ಬ್ರೇಕಿಂಗ್ ನ್ಯೂಸ್
09-12-24 03:11 pm Mangalore Correspondent ಕರಾವಳಿ
ಉಳ್ಳಾಲ, ಡಿ.9: ರಾಷ್ಟ್ರೀಯ ಹೆದ್ದಾರಿ 66ರ ಕೋಟೆಕಾರು, ಉಚ್ಚಿಲದಲ್ಲಿ ಚಲಿಸುತ್ತಿದ್ದ ಟ್ಯಾಂಕರ್ ಒಂದರಲ್ಲಿ ತಾಂತ್ರಿಕ ದೋಷದಿಂದಾಗಿ ಹೈಡ್ರೋ ಕ್ಲೋರಿಕ್ ಆಸಿಡ್ ಸೋರಿಕೆಯಾಗಿದ್ದು, ಸ್ಥಳದಲ್ಲಿ ಉಳ್ಳಾಲ, ಮಂಗಳೂರು ದಕ್ಷಿಣ ಸಂಚಾರಿ ಪೊಲೀಸರು ಬೀಡುಬಿಟ್ಟಿದ್ದಾರೆ. ಎಂಆರ್ ಪಿಎಲ್ ತಜ್ಞರ ತಂಡ ಮತ್ತು ಅಗ್ನಿಶಾಮಕ ದಳದವರು ಸ್ಥಳಕ್ಕೆ ದೌಡಾಯಿಸಿದ್ದಾರೆ.
ಕಾರವಾರದಿಂದ ಕೊಚ್ಚಿಗೆ ಹೈಡ್ರೋ ಕ್ಲೋರಿಕ್ ಆಸಿಡ್ ಹೊತ್ತೊಯ್ಯುತ್ತಿದ್ದ ಟ್ಯಾಂಕರಿನಲ್ಲಿ ತಾಂತ್ರಿಕ ದೋಷದಿಂದ ಆಸಿಡ್ ಸೋರಿಕೆಯುಂಟಾಗಿದೆ. ಟ್ಯಾಂಕರ್ ನಿಂದ ಅನಿಲ ಸೋರಿಕೆಯಾಗುವುದನ್ನು ಗಮನಿಸಿದ ಚಾಲಕ ಹೆದ್ದಾರಿ ಬಳಿ ಟ್ಯಾಂಕರನ್ನು ನಿಲ್ಲಿಸಿದ್ದಾರೆ. ತಕ್ಷಣ ಪೊಲೀಸರಿಗೆ ಸ್ಥಳೀಯರು ಮಾಹಿತಿ ನೀಡಿದ್ದಾರೆ. ಆಸಿಡ್ ಸೋರಿಕೆಯಿಂದ ಶ್ವಾಸಕೋಶದ ತೊಂದರೆಯುಂಟಾಗುವ ಸಾಧ್ಯತೆಯಿದ್ದು, ಸ್ಥಳದಲ್ಲಿ ಅಗ್ನಿ ಶಾಮಕದಳ, ಉಳ್ಳಾಲ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಟ್ಯಾಂಕರನ್ನು ಸ್ಥಳೀಯ ನಿರ್ಮಾಣ ಹಂತದ ಪೆಟ್ರೋಲ್ ಬಂಕ್ ಬಳಿ ನಿಲ್ಲಿಸಿದ್ದು ,ಅನಿಲ ಸೋರಿಕೆ ಭಾಗಕ್ಕೆ ಎಮ್ಸಿಲ್ ಅಂಟಿಸಿದರೂ ಸೋರಿಕೆ ಮುಂದುವರಿದಿದ್ದು ಎಂಆರ್ ಪಿಎಲ್ ತಜ್ಞರ ತಂಡವನ್ನ ಸ್ಥಳಕ್ಕೆ ಕರೆಸಲಾಗಿದೆ.
ಹೆದ್ದಾರಿಯಲ್ಲಿ ವಾಹನ ಸಂಚಾರ ಯಥಾಸ್ಥಿತಿಯಲ್ಲಿದ್ದು, ಯಾವುದೇ ಸೂಚನೆಗಳನ್ನು ಸಂಬಂಧ ಪಟ್ಟ ಇಲಾಖೆ ಈವರೆಗೆ ಸ್ಥಳೀಯರಿಗೆ, ವಾಹನ ಸವಾರರಿಗೆ ನೀಡಿಲ್ಲ. ಏಸಿಡ್ ಸೋರಿಕೆಯಾದರೂ, ಬೆಂಕಿ ಹತ್ತಿಕೊಳ್ಳುವ ಸಾಧ್ಯತೆ ಕಡಿಮೆ ಇರುವುದರಿಂದ ಪೊಲೀಸರು ಗಂಭೀರ ವಹಿಸಿದಂತಿಲ್ಲ. ಸದ್ಯ ಟ್ಯಾಂಕರನ್ನು ಎಂಆರ್ ಪಿಎಲ್ ಪೆಟ್ರೋಲ್ ಪಂಪ್ ಬಳಿ ನಿಲ್ಲಿಸಿರುವುದಾಗಿ ಉಳ್ಳಾಲ ತಹಸೀಲ್ದಾರ್ ತಿಳಿಸಿದ್ದಾರೆ.
Mangalore Gas tanker faces leakage of Hydrochloric acid at kotekar, MRPL team arrives, major accident averted
04-05-25 09:55 pm
HK News Desk
ಸಿಇಟಿ ಬಳಿಕ ನೀಟ್ ಪರೀಕ್ಷೆಗೂ ಜನಿವಾರಕ್ಕೆ ಕತ್ತರಿ !...
04-05-25 09:26 pm
ಹಿಮಾಲಯ - ದೆಹಲಿಗೆ ಸುನಾಮಿ, ಮಹಾನ್ ನಾಯಕರ ದುರ್ಮರಣ...
04-05-25 09:15 pm
Bangalore Girl Naked, HSR Layout: ಬೆಂಗಳೂರಿನಲ್...
04-05-25 02:27 pm
Suhas Shetty Murder, Parameshwar: ಸುಹಾಸ್ ಶೆಟ್...
04-05-25 01:18 pm
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
04-05-25 11:26 pm
Mangalore Correspondent
Mangalore, Hate speech, BJP MLA Harish Poonja...
04-05-25 08:49 pm
Minister Gundu Rao, Mangalore: ಮುಸ್ಲಿಂ ಮುಖಂಡರ...
04-05-25 08:39 pm
Mp Brijesh Chowta, Suhas Shetty Murder: ಆ್ಯಂಟ...
03-05-25 10:57 pm
ಬಜರಂಗಿ ಸುಹಾಸ್ ಶೆಟ್ಟಿ ಹತ್ಯೆಗೆ ಕಳಸದವರು ಬಂದಿದ್ದೇ...
03-05-25 10:43 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm