ಬ್ರೇಕಿಂಗ್ ನ್ಯೂಸ್
11-12-24 06:51 pm Mangalore Correspondent ಕರಾವಳಿ
ಉಳ್ಳಾಲ, ಡಿ.11: ಸೋಮೇಶ್ವರ ಕಡಲ ತೀರದ ರುದ್ರಪಾದೆಯಲ್ಲಿ ಪರ್ಸ್, ಚಪ್ಪಲ್, ಕೂಲಿಂಗ್ ಗ್ಲಾಸ್ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಸಮುದ್ರದಲ್ಲಿ ಪತ್ತೆಯಾಗಿದೆ.
ಮಂಗಳೂರಿನ ಪಡೀಲು ವೀರನಗರ ನಿವಾಸಿ ಉದಯ್ ಕುಮಾರ್ (46) ಸಾವನ್ನಪ್ಪಿದ ದುರ್ದೈವಿ. ಉದಯ್ ಅವರು ಬುಧವಾರ ಮಧ್ಯಾಹ್ನ ಸೋಮೇಶ್ವರ ಸೋಮನಾಥ ಕ್ಷೇತ್ರದ ಮುಂದುಗಡೆ ತನ್ನ ಆಕ್ಟಿವಾ ಸ್ಕೂಟರನ್ನ ನಿಲ್ಲಿಸಿ ಸಮುದ್ರ ತೀರದ ರುದ್ರಪಾದೆಯತ್ತ ತೆರಳಿದ್ದಾರೆ.



ರುದ್ರಪಾದೆಯಲ್ಲಿ ಪರ್ಸ್, ಚಪ್ಪಲ್, ಕೂಲಿಂಗ್ ಗ್ಲಾಸನ್ನ ಬಿಟ್ಟು ನಾಪತ್ತೆಯಾಗಿದ್ದರು. ಬೀಚಲ್ಲಿ ಸುತ್ತಾಡುತ್ತಿದ್ದ ಹುಡಗನೋರ್ವನು ರುದ್ರಪಾದೆಯಲ್ಲಿದ್ದ ಪರ್ಸನ್ನು ಸ್ಥಳೀಯ ಗೂಡಂಗಡಿ ಮಾಲಕರಲ್ಲಿ ನೀಡಿದ್ದಾನೆ. ಗೂಡಂಗಡಿ ಮಾಲೀಕರು ಪೊಲೀಸರಿಗೆ ವಿಚಾರ ತಿಳಿಸಿದ್ದಾರೆ. ಕರಾವಳಿ ಕಾವಲು ಪಡೆಯ ಜೀವರಕ್ಷಕ ಸಿಬ್ಬಂದಿ ಸೇರಿದಂತೆ ಸ್ಥಳೀಯ ಈಜುಗಾರರು ಉದಯ್ ಅವರನ್ನ ಸಮುದ್ರದಲ್ಲಿ ರಬ್ಬರ್ ಟ್ಯೂಬ್ ಮೂಲಕ ಶೋಧಿಸಿದ್ದಾರೆ.
ಸಂಜೆ ವೇಳೆ ಸೋಮೇಶ್ವರ ಕಡಲ ಕಿನಾರೆಯ ಅಲಿಮಕಲ್ಲು ಎಂಬಲ್ಲಿ ಉದಯ್ ಅವರ ಮೃತದೇಹ ಪತ್ತೆಯಾಗಿದ್ದು ಸ್ಥಳೀಯರು ಶವವನ್ನ ಎಳೆದು ಮೇಲಕ್ಕೆ ಹಾಕಿದ್ದಾರೆ. ಮೇಲ್ನೋಟಕ್ಕೆ ಉದಯ್ ರುದ್ರಪಾದೆಯಿಂದ ಸಮುದ್ರಕ್ಕೆ ಹಾರಿ ಆತ್ಮಹತ್ಯೆ ಮಾಡಿದ್ದಾರೆ ಎನ್ನಲಾಗುತ್ತಿದ್ದು ಉಳ್ಳಾಲ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಶವವನ್ನು ಮರಣೋತ್ತರ ಪರೀಕ್ಷೆಗಾಗಿ ವೆನ್ಲಾಕ್ ಆಸ್ಪತ್ರೆಗೆ ಒಯ್ದಿದ್ದಾರೆ.
ಮೃತ ಉದಯ್ ಅವರು ಪದವಿನಂಗಡಿಯಲ್ಲಿ ಕಟ್ಟಡ ಕಾಮಗಾರಿಯ ಬಿಡಿಭಾಗಗಳ ಮಾರಾಟದ ಅಂಗಡಿ ಹೊಂದಿದ್ದರು. ಮೃತರು ತಂದೆ, ತಾಯಿ, ಪತ್ನಿ, ಏಕೈಕ ಪುತ್ರನನ್ನ ಅಗಲಿದ್ದಾರೆ.
Mangalore Padil man missing found dead at Someshwar Beach in Ullal. The diseased has been identified as Uday Kumar from padil.
08-09-26 02:24 pm
HK News Staffer
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 05:20 pm
HK News Staffer
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
08-09-26 09:19 pm
HK News Staffer
ಮಂಗಳೂರು ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ; ಪೊಲೀಸ...
08-09-26 08:45 pm
ಪುತ್ತೂರು ಜನಸೇವಾ ಕೇಂದ್ರ ಗಲಾಟೆ ಪ್ರಕರಣ: ಪೊಲೀಸರ ಕ...
08-09-26 02:26 pm
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am