ಬ್ರೇಕಿಂಗ್ ನ್ಯೂಸ್
26-12-24 07:07 pm Udupi Correspondent ಕರಾವಳಿ
ಉಡುಪಿ, ಡಿ.26: ಜಮ್ಮು ಕಾಶ್ಮೀರದ ಪೂಂಛ್ ಜಿಲ್ಲೆಯಲ್ಲಿ ಸಂಭವಿಸಿದ ಸೇನಾ ವಾಹನ ಅಪಘಾತದಲ್ಲಿ ಹುತಾತ್ಮರಾಗಿರುವ ಯೋಧ ಅನೂಪ್ ಪೂಜಾರಿ ಅವರಿಗೆ ಹುಟ್ಟೂರು ಕುಂದಾಪುರ ತಾಲೂಕಿನ ಬೀಜಾಡಿಯಲ್ಲಿ ಸಕಲ ಸರಕಾರಿ ಗೌರವದೊಂದಿಗೆ ಅಂತ್ಯಸಂಸ್ಕಾರ ನಡೆಸಲಾಯಿತು. ಸೇನಾ ವಿಮಾನದಲ್ಲಿ ನಿನ್ನೆ ಮಂಗಳೂರು ಏರ್ಪೋರ್ಟ್ ಬಂದಿದ್ದ ಪಾರ್ಥಿವ ಶರೀರವನ್ನು ನಸುಕಿನಲ್ಲಿ ಕುಂದಾಪುರಕ್ಕೆ ಒಯ್ಯಲಾಗಿತ್ತು. ಬೆಳಗ್ಗೆ 9 ಗಂಟೆಗೆ ತೆಕ್ಕಟ್ಟೆಯಿಂದ ತೆರೆದ ವಾಹನದಲ್ಲಿ ಕೋಟೇಶ್ವರ ಮೂಲಕ ಪಾರ್ಥಿವ ಶರೀರದ ಮೆರವಣಿಗೆ ನಡೆಸಿ, ಹುಟ್ಟೂರು ಬೀಜಾಡಿಗೆ ತರಲಾಗಿತ್ತು.
ಬೀಜಾಡಿ ಗ್ರಾಮದ ಮನೆಯಲ್ಲಿ ಅಂತಿಮ ವಿಧಿವಿಧಾನ ನಡೆದಿದ್ದು ಅಲ್ಲಿ ಕುಟುಂಬದ ಆಪ್ತರಿಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಆ ಬಳಿಕ ಅವರು ಕಲಿತ ಬೀಜಾಡಿಪಡು ಸರ್ಕಾರಿ ಶಾಲೆ ಮೈದಾನದಲ್ಲಿ ಸಾರ್ವಜನಿಕ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿತ್ತು. ಅನೂಪ್ ಪೂಜಾರಿ ಆಪ್ತರು, ಸಾರ್ವಜನಿಕರು, ಶಾಲಾ ಮಕ್ಕಳು, ಅಧಿಕಾರಿಗಳು, ಜನಪ್ರತಿನಿಧಿಗಳು ಅಂತಿಮ ನಮನ ಸಲ್ಲಿಸಿದರು. ಅನೂಪ್ ಅವರ ಅಂತಿಮ ದರ್ಶನಕ್ಕಾಗಿ ಸಾವಿರಾರು ಮಂದಿ ಬೀಜಾಡಿಯಲ್ಲಿ ಸೇರಿದ್ದರು. ಮೃತದೇಹವನ್ನು ಮನೆಗೆ ತಂದಾಗ ಬಂಧುಗಳ ರೋದನ ಮುಗಿಲು ಮುಟ್ಟಿತ್ತು.





ಸೇರಿದ್ದ ಜನರು ಭಾರತ್ ಮಾತಾ ಕಿ ಜೈ, ಅನೂಪ್ ಪೂಜಾರಿ ಅಮರ್ ರಹೇ ಘೋಷಣೆಗಳನ್ನು ಕೂಗಿದರು. ಅಗಲಿದ ಯೋಧನಿಗೆ ಸಕಲ ಸರ್ಕಾರಿ ಹಾಗೂ ಸೇನಾ ಗೌರವ ಸಲ್ಲಿಸಲಾಯಿತು. ಸಮುದ್ರ ತೀರದ ಸರ್ಕಾರಿ ಜಮೀನಿನಲ್ಲಿ ಅನೂಪ್ ಅಂತ್ಯಸಂಸ್ಕಾರಕ್ಕೆ ಸಿದ್ಧತೆ ಮಾಡಲಾಗಿತ್ತು. ಪತ್ನಿ ಮಂಜುಶ್ರೀಗೆ ಸೇನೆಯ ಹಿರಿಯ ಅಧಿಕಾರಿಗಳು ತ್ರಿವರ್ಣ ದ್ವಜ ಹಸ್ತಾಂತರಿಸಿದರು. ಮಧ್ಯಾಹ್ನ ವೇಳೆಗೆ ಬೀಜಾಡಿ ಕಡಲ ತೀರದಲ್ಲಿ ಅನೂಪ್ ಅವರ ಅಂತ್ಯಸಂಸ್ಕಾರ ನಡೆಯಿತು.
ಅನೂಪ್ ಪಾರ್ಥಿವ ಶರೀರಕ್ಕೆ ಅವರ ಸಹೋದರ ಅಗ್ನಿ ಸ್ಪರ್ಶ ಮಾಡಿದರು. ಅಂತಿಮ ವಿಧಿ-ವಿಧಾನದಲ್ಲಿ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ಗುರುರಾಜ್ ಗಂಟೆಹೊಳೆ ಸೇರಿದಂತೆ ಜಿಲ್ಲಾಡಳಿತದ ಸಿಬಂದಿ, ಜಿಲ್ಲಾ ಮಟ್ಟದ ಪೊಲೀಸ್ ಅಧಿಕಾರಿಗಳು, ಸೇನಾ ಸಿಬ್ಬಂದಿ ಭಾಗಿಯಾಗಿದ್ದರು.
Lance Havaldar Anoop Poojary, who tragically died in an army vehicle accident in Poonch, Jammu and Kashmir, was laid to rest with full honours in his hometown of Beejady, Udupi district, on Thursday.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm