ಬ್ರೇಕಿಂಗ್ ನ್ಯೂಸ್
06-01-25 08:29 pm Mangalore Correspondent ಕರಾವಳಿ
ಮಂಗಳೂರು, ಜ.6: ಅಪರೂಪದಲ್ಲಿ ಅಪರೂಪ ಎನ್ನುವಂತೆ ಮಹಿಳೆಯೊಬ್ಬರು ನಗರದ ಕಂಕನಾಡಿ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ನಾಲ್ಕು ಮಕ್ಕಳಿಗೆ ಜನ್ಮ ನೀಡಿದ್ದಾರೆ. ವೈದ್ಯರ ತಂಡ ಶಸ್ತ್ರಚಿಕಿತ್ಸೆ ಮೂಲಕ ಮಹಿಳೆಯ ಹೆರಿಗೆ ಮಾಡಿಸಿದ್ದು, ತಾಯಿ ಮಕ್ಕಳು ಆರೋಗ್ಯವಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ತೆಲಂಗಾಣ ರಾಜ್ಯದ ತೇಜ ಎಂಬವರ ಪತ್ನಿ ಬಾನೋತ್ ದುರ್ಗಾ ಎಂಬವರು ನಾಲ್ವರು ಮಕ್ಕಳಿಗೆ ಜನ್ಮ ನೀಡಿದ ಮಹಾತಾಯಿ. ನಾಲ್ವರು ಮಕ್ಕಳಲ್ಲಿ ಎರಡು ಗಂಡು, ಎರಡು ಹೆಣ್ಣು ಮಕ್ಕಳಾಗಿದ್ದು ದಕ್ಷಿಣ ಕನ್ನಡ ಜಿಲ್ಲೆಯ ಮಟ್ಟಿಗೆ ಅತ್ಯಂತ ಅಪರೂಪದ ಪ್ರಕರಣ ಎಂದೆನಿಸಿದೆ. 30 ವಾರಗಳಲ್ಲಿ ಅಂದರೆ ತಿಂಗಳು ಭರ್ತಿಯಾಗದೆ ಹೆರಿಗೆಯಾಗಿದ್ದು ನಾಲ್ಕು ಮಕ್ಕಳಿದ್ದುದರಿಂದ ಮಹಿಳೆಯನ್ನು ಏಳು ತಿಂಗಳಲ್ಲಿ ಸಿಸೇರಿಯನ್ ಮಾಡಲಾಗಿದೆ. ಸದ್ಯ ಮಕ್ಕಳಿಗೆ ಎನ್ಐಸಿಯುವಿನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ನಾಲ್ಕು ಮಕ್ಕಳ ಜನನ ಬಹಳ ಅಪರೂಪವಾಗಿದ್ದು, ಇದು 7 ಲಕ್ಷ ಗರ್ಭಧಾರಣೆಗಳಲ್ಲಿ ಒಂದರಲ್ಲಿ ಮಾತ್ರ ಸಂಭವಿಸುತ್ತವೆ ಎಂದು ವೈದ್ಯರು ಹೇಳುತ್ತಾರೆ. ಸ್ತ್ರೀರೋಗ ತಜ್ಞೆ ಡಾ.ಜೋಯ್ಲೀನ್ ಡಿ ಅಲ್ಮೇಡಾ ಗರ್ಭಿಣಿಯ ಪ್ರಸವಪೂರ್ವ ಆರೈಕೆ ಮಾಡಿದ್ದು ಆಸ್ಪತ್ರೆಯ ಹೆರಿಗೆ ಮತ್ತು ಮಕ್ಕಳ ವಿಭಾಗದ ವೈದ್ಯಕೀಯ ತಂಡ ಮುತುವರ್ಜಿಯಿಂದ ತಾಯಿ- ಮಕ್ಕಳಿಗೆ ಆರೈಕೆ ಮಾಡಿದೆ. ದ.ಕ. ಜಿಲ್ಲೆಯ ಇತಿಹಾಸದಲ್ಲಿ ಇದೊಂದು ಅಪರೂಪದ ಹೆರಿಗೆ ಪ್ರಕರಣ ಎನ್ನಲಾಗಿದೆ.
In a remarkable and heartwarming event in Mangalore, a mother gave birth to quadruplets at Fr. Muller's Hospital during her seventh month of pregnancy. Celebrations erupted as the hospital staff and family welcomed the safe arrival of four precious babies—two boys and two girls—all of whom are reported to be healthy and thriving.
05-08-25 01:45 pm
Bangalore Correspondent
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
05-08-25 03:23 pm
HK News Desk
ಯೆಮೆನ್ ಬಳಿಯ ಸಮುದ್ರದಲ್ಲಿ ಪ್ಯಾಸೆಂಜರ್ ಹಡಗು ಮುಳುಗ...
04-08-25 05:11 pm
ಗೆಳೆಯನೊಂದಿಗೆ ಪತ್ನಿಯ ಸರಸ ; ಪರಿ ಪರಿ ಬೇಡಿಕೊಂಡರೂ...
04-08-25 02:16 pm
ವಿಮಾನದಲ್ಲಿ ಸಹ ಪ್ರಯಾಣಿಕನಿಗೆ ಕಪಾಳಮೋಕ್ಷ ; ಅಶಿಸ್ತ...
03-08-25 05:44 pm
ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ನರೇಂದ್ರ ಮೋದಿ, ಭಾಗ...
03-08-25 04:25 pm
05-08-25 04:29 pm
Mangalore Correspondent
Dcc Bank, Mangalore, Dr Udaya Kumar: ಸಹಕಾರ ಚಳ...
04-08-25 10:58 pm
Dharmasthala Case, Jayan T: ಧರ್ಮಸ್ಥಳ ಕೇಸ್, ಪೊ...
04-08-25 10:34 pm
Mangalore Congress: ಮೆಸ್ಕಾಂ ನೌಕರರ ಪಿಂಚಣಿಗೆ ಗ್...
04-08-25 09:51 pm
Dharmasthala Case, SIT, Body Found: ಬಂಗ್ಲೆಗುಡ...
04-08-25 07:38 pm
03-08-25 10:11 pm
Mangalore Correspondent
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm