ಬ್ರೇಕಿಂಗ್ ನ್ಯೂಸ್
22-12-24 11:03 pm Mangalore Correspondent ಕರಾವಳಿ
ಮಂಗಳೂರು, ಡಿ.22: ತಾನು ಲೋಕಾಯುಕ್ತ ಅಧಿಕಾರಿಯೆಂದು ಹೇಳಿ ಫೋನ್ ಮಾಡಿ, ಪ್ರಕರಣವನ್ನು ಹಣ ಕೊಟ್ಟರೆ ಮುಗಿಸುತ್ತೇನೆಂದು ನಂಬಿಸಿ ಹಣ ಪೀಕಿಸಲು ಯತ್ನಿಸಿದ ಘಟನೆ ಬಗ್ಗೆ ತನಿಖೆ ನಡೆಸಿದ ಉಳ್ಳಾಲ ಪೊಲೀಸರು ಆಂಧ್ರಪ್ರದೇಶ ಮೂಲದ ವ್ಯಕ್ತಿಯನ್ನು ಬಂಧಿಸಿದ್ದಾರೆ.
2024ರ ಎಪ್ರಿಲ್ 6ರಂದು ಸೋಮೇಶ್ವರ ಪುರಸಭೆಯ ರೆವಿನ್ಯೂ ಅಧಿಕಾರಿ ಪುರುಷೋತ್ತಮ ಎಂಬವರಿಗೆ ಕರೆ ಮಾಡಿದ್ದ ಅಪರಿಚಿತ ವ್ಯಕ್ತಿ ತಾನು ಮಂಗಳೂರು ಲೋಕಾಯುಕ್ತ ಇಲಾಖೆಯ ಅಧಿಕಾರಿ ಪ್ರಭಾಕರ ಎಂದು ಪರಿಚಯಿಸಿದ್ದ. ನಿಮ್ಮ ಮೇಲೆ ಭ್ರಷ್ಟಾಚಾರದ ಆರೋಪಗಳಿದ್ದು ಟೆಕ್ನಿಕಲ್ ಟೀಮ್ ಬರುವ ಮೊದಲು ಮಾತನಾಡಿ ಮುಗಿಸಿ ಬಿಡುವುದಾದರೆ ಮಾತುಕತೆ ಮಾಡಿ ಎಂದು ಹೇಳಿದ್ದ. ಪುರುಷೋತ್ತಮ ಅವರು ಮಂಗಳೂರು ಲೋಕಾಯುಕ್ತದಲ್ಲಿ ವಿಚಾರಿಸಿದಾಗ ಪ್ರಭಾಕರ ಎಂಬ ವ್ಯಕ್ತಿ ಇಲ್ಲವೆಂದು ತಿಳಿದುಬಂದಿತ್ತು. ಟ್ರು ಕಾಲರ್ ನಲ್ಲಿ ಪ್ರಭಾಕರ, ಲೋಕಾಯುಕ್ತ ಪಿಐ ಎಂದು ತೋರಿಸಿತ್ತು.
ಪುರಸಭೆಯಲ್ಲಿ ಆರೋಗ್ಯ ಇಲಾಖೆಯ ಇತರ ಅಧಿಕಾರಿಗಳಾದ ಲಿಲ್ಲಿ ನಾಯರ್ ಮತ್ತು ಕೃಷ್ಣ ಅವರಿಗು ಇದೇ ರೀತಿ ಬೆದರಿಕೆ ಕರೆಗಳು ಬಂದಿದ್ದವು. ಈ ಬಗ್ಗೆ ಅನುಮಾನಗೊಂಡ ಪುರುಷೋತ್ತಮ ಅವರು ಉಳ್ಳಾಲ ಠಾಣೆಗೆ ದೂರು ನೀಡಿದ್ದರು. ಪೊಲೀಸರು ಪ್ರಕರಣ ದಾಖಲಿಸಿ ತನಿಖೆಯನ್ನು ನಡೆಸಿದ್ದರು. ಇದೀಗ ಆರೋಪಿ ಆಂಧ್ರಪ್ರದೇಶದ ಸತ್ಯಸಾಯಿ ಜಿಲ್ಲೆಯ ನಿವಾಸಿ ಧನಂಜಯ ರೆಡ್ಡಿ ತೋಟಾ (31) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ಆರೋಪಿ ಇದೇ ಮಾದರಿಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ಠಾಣೆ ಮತ್ತು ಹೈದರಾಬಾದ್ ನಗರದ ಶಾಬಾದ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಧಿಕಾರಿಗಳನ್ನು ಬೆದರಿಸಿ ಹಣ ಕೀಳಲು ಯತ್ನಿಸಿದ ಬಗ್ಗೆ ಪ್ರಕರಣ ದಾಖಲಾಗಿತ್ತು. ಎಸಿಪಿ ಧನ್ಯ ನಾಯಕ್ ಸೂಚನೆಯಂತೆ ಉಳ್ಳಾಲ ಪಿಎಸ್ಐ ಸಂತೋಷ್ ಕುಮಾರ್ ಮತ್ತು ಸಿಬಂದಿ ತಾಂತ್ರಿಕ ಸಾಕ್ಷ್ಯದಿಂದ ಆರೋಪಿಯನ್ನು ಪತ್ತೆ ಮಾಡಿ ಅರೆಸ್ಟ್ ಮಾಡಿದ್ದಾರೆ.
Mangalore Andhra native arrested by ullal police after posing as Lokayukta officer. The arrested has been identified as Dhananajaya Reddy.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm