ಬ್ರೇಕಿಂಗ್ ನ್ಯೂಸ್
17-12-24 01:55 pm Mangaluru correspondent ಕರಾವಳಿ
ಮಂಗಳೂರು, ಡಿ.17: ಜನಪರ ಸಂಘಟನೆಗಳು ಹಮ್ಮಿಕೊಳ್ಳುವ ಧರಣಿ, ಪ್ರತಿಭಟನೆಗಳಿಗೆ ನಿಯಮಗಳನ್ನು ಮೀರಿ ನಿರ್ಬಂಧ ಹೇರುವ, ಹೋರಾಟಗಾರರ ಮೇಲೆ ದುರುದ್ದೇಶದಿಂದ ಎಫ್ಐಆರ್ ದಾಖಲಿಸುತ್ತಿರುವ ಮಂಗಳೂರು ನಗರ ಪೊಲೀಸ್ ಕಮೀಷನರ್ ಅನುಪಮ್ ಅಗರ್ವಾಲ್ ಅವರನ್ನು ಅಮಾನತುಗೊಳಿಸಬೇಕು, ಅವರ ಮೇಲಿನ ಆರೋಪಗಳ ಕುರಿತು ಇಲಾಖಾ ತನಿಖೆ ಕೈಗೊಳ್ಳಬೇಕು, ಮಂಗಳೂರು ಕಮೀಷನರೇಟ್ ವ್ಯಾಪ್ತಿಯಲ್ಲಿ ಈ ಹಿಂದಿನಂತೆ ಧರಣಿ, ಪ್ರತಿಭಟನೆಗಳಿಗೆ ಮುಕ್ತ ಅವಕಾಶ ಒದಗಿಸಬೇಕು ಎಂದು ಒತ್ತಾಯಿಸಿ ಡಿಸೆಂಬರ್ 23 ರಂದು ಬೆಳಗ್ಗೆ 10 ರಿಂದ ಅಪರಾಹ್ನ 1 ಗಂಟೆ ವರೆಗೆ ಬೃಹತ್ ಸಾಮೂಹಿಕ ಧರಣಿ ಹಮ್ಮಿಕೊಳ್ಳಲಾಗಿದೆ ಎಂದು ದ.ಕ.ಜಿಲ್ಲಾ ಜಾತ್ಯಾತೀತ ಪಕ್ಷಗಳು ಹಾಗೂ ಸಂಘಟನೆಗಳ ಜಂಟಿ ವೇದಿಕೆ ಪ್ರಕಟನೆಯಲ್ಲಿ ತಿಳಿಸಿದೆ.
ಕಮಿಷನರ್ ಅಗರ್ವಾಲ್ ಜನಪರ ಸಂಘಟನೆಗಳು, ಜನ ಸಾಮಾನ್ಯರ ಬೇಡಿಕೆಗಳ ಮೇಲಿನ ಹೋರಾಟಗಳ ಕುರಿತು ಪೂರ್ವಾಗ್ರಹಗಳನ್ನು ಹೊಂದಿದ್ದಾರೆ, ತಿರಸ್ಕಾರ ಮನೋಭಾವವನ್ನು ಪ್ರದರ್ಶಿಸುತ್ತಿದ್ದಾರೆ. ನೆಪಗಳನ್ನು ಮುಂದಿಟ್ಟು ಧರಣಿ, ಪ್ರತಿಭಟನೆಗಳಿಗೆ ಅನುಮತಿ ನಿರಾಕರಿಸುತ್ತಿದ್ದಾರೆ. ಸರಕಾರದ ಯಾವುದೇ ಆದೇಶ ಇಲ್ಲದಿದ್ದರೂ ಧರಣಿ, ಪ್ರತಿಭಟನೆಗಳು ಮಂಗಳೂರು ಮಿನಿ ವಿಧಾನ ಸೌಧದ ಮುಂಭಾಗ ಮಾತ್ರ ನಡೆಸಬೇಕು ಎಂದು ಸರ್ವಾಧಿಕಾರಿಯಂತೆ ಆದೇಶಿಸುತ್ತಿದ್ದಾರೆ.
ಧರಣಿ ನಿರತರ ಮೇಲೆ ಎಫ್ಐಆರ್ ಗಳನ್ನು ಹಾಕುತ್ತಿದ್ದಾರೆ. ಮತ್ತು ಇಂತಹ ನಿರ್ಬಂಧಗಳು, ನಿಷೇಧಗಳನ್ನು ಜನಪರ, ಜಾತ್ಯತೀತ ಸಂಘಟನೆಗಳಿಗಷ್ಟೆ ಸೀಮಿತಗೊಳಿಸುತ್ತಿದ್ದಾರೆ. ಬಲಪಂಥೀಯ ಸಂಘಟನೆಗಳಿಗೆ ಇಂತಹ ಯಾವುದೇ ನಿರ್ಬಂಧಗಳನ್ನು ವಿಧಿಸದೆ ಬಹಿರಂಗ ತಾರತಮ್ಯ ಅನುಸರಿಸುತ್ತಿದ್ದಾರೆ. ಇದಲ್ಲದೆ, ಮಂಗಳೂರು ನಗರ ಕಮಿಷನರೇಟ್ ವ್ಯಾಪ್ತಿಯಲ್ಲಿ ಅಕ್ರಮ ಮರಳುಗಾರಿಕೆ, ಜೂಜು, ಗ್ಯಾಂಬ್ಲಿಂಗ್ ಗಳಿಗೆ ಮುಕ್ತ ಅವಕಾಶ ಒದಗಿಸಿದ್ದಾರೆ.
ಇಂತಹ ಜನ ವಿರೋಧಿ, ಸರ್ವಾಧಿಕಾರಿ ಪೊಲೀಸ್ ಕಮೀಷನರ್ ರನ್ನು ತಕ್ಷಣ ಅಮಾನತುಗೊಳಿಸಿ ತನಿಖೆಗೆ ಒಳಪಡಿಸಬೇಕು ಎಂದು ಹಲವು ಹಂತದ ಹೋರಾಟಗಳನ್ನು ನಡೆಸಲಾಗಿದೆ. ಆದರೂ, ಯಾವುದೇ ಕ್ರಮಗಳನ್ನು ಕೈಗೊಳ್ಳದಿರುವುದರಿಂದ ಹೋರಾಟ ತೀವ್ರಗೊಳಿಸಲು ಜಂಟಿ ವೇದಿಕೆ ತೀರ್ಮಾನಿಸಿದೆ. ಅದರ ಭಾಗವಾಗಿ ಡಿಸೆಂಬರ್ 23 ರಂದು ಮಂಗಳೂರು ಮಿನಿ ವಿಧಾನಸೌಧದ ಮುಂಭಾಗ ದಲಿತ, ರೈತ, ಕಾರ್ಮಿಕ. ಮಹಿಳಾ, ಯುವಜನ ಸಂಘಟನೆಗಳೂ ಒಳಗೊಂಡು ಇಪ್ಪತ್ತೈದಕ್ಕೂ ಹೆಚ್ಚು ಸಮಾನ ಮನಸ್ಕ ಸಂಘಟನೆಗಳ ಸಹಭಾಗಿತ್ವದಲ್ಲಿ ಬೃಹತ್ ಧರಣಿ ಹಮ್ಮಿಕೊಳ್ಳಲಾಗಿದೆ, ಜಿಲ್ಲೆಯ ಎಲ್ಲ ತಾಲೂಕುಗಳಿಂದ ನೂರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ದ.ಕ. ಜಿಲ್ಲಾ ಜಾತ್ಯಾತೀತ ಪಕ್ಷಗಳು ಹಾಗೂ ಸಂಘಟನೆಗಳ ಜಂಟಿ ವೇದಿಕೆ ತಿಳಿಸಿದೆ.
Massive protest to be held against mangalore police commissioner Anupam Agarwal on Dec 23 by Like Minded organisation's demanding his suspension. IPS Anupam Agarwa has been alleged of corruption and Hitler rule by Dfyi. The organisation's now demand enquiry against commissioner.
02-02-26 05:12 pm
Bangalore Correspondent
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
ಮಾವನ ಮಗನ ಜೊತೆ ಎಂಗೇಜ್ಮೆಂಟ್ ; ಮದುವೆಗೆ ತಿಂಗಳು...
02-02-26 03:02 pm
ತಾಯಿ ದುಡುಕುತನಕ್ಕೆ ಮೂರು ಕಂದಮ್ಮಗಳು ಬಲಿ ! ಅತ್ತೆ...
02-02-26 12:18 pm
FM Sitharaman, Mohandas Pai, PM Modi, C.J. Ro...
31-01-26 11:05 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
02-02-26 05:09 pm
Mangalore Correspondent
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm