ಬ್ರೇಕಿಂಗ್ ನ್ಯೂಸ್
15-01-25 10:47 pm Udupi Correspondent ಕರಾವಳಿ
ಉಡುಪಿ, ಜ.16: ರಾತ್ರಿ ವೇಳೆ ಯಕ್ಷಗಾನ ನಡೆಯುತ್ತಿದ್ದಾಗ ಪೊಲೀಸ್ ಅನುಮತಿ ಪಡೆದಿಲ್ಲ ಎಂಬ ಕಾರಣವೊಡ್ಡಿ ಅರ್ಧಕ್ಕೆ ನಿಲ್ಲಿಸಲು ಯತ್ನಿಸಿದ ಘಟನೆ ಕಾರ್ಕಳ ತಾಲೂಕಿನ ಅಜೆಕಾರು ಠಾಣೆ ವ್ಯಾಪ್ತಿಯ ಶಿರ್ಲಾಲಿನಲ್ಲಿ ನಡೆದಿದೆ.
ಮುಂಡ್ಲಿಯ ಈಶ್ವರ ಯಕ್ಷಗಾನ ಮಂಡಳಿಯಿಂದ ಯಕ್ಷಗಾನ ಆಯೋಜನೆಗೊಂಡಿತ್ತು. ರಾತ್ರಿ 10 ಗಂಟೆ ನಂತರ ಧ್ವನಿವರ್ಧಕ ಬಳಸಲು ಸುಪ್ರೀಂ ಕೋರ್ಟ್ ಅನುಮತಿ ಇಲ್ಲ ಎಂದು ಅಜೆಕಾರು ಉಪನಿರೀಕ್ಷಕ ಶುಭಕರ್ ಆಕ್ಷೇಪ ಎತ್ತಿದ್ದಾರೆ. ಈ ವೇಳೆ ಗ್ರಾಮಸ್ಥರು ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ನಡೆದಿದೆ.
ಕಾರ್ಯಕ್ರಮ ನಿಲ್ಲಿಸದಿದ್ದರೆ ಯಕ್ಷಗಾನ ಮಂಡಳಿ ಅಧ್ಯಕ್ಷನನ್ನು ಬಂಧಿಸುವುದಾಗಿ ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಯಕ್ಷಗಾನಕ್ಕಾಗಿ ಜನವರಿ 10 ರಂದು ಪಂಚಾಯತ್ ಪರವಾನಿಗೆ ಪಡೆಯಲು ಪಿಡಿಒ ಬಳಿ ಆಯೋಜಕರು ತೆರಳಿದ್ದರು. ಮೂರು ದಿನಗಳ ರಜೆಯಿದ್ದ ಕಾರಣಕ್ಕೆ ಪಂಚಾಯತ್ ಅನುಮತಿ ದೊರಕಿರಲಿಲ್ಲ. ಜನವರಿ 13ರಂದು ಅನುಮತಿಗಾಗಿ ಆಯೋಜಕರು ಅಜೆಕಾರು ಠಾಣೆಗೆ ತೆರಳಿದ್ದರು. ಈ ವೇಳೆ, ಪಂಚಾಯತ್ ಅನುಮತಿ ತರುವಂತೆ ಪೊಲೀಸರು ತಾಕೀತು ಮಾಡಿದ್ದಾರೆ. ಹೀಗಾಗಿ ಧ್ವನಿವರ್ಧಕ ಬಳಸಲು ಅನುಮತಿ ಸಿಕ್ಕಿರಲಿಲ್ಲ.
ಇದೇ ನೆಪದಲ್ಲಿ ಪೊಲೀಸರು ಯಕ್ಷಗಾನ ನಿಲ್ಲಿಸಲು ಮುಂದಾಗಿದ್ದಾರೆ. ಆದರೆ ಗ್ರಾಮಸ್ಥರು ಯಾವುದೇ ಕಾರಣಕ್ಕೂ ಯಕ್ಷಗಾನ ನಿಲ್ಲಿಸಲು ಬಿಡಲ್ಲ ಎಂದು ತಡೆದಿದ್ದಾರೆ. ಈ ಬಗ್ಗೆ ಯಕ್ಷಗಾನ ಮಂಡಳಿ ಅಧ್ಯಕ್ಷ ಸದಾನಂದ ಶೆಟ್ಟಿ ಮತ್ತು ಮಹಾಲಕ್ಷ್ಮಿ ಸೌಂಡ್ಸ್ ಮುಖ್ಯಸ್ಥರ ವಿರುದ್ಧ ಪ್ರಕರಣ ದಾಖಲಾಗಿದೆ.
ಸ್ಥಳೀಯರ ದೂರಿನಂತೆ ರಾತ್ರಿ 11.30 ಗಂಟೆಗೆ ಪೊಲೀಸರು ತೆರಳಿ ಧ್ವನಿವರ್ಧಕ ಬಳಸದಂತೆ ತಿಳಿಸಿದರೂ, ಬೆಳಗ್ಗೆ 4.30 ಗಂಟೆಯ ವರೆಗೂ ಮೈಕ್ ಮುಂದುವರಿಸಿದ್ದರು. ಹೀಗಾಗಿ ಅನುಮತಿ ಪಡೆಯದೆ ರಾತ್ರಿ ವೇಳೆ ಧ್ವನಿವರ್ಧಕ ಬಳಸಿ ಕಾರ್ಯಕ್ರಮ ಆಯೋಜಿಸಿದ್ದಕ್ಕಾಗಿ ಆಯೋಜಕರ ಮೇಲೆ ಅಜೆಕಾರು ಪೊಲೀಸ್ ಠಾಣೆ ಅಪರಾಧ ಕ್ರಮಾಂಕ 02/25 ಕಲಂ. 292 BNS ಮತ್ತು 37 KP Act. ರಂತೆ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
A Yakshagana performance in Mundli, near Jarkala, Shirlal village in Karkala taluk, was halted by police on Tuesday night. The authorities intervened, citing the absence of permission to use loudspeakers. This action sparked outrage among the villagers.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm