ಬ್ರೇಕಿಂಗ್ ನ್ಯೂಸ್
13-01-25 10:48 am Bengaluru correspondent ಕರಾವಳಿ
ಬೆಂಗಳೂರು, ಜ.13: ಚಾಮರಾಜಪೇಟೆ ಬಳಿಯ ವಿನಾಯಕ ನಗರದಲ್ಲಿ ಹಸುಗಳ ಕೆಚ್ಚಲು ಕೊಯ್ದು ಕ್ರೌರ್ಯ ಮೆರೆದ ಪ್ರಕರಣದಲ್ಲಿ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಿಹಾರ ಮೂಲದ ಸೈಯ್ಯದ್ ನಸ್ರು (30) ಎಂಬಾತ ಬಂಧಿತ. ಶನಿವಾರ ರಾತ್ರಿ ವಿನಾಯಕ ನಗರದಲ್ಲಿ ಅಪರಿಚಿತರು ಮೂರು ಹಸುಗಳ ಕೆಚ್ಚಲು ಕತ್ತರಿಸಿರುವ ಘಟನೆ ನಡೆದಿದ್ದರಿಂದ ಹಿಂದು ಸಂಘಟನೆಗಳ ಆಕ್ರೋಶದಿಂದಾಗಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿತ್ತು.
ಬಂಧಿತ ಆರೋಪಿಯನ್ನು ಪೊಲೀಸರು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ಕುಡಿದ ಅಮಲಿನಲ್ಲಿ ಕೃತ್ಯ ಎಸಗಿದ್ದಾಗಿ ಹೇಳಲಾಗುತ್ತಿದೆ. ಆದರೆ ಹಸುವಿನ ಕೆಚ್ಚಲು ಕೊಯ್ಯಲು ಕಾರಣ ಏನು? ಹಳೆಯ ದ್ವೇಷಕ್ಕೆ ಏನಾದರೂ ಈ ಕೃತ್ಯ ಎಸಗಿದ್ದಾನೆಯೇ ಎಂದು ವಿಚಾರಣೆ ನಡೆಸ್ತಿದ್ದಾರೆ. ಸೈಯ್ಯದ್ ನಸ್ರು ಬಿಹಾರದವನಾಗಿದ್ದು ಬೆಂಗಳೂರು ನಗರದಲ್ಲಿ ಪ್ಲಾಸ್ಟಿಕ್ ಹಾಗೂ ಕ್ಲಾತ್ ಬ್ಯಾಗ್ ಸ್ಟಿಚ್ಚಿಂಗ್ ಕೆಲಸ ಮಾಡ್ತಿದ್ದಾನೆ.
ಕೆಚ್ಚಲು ಕೊಯ್ಯಲ್ಪಟ್ಟ ಹಸುಗಳು ಸ್ಥಳೀಯ ನಿವಾಸಿ ಕರ್ಣ ಎಂಬವರಿಗೆ ಸೇರಿದ್ದಾಗಿದ್ದು ರಾತ್ರಿ ವೇಳೆ ಗೋವುಗಳು ಜೋರಾಗಿ ಕಿರುಚಿ ನರಳಾಟ ಮಾಡಿದ್ದವು. ಇದರಿಂದ ಎಚ್ಚರಗೊಂಡ ನಿವಾಸಿಗಳಿಗೆ, ಹಸುಗಳು ರಕ್ತದ ಮಡುವಿನಲ್ಲಿ ಬಿದ್ದಿರುವುದು ಪತ್ತೆಯಾಗಿದೆ. ಘಟನೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಪ್ರಕರಣದ ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ಬೆಂಗಳೂರು ಪೊಲೀಸ್ ಆಯುಕ್ತ ಬಿ ದಯಾನಂದ ಅವರಿಗೆ ಸೂಚಿಸಿರುವುದಾಗಿ ತಿಳಿಸಿದ್ದಾರೆ.
ಜಿಹಾದಿ ಮನಸ್ಥಿತಿಯ ಕೃತ್ಯ - ಬಿಜೆಪಿ
ಘಟನೆ ಕುರಿತಾಗಿ ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದು ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ನೀಡಿದ್ದಾರೆ. ಈ ಬಗ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳದಿದ್ದಲ್ಲಿ ‘ಕಪ್ಪು ಸಂಕ್ರಾಂತಿ’ ಆಚರಿಸುವುದಾಗಿ ಹೇಳಿದ್ದಾರೆ. 'ಈ ಹೇಯ ಕೃತ್ಯವು ಜಿಹಾದಿ ಮನಸ್ಥಿತಿಯನ್ನು ಪ್ರತಿಬಿಂಬಿಸುತ್ತದೆ. ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಲು ಸರ್ಕಾರ ವಿಫಲವಾದರೆ ನಾವು 'ಕಪ್ಪು ಸಂಕ್ರಾಂತಿ' ಆಚರಿಸುತ್ತೇವೆ. ಇಂತಹ ಘಟನೆಯ ನಡುವೆ ಸಂಕ್ರಾಂತಿಯನ್ನು ಹೇಗೆ ಆಚರಿಸಬಹುದು?' ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ ಪ್ರಶ್ನೆ ಮಾಡಿದ್ದಾರೆ.
ಮೂರು ಹೊಸ ಹಸು ಕೊಡಿಸುತ್ತೇನೆ - ಜಮೀರ್
ಇದೇ ವೇಳೆ, ಕೆಚ್ಚಲು ಕೊಯ್ದು ಜೀವನ್ಮರಣ ಸ್ಥಿತಿಯಲ್ಲಿರುವ ಹಸುಗಳಿದ್ದಲ್ಲಿಗೆ ಭೇಟಿ ಕೊಟ್ಟ ಸ್ಥಳೀಯ ಶಾಸಕ ಜಮೀರ್ ಅಹ್ಮದ್, ಪ್ರಾಣಿಗಳ ಮೇಲೆ ಯಾಕೆ ದ್ವೇಷ? ಈ ಥರ ಮಾಡಿದವನು ಮನುಷ್ಯನೇ ಅಲ್ಲ. ಏನೇ ದ್ವೇಷ, ಗಲಾಟೆ ಇದ್ದರೂ ಈ ಥರ ಮಾಡಬಾರದು ಎಂದು ಹೇಳಿದ್ದಾರೆ. ಅಲ್ಲದೆ, ವಿಚಾರ ಗೊತ್ತಾದ ತಕ್ಷಣ ಮುಖ್ಯಮಂತ್ರಿಗಳು ಕಮಿಷನರ್‌ಗೆ ಕರೆ ಮಾಡಿ ಕಠಿಣ ಕ್ರಮಕ್ಕೆ ಸೂಚಿಸಿದ್ದಾರೆ. ಯಾರೇ ಆದರೂ ಅವನ ಮೇಲೆ ಕಠಿಣ ಕ್ರಮ ಆಗಬೇಕೆಂದು ಪೊಲೀಸರಿಗೆ ಹೇಳಿದ್ದೇನೆ. ಆ ಕುಟುಂಬಕ್ಕೆ ಮೂರು ಹೊಸ ಹಸುಗಳನ್ನು ನಾನೇ ಕೊಡಿಸುತ್ತೇನೆ ಎಂದು ಭರವಸೆ ನೀಡಿದರು.
Following the heinous act in Chamarajpet where unidentified miscreants slashed the udders of three cows, minister Zameer Ahmed Khan visited the Cottonpet veterinary hospital where the cows are being treated.
05-08-25 01:45 pm
Bangalore Correspondent
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
06-08-25 12:15 pm
HK News Desk
1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯ...
05-08-25 10:58 pm
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
06-08-25 03:45 pm
Mangalore Correspondent
Looking for a Reliable Nurse, Nanny, or House...
06-08-25 01:06 pm
Puttur Doctor Dr Keerthana Joshi, Suicide, Ma...
05-08-25 10:34 pm
Dharmasthala Case, Update, 11-12 spot: ಧರ್ಮಸ್...
05-08-25 08:22 pm
T-55 Battle Tank, Kadri, Mangalore: 1975ರ ಪಾಕ...
05-08-25 04:29 pm
06-08-25 11:23 am
Mangalore Correspondent
Udupi Gold, Theft: ಕದ್ದ ಚಿನ್ನವನ್ನು ಕರಗಿಸಿ ಗಟ್...
06-08-25 11:04 am
Bangalore Cyber Fraud: 1.5 ಕೋಟಿ ರೂ. ಸೈಬರ್ ವಂಚ...
05-08-25 10:39 pm
ದೇಲಂತಬೆಟ್ಟು ದೇವಸ್ಥಾನದ ಕಾಣಿಕೆ ಡಬ್ಬಿ ಕಳವು ; ಮೂವ...
03-08-25 10:11 pm
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm