ಬ್ರೇಕಿಂಗ್ ನ್ಯೂಸ್
22-12-24 06:04 pm Udupi Correspondent ಕರಾವಳಿ
ಕುಂದಾಪುರ, ಡಿ.22: ಸಮುದ್ರದಲ್ಲಿ ಪ್ರವಾಸಿಗರನ್ನು ವಿಹಾರ ಕರೆದೊಯ್ಯತ್ತಿದ್ದ ಜೆಟ್ ಸ್ಕೀ ಬೋಟ್ ಪಲ್ಟಿಯಾದ ಘಟನೆ ತ್ರಾಸಿ ಕಡಲ ಕಿನಾರೆಯಲ್ಲಿ ನಡೆದಿದ್ದು ಅದರಲ್ಲಿದ್ದ ರೈಡರ್ ಸಮುದ್ರಪಾಲಾಗಿದ್ದಾನೆ.
ಸಮುದ್ರಕ್ಕೆ ಬಿದ್ದ ಜೆಟ್ ಸ್ಕೀ ರೈಡರ್ ಅನ್ನು ರೋಹಿದಾಸ್ ಅಲಿಯಾಸ್ ರವಿ (45) ಎಂದು ಗುರುತಿಸಲಾಗಿದೆ. ಇವರ ಜೊತೆ ರೈಡ್ ಗೆ ತೆರಳಿದ್ದ ಬೆಂಗಳೂರಿನ ಪ್ರವಾಸಿಗನನ್ನು ರಕ್ಷಿಸಲಾಗಿದೆ. ತ್ರಾಸಿ ಕಡಲ ಕಿನಾರೆಯಲ್ಲಿ ಕಾರ್ಯಾಚರಿಸುತ್ತಿರುವ ಬೆಳುಗಾ ವಾಟರ್ ಸ್ಪೋರ್ಟ್ಸ್‌ನ ಜೆಟ್ ಸ್ಕೀ ಬೋಟ್‌ನಲ್ಲಿ ಓರ್ವ ಪ್ರವಾಸಿಗನನ್ನು ಕೂರಿಸಿಕೊಂಡು ಸಮುದ್ರದಲ್ಲಿ ವಿಹಾರ ನಡೆಸುತ್ತಿದ್ದಾಗ ಘಟನೆ ನಡೆದಿದೆ. ಈ ವೇಳೆ ರೈಡರ್ ನಿಯಂತ್ರಣ ತಪ್ಪಿ ಜೆಟ್ ಸ್ಕೀ ಮಗುಚಿ ಬಿದ್ದಿತ್ತು. ರೈಡ್‌ಗೂ ಮೊದಲು ಪ್ರವಾಸಿಗರಿಗೆ ಲೈಫ್ ಜಾಕೆಟ್ ಹಾಕಿ ಸುರಕ್ಷತಾ ಕ್ರಮ ವಹಿಸಿದ್ದರಿಂದ ಆತ ನೀರಿನಲ್ಲಿ ತೇಲಿದ್ದು ರಕ್ಷಣೆ ಮಾಡಲಾಗಿದೆ.
ಮುರ್ಡೇಶ್ವರ ನಿವಾಸಿಯಾದ ರೋಹಿದಾಸ್ ತ್ರಾಸಿಯಲ್ಲಿಯೇ ವಾಸಿಸುತ್ತಿದ್ದು, ಜೆಟ್ ಸ್ಕೀ ಮತ್ತಿತರ ಬೋಟ್ ರೈಡ್ ಕೆಲಸ ಮಾಡಿಕೊಂಡಿದ್ದರು. ನಾಪತ್ತೆಯಾದ ರವಿದಾಸ್ ಅವರ ಶೋಧ ಕಾರ್ಯ ನಡೆಯುತ್ತಿದ್ದು ಗಂಗೊಳ್ಳಿ ಪೊಲೀಸರು ಹಾಗೂ ಕರಾವಳಿ ಪೊಲೀಸ್ ಪಡೆ ಮತ್ತು ಸ್ಥಳೀಯರು ಶೋಧ ಕಾರ್ಯದಲ್ಲಿ ನಿರತರಾಗಿದ್ದಾರೆ. ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A jet ski boat carrying a tourist capsized, leading to two people falling into the sea, and the jet ski rider going missing in an incident that occurred at Trasi Beach on Saturday evening. The missing rider has been identified as Rohidas alias Ravi (45), while the tourist from Bengaluru was rescued.
01-08-25 11:34 pm
Mangaluru Correspondent
‘Comedy Kiladigalu’, Chandrashekhar Siddi Sui...
01-08-25 10:45 pm
Kannada Producer Ganesh, Film Dharmasthala Fi...
01-08-25 09:09 pm
Rape Case, Prajwal Revanna Verdict : ಮೈಸೂರಿನ...
01-08-25 02:55 pm
ಧರ್ಮ 'ಸ್ಥಳ' ಕೇಸ್ ; ಪಾಯಿಂಟ್ ನಂ.1ರಲ್ಲಿ ಸಿಕ್ಕ...
01-08-25 01:31 pm
01-08-25 10:48 pm
HK News Desk
ಭಾರತ, ರಷ್ಯಾದ್ದು ಸತ್ತ ಆರ್ಥಿಕತೆ, ಒಟ್ಟಿಗೇ ನಾಶವಾಗ...
01-08-25 11:44 am
2008ರ ಮಾಲೆಗಾಂವ್ ಸ್ಫೋಟ ಪ್ರಕರಣ ; ಸಾಧ್ವಿ ಪ್ರಜ್ಞ...
31-07-25 10:08 pm
Trump, Modi, Export Tariff: ಸ್ನೇಹಿತ ಎನ್ನುತ್ತಲ...
31-07-25 09:51 am
ಪಾಕಿಸ್ತಾನದ ಡಿಜಿಎಂಒ ಕರೆ ಮಾಡಿ ದಾಳಿ ನಿಲ್ಲಿಸಲು ಮನ...
30-07-25 09:06 am
02-08-25 10:51 pm
Mangalore Correspondent
Kallapu Highway News; ಕಲ್ಲಾಪು ಹೆದ್ದಾರಿಯಲ್ಲಿ ಬ...
02-08-25 03:51 pm
Inspector Manjunath Gowda, SIT, Dharmasthala:...
02-08-25 02:31 pm
Dharmasthala Case, UDR, SIT Police News; ಧರ್ಮ...
02-08-25 01:46 pm
Kerala Comes to Mangalore: Feast at Coral, Th...
02-08-25 01:40 pm
02-08-25 10:04 pm
Giridhar Shettt, Mangaluru
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm
Mangalore CCB Police, Drugs: ಆಂಧ್ರಪ್ರದೇಶದಿಂದ...
01-08-25 05:05 pm
13 ವರ್ಷದ ಬಾಲಕನ ಕಿಡ್ನಾಪ್ ; 5 ಲಕ್ಷ ರೂ. ಹಣ ತರುವಷ...
01-08-25 04:27 pm