ಬ್ರೇಕಿಂಗ್ ನ್ಯೂಸ್
23-12-24 11:04 pm Mangalore Correspondent ಕರಾವಳಿ
ಮಂಗಳೂರು, ಡಿ.23: ಮಂಗಳೂರು ನಗರ ಪೊಲೀಸ್ ಕಮೀಷನರ್ ಅನುಪಮ್ ಅಗ್ರವಾಲ್ ಅಮಾನತಿಗೆ ಒತ್ತಾಯಿಸಿ ನಡೆಯುತ್ತಿರುವ ಹೋರಾಟ ಮತ್ತಷ್ಟು ತೀವ್ರಗೊಂಡಿದೆ. ಕಮಿಷನರ್ ಅಗ್ರವಾಲ್ ಅವರನ್ನು ಅಮಾನತುಗೊಳಿಸಬೇಕು, ಕಮಿಷನರೇಟ್ ವ್ಯಾಪ್ತಿಯಲ್ಲಿ ಈ ಹಿಂದಿನಂತೆ ಧರಣಿ, ಪ್ರತಿಭಟನೆಗಳಿಗೆ ಮುಕ್ತ ಅವಕಾಶ ಒದಗಿಸಬೇಕು ಎಂದು ಒತ್ತಾಯಿಸಿ ಮಂಗಳೂರು ಮಿನಿ ವಿಧಾನ ಸೌಧದ ಮುಂಭಾಗ ದ.ಕ. ಜಿಲ್ಲಾ ಜಾತ್ಯಾತೀತ ಪಕ್ಷಗಳು ಹಾಗೂ ಸಂಘಟನೆಗಳ ವತಿಯಿಂದ "ಸಾಮೂಹಿಕ ಧರಣಿ" ನಡೆಯಿತು. ಇಪ್ಪತ್ತಕ್ಕೂ ಹೆಚ್ಚು ಸಂಘಟನೆಗಳ ನೂರಾರು ಕಾರ್ಯಕರ್ತರು ಪಾಲ್ಗೊಂಡರು.
ಸಾಮೂಹಿಕ ಧರಣಿಯನ್ನು ಸಿಪಿಐಎಂ ದ.ಕ. ಜಿಲ್ಲಾ ಕಾರ್ಯದರ್ಶಿ ಮುನೀರ್ ಕಾಟಿಪಳ್ಳ ಉದ್ಘಾಟಿಸಿ ಮಾತನಾಡುತ್ತ, ಮಂಗಳೂರು ಪೊಲೀಸ್ ಕಮಿಷನರ್ ಅಮಾನತಿಗಾಗಿ ಒಂದು ತಿಂಗಳಿನಿಂದ ಪ್ರತಿಭಟನೆ ನಡೆಸುತ್ತಾ ಬಂದಿದ್ದೇವೆ. ರಾಜ್ಯ ಸರಕಾರ ನಮ್ಮ ಬೇಡಿಕೆಗೆ ಇನ್ನೂ ಸ್ಪಂದಿಸದಿರುವುದು ವಿಷಾದನೀಯ. ಇದು ಕಮೀಷನರ್ ಅಗ್ರವಾಲ್ ಜನಪರ ಹೋರಾಟಗಾರರ ಮೇಲೆ ಎಫ್ಐಆರ್ ಹಾಕಿದ್ದಾರೆ ಎಂಬ ತಕಾರಾರು ಅಷ್ಟೆ ಅಲ್ಲ. ಮಂಗಳೂರಿನಲ್ಲಿ ಯಾರ ಆಡಳಿತ ನಡೆಯುತ್ತಿದೆ ಎಂಬ ಪ್ರಶ್ನೆ ನಮ್ಮ ಮುಂದೆ ಇದೆ. ಬಿಜೆಪಿ, ಸಂಘ ಪರಿವಾರಗಳು ಹಮ್ಮಿಕೊಳ್ಳುವ ಪ್ರತಿಭಟನೆಗಳಿಗೆ, ದ್ವೇಷ ಭಾಷಣಗಳಿಗೆ ಅವಕಾಶ ಇರುವಾಗ, ಕೆಂದ್ರ ಸರಕಾರ, ಬಿಜೆಪಿಯ ಶಾಸಕ, ಸಂಸದರು, ನಗರ ಪಾಲಿಕೆಯ ವೈಫಲ್ಯಗಳ ವಿರುದ್ಧ ಪ್ರತಿಭಟನೆಗಳಿಗೆ ಯಾಕೆ ಅವಕಾಶ ನೀಡುವುದಿಲ್ಲ, ಅಂತಹ ಪ್ರತಿಭಟನೆಗಳ ಮೇಲೆ ಮಾತ್ರ ಎಫ್ಐಆರ್ ಹಾಕಲಾಗುತ್ತಿದೆ ಎಂಬುದು ನಮ್ಮ ಪ್ರಶ್ನೆ. ರಾಜ್ಯದ ಕಾಂಗ್ರೆಸ್ ಸರಕಾರದ ಧೋರಣೆಗಳಿಗೆ ವಿರುದ್ದವಾಗಿ ಕಮೀಷನರ್ ಅಗ್ರವಾಲ್ ನಡೆದುಕೊಳ್ಳುತ್ತಿರುವಾಗ, ಮಸಾಜ್ ಪಾರ್ಲರ್, ಅಕ್ರಮ ಮರಳುಗಾರಿಕೆ, ಗ್ಯಾಂಬ್ಲಿಂಗ್ ಗಳಿಗೆ ಮುಕ್ತ ಅವಕಾಶ ಕೊಟ್ಟು ರಾಜ್ಯ ಸರಕಾರದ ಗೌರವಕ್ಕೆ ಕಮೀಷನರ್ ಅಗರ್ವಾಲ್ ಮಸಿ ಬಳಿಯುತ್ತಿರುವಾಗ ಜಿಲ್ಲೆಯ ಕಾಂಗ್ರೆಸ್ ನಾಯಕರು ಯಾಕೆ ಮೌನ ವಹಿಸಿದ್ದಾರೆ, ಕಮೀಷನರ್ ಅವರ ಈ ನಡೆಯ ವಿರುದ್ಧ ಯಾಕೆ ಧ್ವನಿ ಎತ್ತುತ್ತಿಲ್ಲ ಎಂಬುದು ನಮ್ಮ ಪ್ರಶ್ನೆ ಎಂದು ಹೇಳಿದರು.
ಕಾಂಗ್ರೆಸ್ ರಾಜ್ಯ ವಕ್ತಾರ ಎಂ.ಜಿ ಹೆಗ್ಡೆ ಮಾತನಾಡಿ, ಕೋಮುವಾದಿ ಶಕ್ತಿಗಳನ್ನು ಹಿಮ್ಮೆಟ್ಟಿಸಲು ಜಾತ್ಯಾತೀತ ಚಳವಳಿಗಳು ಒಂದೇ ವೇದಿಕೆಯಡಿ ಜನಪರ ಹೋರಾಟಗಳನ್ನು ಸಂಘಟಿಸಬೇಕಿದೆ. ರಾಷ್ಟ್ರೀಯ ಹೆದ್ದಾರಿಗಳು ಮರಣದ ಹೆದ್ದಾರಿಗಳಾಗಿವೆ. ಟೋಲ್ ಕಟ್ಟಿ ಅಪಾಯಕಾರಿಯಾಗಿ ಸಂಚರಿಸುವ ಸ್ಥಿತಿ ಅವಿಭಜಿತ ಜಿಲ್ಲೆಯ ವಾಹನ ಸವಾರರಿಗೆ ಎದುರಾಗಿದೆ. ಇಂತಹ ಅವ್ಯವಸ್ಥೆಯ ವಿರುದ್ದ ಹೋರಾಟ ನಡೆಸಬಾರದು ಎಂದು ನಿರ್ಬಂಧಿಸುವುದು ಕಾಂಗ್ರೆಸ್ ಪಕ್ಷ ಒಪ್ಪುವುದಿಲ್ಲ. ಇಲ್ಲಿ ಧರಣಿ ಕೂತವರು ಕಾಂಗ್ರೆಸ್ ಪಕ್ಷದ ಜೊತೆಗೆ ಚುನಾವಣೆಯಲ್ಲಿ ಹೆಗಲು ಕೊಟ್ಟವರು, ಅವರ ಪರವಾಗಿ ನಾವು ನಿಲ್ಲುತ್ತೇವೆ ಎಂದು ಹೇಳಿದರು.
ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಓಸ್ವಾಲ್ಡ್ ಪ್ರಕಾಶ್ ಫೆರ್ನಾಂಡೀಸ್ ಮಾತನಾಡಿ, ಸರ್ವಾಧಿಕಾರಿ ಪ್ರಧಾನಿ ಮೋದಿಯವರನ್ನು ದೆಹಲಿಗೆ ಮುತ್ತಿಗೆ ಹಾಕಿ ಮಣಿಸಿದ್ದೇವೆ, ಮಂಗಳೂರಿನ ಸರ್ವಾಧಿಕಾರಿಯಾಗಲು ಹೊರಟಿರುವ ಅಗ್ರವಾಲ್ ರನ್ನು ಮಣಿಸುವುದು ಜನ ಚಳವಳಿಗಳಿಗೆ ದೊಡ್ಡ ಸವಾಲೇ ಅಲ್ಲ. ಅಗ್ರವಾಲ್ ವರ್ಗಾವಣೆ ಆಗದಿದ್ದಲ್ಲಿ ಇನ್ನಷ್ಟು ತೀವ್ರ ಹೋರಾಟ ನಡೆಸುವುದಾಗಿ ಎಚ್ಚರಿಸಿದರು.
ದಲಿತ ನಾಯಕ ಎಂ ದೇವದಾಸ್ ಮಾತನಾಡಿ, ಬಡವರ, ದಮನಿತರ ಹೋರಾಟಗಳನ್ನು ತಿರಸ್ಕಾರದಿಂದ ಕಂಡವರಿಗೆ ಪಾಠ ಕಲಿಸಲು ನಮಗೆ ತಿಳಿದಿದೆ, ಕಾಂಗ್ರೆಸ್ ಸರಕಾರ ಎಚ್ದೆತ್ತುಕೊಳ್ಳಬೇಕು ಎಂದು ಹೇಳಿದರು. ಪ್ರಾಂತ ರೈತ ಸಂಘದ ಕೆ ಯಾದವ ಶೆಟ್ಟಿ ಮಾತನಾಡಿ, ರಾಜ್ಯ ಸರಕಾರ ಅನುಪಮ್ ಅಗ್ರವಾಲ್ ವಿರುದ್ಧ ಕ್ರಮ ಕೈಗೊಳ್ಳದಿದ್ದಲ್ಲಿ ಹೋರಾಟ ತೀವ್ರಗೊಳ್ಳಲಿದೆ. ಜನವರಿ ಎರಡನೇ ವಾರದಲ್ಲಿ ಸಾವಿರಾರು ಜನರು ಸೇರಿ ಕಮೀಷನರ್ ಕಚೇರಿಗೆ ಮಾರ್ಚ್ ನಡೆಸುತ್ತೇವೆ ಎಂದು ಎಚ್ಚರಿಸಿದರು.
ದಲಿತ ಸಂಘರ್ಷ ಸಮಿತಿಯ ರಘು ಎಕ್ಕಾರು, ಶೇಖರ ಹೆಜಮಾಡಿ, ಕಾರ್ಮಿಕ ನಾಯಕರಾದ ವಸಂತ ಆಚಾರಿ, ಸುಕುಮಾರ ತೊಕ್ಕೊಟ್ಟು, ಜನವಾದಿ ಮಹಿಳಾ ಸಂಘಟನೆಯ ರಮಣಿ ಮೂಡಬಿದ್ರೆ ಸಭೆಯನ್ನುದ್ದೇಶಿಸಿ ಮಾತನಾಡಿದರು. ದಲಿತ ಸಂಘರ್ಷ ಸಮಿತಿಯ ವಿವಿಧ ಬಣಗಳ ರಘು ಎಕ್ಕಾರು, ಕೃಷ್ಣಾನಂದ ಡಿ ಎಸ್, ರಾಜ್ಯ ರೈತ ಸಂಘದ ದಿವಾಕರ ಪೈ ಸುಳ್ಯ, ಪ್ರಾಂತ ರೈತ ಸಂಘದ ಕೃಷ್ಣಪ್ಪ ಸಾಲ್ಯಾನ್, ಸದಾಶಿವ ದಾಸ್, ಬೀಡಿ ಮಜೂರರ ಸಂಘದ ರಾಧಾ ಮೂಡಬಿದ್ರೆ, ವಸಂತಿ ಕುಪ್ಪೆಪದವು, ಲೋಲಾಕ್ಷಿ ಬಂಟ್ವಾಳ, ದಲಿತ ಹಕ್ಕುಗಳ ಸಮಿತಿಯ ಕೃಷ್ಣಪ್ಪ ಕೊಣಾಜೆ, ಈಶ್ವರಿ ಪದ್ಮುಂಜ, ಕೃಷ್ಣ ತಣ್ಣೀರುಬಾವಿ, ಆದಿವಾಸಿ ಹಕ್ಕುಗಳ ಸಮಿತಿಯ ಕೃಷ್ಣಾ ಇನ್ನಾ, ಕರಿಯ ವಾಮಂಜೂರು, ಕಟ್ಟಡ ಕಾರ್ಮಿಕರ ಸಂಘಟನೆಯ ಯೋಗೀಶ್ ಜಪ್ಪಿನಮೊಗರು, ರವಿಚಂದ್ರ ಕೊಂಚಾಡಿ, ಸಿಐಟಿಯು ಮುಖಂಡರಾದ ಬಿ.ಎಂ ಭಟ್, ಜಯಂತ ನಾಯ್ಕ್, ಲಕ್ಷ್ಮಿ ಮೂಡಬಿದ್ರೆ, ಡಿವೈಎಫ್ಐನ ಬಿ.ಕೆ ಇಮ್ತಿಯಾಜ್, ಜಯಂತಿ ಶೆಟ್ಟಿ, ಅಯಾಝ್ ಕೃಷ್ಣಾಪುರ, ದಯಾನಂದ ಶೆಟ್ಟಿ, ರಾಣಿ ಅಬ್ಬಕ್ಕ ಬಸ್ಸು ನೌಕರರ ಸಂಘದ ಅಧ್ಯಕ್ಷ ಅಲ್ತಾಪ್ ಉಸ್ಮಾನ್, ಪಲ್ಗುಣಿ ಸಾಂಪ್ರದಾಯಿಕ ಮೀನುಗಾರರ ಸಂಘದ ಅಧ್ಯಕ್ಷರಾದ ಅಬ್ದುಲ್ ತಯ್ಯೂಬ್, ಜನವಾದಿ ಮಹಿಳಾ ಸಂಘಟನೆಯ ಭಾರತಿ ಬೋಳಾರ, ವಿಲಾಸಿನಿ ತೊಕ್ಕೊಟ್ಟು, ಪ್ರಮೀಳಾ ಶಕ್ತಿನಗರ, ಸಮುದಾಯ ಮಂಗಳೂರು ಇದರ ವಾಸುದೇವ ಉಚ್ಚಿಲ, ಮನೋಜ್ ವಾಮಂಜೂರು ಹಾಗೂ ವಿವಿಧ ಸಂಘಟನೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು. ಸಿಐಟಿಯು ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು, ಸಂತೋಷ್ ಬಜಾಲ್ ವಂದಿಸಿದರು.
ಉಸ್ತುವಾರಿ ಸಚಿವರಿಗೆ ಮನವಿ
ಧರಣಿಯ ತರುವಾಯ ಉಸ್ತುವಾರಿ ಸಚಿವರಿಗೆ ದ.ಕ. ಜಿಲ್ಲಾ ಜಾತ್ಯಾತೀತ ಪಕ್ಷಗಳು ಹಾಗೂ ಸಂಘಟನೆಗಳ ಜಂಟಿ ವೇದಿಕೆಯ ಅಧ್ಯಕ್ಷರಾದ, ಮಾಜಿ ಸಚಿವ ಬಿ ರಮಾನಾಥ ರೈಗಳ ನೇತೃತ್ವದಲ್ಲಿ ಸಮಿತಿಯ ನಿಯೋಗ ಸಚಿವರ ಕಚೇರಿಯಲ್ಲಿ ಮನವಿ ಸಲ್ಲಿಸಿತು. ಕಮೀಷನರ್ ಅನುಪಮ್ ಅಗ್ರವಾಲ್ ರನ್ನು ತಕ್ಷಣವೇ ಅಮಾನತುಗೊಳಿಸುವಂತೆ ಆಗ್ರಹಿಸಿತು.
Like minded organisations hold protest demanding suspension of Mangalore commissioner Anupam Agarwal.
04-05-25 09:55 pm
HK News Desk
ಸಿಇಟಿ ಬಳಿಕ ನೀಟ್ ಪರೀಕ್ಷೆಗೂ ಜನಿವಾರಕ್ಕೆ ಕತ್ತರಿ !...
04-05-25 09:26 pm
ಹಿಮಾಲಯ - ದೆಹಲಿಗೆ ಸುನಾಮಿ, ಮಹಾನ್ ನಾಯಕರ ದುರ್ಮರಣ...
04-05-25 09:15 pm
Bangalore Girl Naked, HSR Layout: ಬೆಂಗಳೂರಿನಲ್...
04-05-25 02:27 pm
Suhas Shetty Murder, Parameshwar: ಸುಹಾಸ್ ಶೆಟ್...
04-05-25 01:18 pm
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
04-05-25 11:26 pm
Mangalore Correspondent
Mangalore, Hate speech, BJP MLA Harish Poonja...
04-05-25 08:49 pm
Minister Gundu Rao, Mangalore: ಮುಸ್ಲಿಂ ಮುಖಂಡರ...
04-05-25 08:39 pm
Mp Brijesh Chowta, Suhas Shetty Murder: ಆ್ಯಂಟ...
03-05-25 10:57 pm
ಬಜರಂಗಿ ಸುಹಾಸ್ ಶೆಟ್ಟಿ ಹತ್ಯೆಗೆ ಕಳಸದವರು ಬಂದಿದ್ದೇ...
03-05-25 10:43 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm