ ದಕ್ಷಿಣ ಕರ್ನಾಟಕ ಜಿಲ್ಲೆಗಳು, ಕರಾವಳಿಯ ಮೂರು ಜಿಲ್ಲೆಗಳಲ್ಲಿ ಸಿಡಿಲು ಮಳೆಯಾಗಿತ್ತು. ಫೆಂಗಲ್ ಚಂಡಮಾರುತದ ಹಾನಿಯಿಂದ ಜನ ಸುಧಾರಿಸುತ್ತಿರುವಾಗಲೇ ಮತ್ತೆ ಎರಡು ಸೈಕ್ಲೋನ್ ಸೃಷ್ಟಿಯಾಗಲಿದೆ ಎಂದು ಹೇಳಿರುವುದು ಆತಂಕ ಮೂಡಿಸಿದೆ.
ಬಂಗಾಳಕೊಲ್ಲಿಯಲ್ಲಿ ಮತ್ತೆ ವಾಯುಭಾರ ಕುಸಿತ ಉಂಟಾಗಲಿದ್ದು, ಇದರಿಂದ ದಕ್ಷಿಣ ಒಳನಾಡಿನ ಬಹುತೇಕ ಎಲ್ಲಾ ಜಿಲ್ಲೆಗಳು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಡಿಸೆಂಬರ್ 14 ಮತ್ತು 15 ರಂದು ಮಳೆಯಾಗಲಿದೆ. 2ನೇ ವಾಯುಭಾರ ಕುಸಿತವು ಡಿಸೆಂಬರ್ 16ಕ್ಕೆ ಉಂಟಾಗಲಿದ್ದು, ಡಿಸೆಂಬರ್ 17 - 18ಕ್ಕೆ ಜೋರು ಮಳೆಯಾಗಲಿದೆ ಎಂದು ಹವಾಮಾನ ತಜ್ಞರು ಮಾಹಿತಿ ನೀಡಿದ್ದಾರೆ.
The people of South Karnataka and the coastal areas were devastated by the storm of Cyclone Fangal, which had formed in the Bay of Bengal. It rained heavily all at once, and experienced the rain of the entire monsoon season in a single day.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm