ಬ್ರೇಕಿಂಗ್ ನ್ಯೂಸ್
13-01-25 09:08 pm Mangalore Correspondent ಕರಾವಳಿ
ಮಂಗಳೂರು, ಜ.13: ಹಸುವಿನ ಕೆಚ್ಚಲು ಕೊಯ್ದ ಪ್ರಕರಣ ಇಡೀ ರಾಜ್ಯದಲ್ಲಿ ಮಾರ್ದನಿಸಿದೆ. ಬಿಜೆಪಿ ನಾಯಕರು, ಹಿಂದು ಸಮಾಜದ ಸಂತರು ರಾಜ್ಯದೆಲ್ಲೆಡೆ ಪ್ರತಿಭಟನೆ ವ್ಯಕ್ತಪಡಿಸಿದ್ದಾರೆ. ಮಂಗಳೂರಿನಲ್ಲಿ ಜಿಲ್ಲಾ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಿದ್ದು, ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ.
ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಎಂಎಲ್ಸಿ ಆಗಿರುವ ಎನ್. ರವಿಕುಮಾರ್, ಹಸುವಿನ ಕೆಚ್ಚಲು ಕೊಯ್ದಿರುವ ಘಟನೆ ಆಕಸ್ಮಿಕ ಆಗಿರುವುದಲ್ಲ. ಸಂಕ್ರಾಂತಿ ಹಬ್ಬದ ಸಂದರ್ಭದಲ್ಲಿ ಹಿಂದು ಭಾವನೆ ಕೆಣಕುವ ಯತ್ನ ನಡೆದಿದೆ. ಪ್ರಕರಣದಲ್ಲಿ ಯಾರೋ ಬಿಹಾರ ಮೂಲದ ವ್ಯಕ್ತಿಯನ್ನು ಬಂಧಿಸಿದ್ದಾರೆ. ಆತನೇ ಈ ಕೃತ್ಯ ಮಾಡಿದ್ದಾನೆ ಎಂಬುದಕ್ಕೆ ಯಾವ ದಾಖಲೆ ಇದೆ. ಅಲ್ಲದೆ, ಕುಡಿದ ಮತ್ತಿನಲ್ಲಿ ಕೃತ್ಯ ಎಸಗಿದ್ದಾನೆಂದು ಹೇಳುತ್ತಿದ್ದಾರೆ. ಯಾವ ಕುಡಿದ ಮತ್ತಿನಲ್ಲೂ ಇಂಥ ಘೋರ ಕೃತ್ಯ ಎಸಗಲ್ಲ. ಇದು ಮನುಷ್ಯ ತಲೆತಗ್ಗಿಸುವ ಕೃತ್ಯ. ಈ ಕೃತ್ಯಕ್ಕೆ ಸಿಎಂ ಸಿದ್ದರಾಮಯ್ಯ ನಿರ್ಲಜ್ಜ ಆಡಳಿತವೇ ಕಾರಣ ಎಂದರು.
ಬಿಜೆಪಿ ಸರಕಾರ ಇದ್ದಾಗ ಗೋಹತ್ಯೆ ನಿಷೇಧ ಕಾಯ್ದೆ ತರಲಾಗಿತ್ತು. ಆದರೆ ಕಾಂಗ್ರೆಸ್ ಈ ಕಾನೂನು ಜಾರಿಯಲ್ಲಿದ್ದರೂ, ಅನುಷ್ಠಾನ ಮಾಡುತ್ತಿಲ್ಲ. ಇದರಿಂದಾಗಿ ಎಲ್ಲೆಂದರಲ್ಲಿ ಗೋವಿನ ಹತ್ಯೆ ಆಗುತ್ತಿದೆ, ಈಗ ಯಾವುದೋ ದ್ವೇಷದಲ್ಲಿ ಕೆಚ್ಚಲು ಕೊಯ್ದು ಮೃಗೀಯ ವರ್ತನೆ ತೋರಿದ್ದಾರೆ. ಸಿದ್ದರಾಮಯ್ಯ ಒಂದು ವರ್ಗದ ಬಗ್ಗೆ ತೀವ್ರ ಮಮಕಾರ ತೋರಿದ್ದರ ಪ್ರತಿಫಲ ಕಾಣುತ್ತಿದ್ದೇವೆ. ಈ ಕೃತ್ಯಕ್ಕೆ ಯಾರೆಲ್ಲ ಹೊಣೆಯಾಗಿದ್ದಾರೋ ಅವರೆಲ್ಲರನ್ನೂ ಬಂಧಿಸಬೇಕು. ಬಹುಮತದ ಆಡಳಿತ ಇದೆಯೆಂದು ಏನು ಮಾಡಿದರೂ ಆಗುತ್ತದೆ ಎಂದುಕೊಂಡಿದ್ದಾರೆ. ಕಾಂಗ್ರೆಸಿಗರು ಅಹಂಕಾರದ ಪರಮಾವಧಿ ತೋರಿಸುತ್ತಿದ್ದಾರೆ ಎಂದು ಹೇಳಿದರು.
ಪ್ರತಿಭಟನೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಎಂಎಲ್ಸಿ ಕಿಶೋರ್ ಕುಮಾರ್, ಪ್ರೇಮಾನಂದ ಶೆಟ್ಟಿ, ಯತೀಶ್ ಆರ್ವಾರ್, ನಂದನ್ ಮಲ್ಯ ಮತ್ತಿತರರು ಇದ್ದರು.
The BJP staged a protest against the chopping of udders of cows at Chamarajpet in central Bengaluru, in front of the Mini Vidhana Soudha in Mangaluru on Monday.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm