ಬ್ರೇಕಿಂಗ್ ನ್ಯೂಸ್
17-01-25 07:42 pm Mangaluru Correspondent ಕರಾವಳಿ
ಮಂಗಳೂರು, ಜ.17: ರಾಜೀವ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾನಿಲಯದ ಪ್ರಾದೇಶಿಕ ಕೇಂದ್ರ ಕಚೇರಿ ಕಟ್ಟಡಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮೇರಿಹಿಲ್ ಅಬಕಾರಿ ಕಚೇರಿ ಕಟ್ಟಡದ ಬಳಿ ಶಿಲಾನ್ಯಾಸ ನೆರವೇರಿಸಿದ್ದಾರೆ.
ಅಂದಹಾಗೆ, ರಾಜೀವ ಗಾಂಧಿ ಆರೋಗ್ಯ ವಿವಿಯ ಮಂಗಳೂರಿನ ಪ್ರಾದೇಶಿಕ ಕೇಂದ್ರಕ್ಕೆ ಇದು ಎರಡನೇ ಬಾರಿ ಶಿಲಾನ್ಯಾಸ ಆಗಿರುವುದು. ಈ ಹಿಂದೆ 2020ರ ಅಕ್ಟೋಬರ್ 14ರಂದು ಇದೇ ಸ್ಥಳದಲ್ಲಿ ಶಾಸಕ ಭರತ್ ಶೆಟ್ಟಿ ನೇತೃತ್ವದಲ್ಲಿ ಶಿಲಾನ್ಯಾಸ ನಡೆದಿತ್ತು. ಆಗಲೂ ರಾಜೀವ ಗಾಂಧಿ ಆರೋಗ್ಯ ವಿವಿಯ ಸೆನೆಟ್ ಸದಸ್ಯರಾದ ಕೆ. ಶಿವಶರಣ್ ಶೆಟ್ಟಿ ಮತ್ತು ಯುಟಿ ಇಫ್ತಿಕಾರ್ ಆಲಿ ಉಪಸ್ಥಿತರಿದ್ದರು. ಆದರೆ ಕಟ್ಟಡ ನಿರ್ಮಾಣ ಆಗಿರಲಿಲ್ಲ. ಇಂದಿನ ಕಾರ್ಯಕ್ರಮದಲ್ಲಿ ಹಳೆಯದನ್ನು ನೆನಪು ಮಾಡಿಕೊಂಡ ಶಾಸಕ ಭರತ್ ಶೆಟ್ಟಿ, ಈ ಹಿಂದೆಯೇ ಆರೋಗ್ಯ ವಿವಿ ಪ್ರಾದೇಶಿಕ ಕೇಂದ್ರಕ್ಕಾಗಿ ಎರಡು ಎಕ್ರೆ ಜಾಗ ತೆಗೆದಿಡಲಾಗಿತ್ತು ಎಂದರು.
ಈ ಬಗ್ಗೆ ರಾಜೀವ ಗಾಂಧಿ ಆರೋಗ್ಯ ವಿವಿಯ ಕುಲಪತಿ ರಮೇಶ್ ಕೆ. ಸುದ್ದಿಗೋಷ್ಟಿ ನಡೆಸಿದ್ದಾಗ ಪತ್ರಕರ್ತರು ಪ್ರಶ್ನೆ ಮಾಡಿದ್ದರು. ಆ ಸಂದರ್ಭದಲ್ಲಿ ಈ ಹಿಂದೆ ಪ್ರಾದೇಶಿಕ ಕೇಂದ್ರಕ್ಕೆ ಶಿಲಾನ್ಯಾಸ ಮಾಡಿರುವುದು ಗೊತ್ತಿಲ್ಲ, ನಾವ್ಯಾರೂ ಭಾಗವಹಿಸಿಲ್ಲ ಎಂದು ಸ್ಪಷ್ಟನೆ ನೀಡಿದ್ದರು. ಆದರೆ ಪತ್ರಿಕೆಯಲ್ಲಿ ಬಂದಿದ್ದ ಸುದ್ದಿಯನ್ನು ತೋರಿಸಿದ್ದಾಗ ಅಚ್ಚರಿ ಪಟ್ಟಿದ್ದರು. ಇದೀಗ ಮತ್ತೊಮ್ಮೆ ಸಿಎಂ ಸಿದ್ದರಾಮಯ್ಯ ಆರೋಗ್ಯ ವಿವಿಯ ಕೇಂದ್ರಕ್ಕೆ ಶಿಲಾನ್ಯಾಸ ಮಾಡಿದ್ದಾರೆ. ವಿಶೇಷ ಅಂದ್ರೆ, ಸೆನೆಟ್ ಸದಸ್ಯ ಇಫ್ತಿಕಾರ್ ಆಲಿ ನೇತೃತ್ವದಲ್ಲೇ ಕಾರ್ಯಕ್ರಮ ನಡೆಸಲಾಗಿದೆ. ಶಾಸಕ ಭರತ್ ಶೆಟ್ಟಿ, ಆರೋಗ್ಯ ಸಚಿವ ದಿನೇಶ್ ಗುಂಡುರಾವ್, ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಪಾಟೀಲ್, ಸಂಸದ ಬ್ರಿಜೇಶ್ ಚೌಟ ಮತ್ತಿತರರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ರಾಜೀವ ಗಾಂಧಿ ಆರೋಗ್ಯ ವಿಜ್ಞಾನಗಳ ವಿವಿ ಇಡೀ ಏಷ್ಯಾದಲ್ಲಿ ಅತಿ ದೊಡ್ಡದು. ಮೆಡಿಕಲ್ ಹಬ್ ಆಗಿರುವ ಮಂಗಳೂರು, ಉಡುಪಿಯಲ್ಲೇ ವಿವಿ ಅಧೀನದಲ್ಲಿ 1250 ಮೆಡಿಕಲ್ ಕಾಲೇಜುಗಳಿವೆ. 3.5 ಲಕ್ಷ ವಿದ್ಯಾರ್ಥಿಗಳು ಕಲಿಯುತ್ತಿದ್ದಾರೆ. ಇಷ್ಟೊಂದು ಅಗಾಧ ವ್ಯಾಪ್ತಿಯಲ್ಲಿ ಶಿಕ್ಷಣ ನೀಡುತ್ತಿರುವ ಬೇರೊಂದು ವಿವಿ ಇಡೀ ದೇಶದಲ್ಲೇ ಇಲ್ಲ. ಆದರೂ ಇಡೀ ರಾಜ್ಯದಲ್ಲಿ ಪ್ರತಿ ಜಿಲ್ಲೆಯಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜುಗಳಿವೆ. ಇಲ್ಲಿಯೂ ಸರ್ಕಾರಿ ಮೆಡಿಕಲ್ ಕಾಲೇಜು ಆಗಬೇಕಾಗಿದೆ. ಆಮೂಲಕ ಬಡ ವರ್ಗದವರು ಕೂಡ ವೈದ್ಯಕೀಯ ಶಿಕ್ಷಣ ಪಡೆಯಬೇಕು ಎಂದು ಹೇಳಿದರು.
ಅಲ್ಲದೆ, ಆರೋಗ್ಯ ವಿವಿಯ ಪ್ರಾದೇಶಿಕ ಕೇಂದ್ರಕ್ಕೆ ಸುಮಾರು 49 ಕೋಟಿ ಯೋಜನಾ ವೆಚ್ಚವಾಗಿದ್ದು, ಅದರಲ್ಲಿ ಸುಸಜ್ಜಿತ ಕಟ್ಟಡ ನಿರ್ಮಾಣ ಮಾಡಬೇಕು. ಕರಾವಳಿ ಮತ್ತು ಮಲೆನಾಡು ಭಾಗಕ್ಕೆ ಇದೇ ಕೇಂದ್ರ ಆಗಬೇಕು. ವಿದ್ಯಾರ್ಥಿಗಳು ಸಣ್ಣ ಪುಟ್ಟ ವಿಷಯಕ್ಕೆ ಬೆಂಗಳೂರಿಗೆ ಅಲೆದಾಡುವುದು ತಪ್ಪಿಸಬೇಕು ಎಂದು ಹೇಳಿದರು. ಸಿಎಂ ಸಿದ್ದರಾಮಯ್ಯ ಬೆಳಗ್ಗೆ 11 ಗಂಟೆಗೆ ತಲುಪಬೇಕಿದ್ದರೂ, ಆಗಮನ ವಿಳಂಬವಾಗಿತ್ತು. ಮಧ್ಯಾಹ್ನ 1 ಗಂಟೆ ಸುಮಾರಿಗೆ ಸ್ಥಳಕ್ಕೆ ತಲುಪಿದ್ದರು. ಅಲ್ಲಿ ವರೆಗೂ ಉಡುಪಿ, ಮಂಗಳೂರಿನ ಹಲವು ಕಾಲೇಜುಗಳ ನರ್ಸಿಂಗ್ ಕಾಲೇಜುಗಳ ವಿದ್ಯಾರ್ಥಿಗಳು, ಪತ್ರಕರ್ತರು, ಅಧಿಕಾರಿ ವರ್ಗದವರು, ಪೊಲೀಸರು ಬಿಸಿಲಿನಲ್ಲಿ ಕಾದು ಬಸವಳಿಯುವಂತಾಗಿತ್ತು.
Chief Minister Siddaramaiah laid the foundation for the Regional Centre of Rajiv Gandhi University of Health Sciences (RGUHS) at Maryhill on January 17, Friday. But the same foundation was also led by MLA Bharath Shetty in 2020. Speaking on the occasion, the Chief Minister said the project when completed will benefit students of the region. On this occasion, the CM said the facilities and health care services and quality of services in Government hospitals should be on par with those in private hospitals.
02-05-25 10:00 pm
Bangalore Correspondent
U T Khader, Suhas Shetty Murder, Fazil, Manga...
02-05-25 08:44 pm
Suhas Shetty Murder case, Minister Parameshwa...
02-05-25 01:40 pm
Dinesh Gundu Rao, Suhas Shetty Murder: ಸುಹಾಸ್...
02-05-25 10:52 am
Jan Dhan Scheme: ಜನಧನ್ ಖಾತೆ ಬಗ್ಗೆ ಜನರ ನಿರಾಸಕ್...
01-05-25 01:48 pm
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
03-05-25 06:57 pm
Mangalore Correspondent
Mangalore, Suhas Shetty Murder, Anti Communia...
03-05-25 02:58 pm
Mangalore Suhas Shetty Murder, Instagram, Pol...
02-05-25 10:47 pm
Mangalore Suhas Shetty Murder, Shobha Karandl...
02-05-25 09:26 pm
B Y Vijayendra, Suhas Shetty Murder, Mangalor...
02-05-25 06:44 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm