ಬ್ರೇಕಿಂಗ್ ನ್ಯೂಸ್
22-01-25 12:39 pm Mangalore Correspondent ಕರಾವಳಿ
ಮಂಗಳೂರು, ಜ.22: ಕೋಟೆಕಾರು ಬ್ಯಾಂಕ್ ದರೋಡೆ ಪ್ರಕರಣಕ್ಕೆ ಸಂಬಂಧಿಸಿ ಪ್ರಮುಖ ಆರೋಪಿ ಮುರುಗಂಡಿ ದೇವರ್ ಮತ್ತು ಜೋಶುವಾ ರಾಜೇಂದ್ರನ್ ಅವರನ್ನು ತಮಿಳುನಾಡಿನ ತಿರುನಲ್ವೇಲಿಯಲ್ಲಿ ಬಂಧಿಸಿದ್ದು, ಅಲ್ಲಿನ ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಿ ಮಂಗಳೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮುರುಗಂಡಿ ದೇವರ್ ತಿರುನಲ್ವೇಲಿ ಜಿಲ್ಲೆಯ ಪದ್ಮನೇರಿ ಗ್ರಾಮದ ಕಾಲಕ್ಕಾಡ್ ನಿವಾಸಿಯಾಗಿದ್ದು, ಜೋಶುವಾ ಅದೇ ಜಿಲ್ಲೆಯ ಕಲ್ಲಿಡೈಕುರುಚ್ಚಿ ನಿವಾಸಿಯಾಗಿದ್ದಾನೆ. ಸ್ಥಳೀಯ ಪೊಲೀಸರ ನೆರವು ಪಡೆದು ಮಂಗಳೂರು ಪೊಲೀಸರು ಬಂಧಿಸಿದ್ದು, ಸ್ಥಳೀಯ ಅಂಬಾಸಮುದ್ರಂ ಜುಡೀಶಿಯಲ್ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಿದ್ದಾರೆ. ಈ ವೇಳೆ, ಎರಡು ಕೇಜಿ ಚಿನ್ನಾಭರಣ ಮತ್ತು ಮೂರು ಲಕ್ಷ ನಗದು, ಒಂದು ರಿವಾಲ್ವರ್, ಮೂರು ಬುಲೆಟ್ ಅನ್ನು ಪೊಲೀಸರು ವಶಕ್ಕೆ ಪಡೆದಿದ್ದಾಗಿ ಕೋರ್ಟಿಗೆ ಮಾಹಿತಿ ನೀಡಿದ್ದಾಗಿ ದಿ ಹಿಂದು ಪತ್ರಿಕೆ ತಿರುನಲ್ವೇಲಿಯಿಂದ ವರದಿ ಮಾಡಿದೆ.




ಮಂಗಳವಾರ ಸ್ಥಳೀಯ ಕೋರ್ಟಿಗೆ ಹಾಜರುಪಡಿಸಿ ಮುರುಗನ್ ಮತ್ತು ಜೋಶುವಾನನ್ನು ಮಂಗಳೂರು ಪೊಲೀಸರು ಬಾಡಿ ವಾರೆಂಟ್ ಪಡೆದು ಜೊತೆಗೆ ಕರೆತಂದಿದ್ದಾರೆ. ಇದಕ್ಕೂ ಮೊದಲೇ ಇನ್ನೊಬ್ಬ ಆರೋಪಿ ಕಣ್ಣನ್ ಮಣಿ ಮುಂಬೈನಲ್ಲಿ ಸೆರೆಸಿಕ್ಕಿದ್ದು, ಆತನನ್ನು ಮಂಗಳೂರಿಗೆ ಕರೆತಂದು ಎಸ್ಕೇಪ್ ಆಗಲು ಯತ್ನಿಸಿದ್ದಕ್ಕೆ ಗುಂಡಿನ ರುಚಿ ತೋರಿಸಿದ್ದಾರೆ. ಫೈರಿಂಗ್ ಆದ ಸ್ಥಳಕ್ಕೆ ಬಂದಿದ್ದ ಕೋಟೆಕಾರು ಸಹಕಾರಿ ಬ್ಯಾಂಕಿನ ಅಧ್ಯಕ್ಷ ಕೃಷ್ಣ ಶೆಟ್ಟಿ, ಬ್ಯಾಂಕಿನಲ್ಲಿ ಕಳವಾದ ಚಿನ್ನಾಭರಣದ ಬಗ್ಗೆ ಲೆಕ್ಕ ಆಗಿದ್ದು ಒಟ್ಟು 15 ಕೋಟಿಗೂ ಹೆಚ್ಚು ಮೊತ್ತದ ಚಿನ್ನ ದರೋಡೆಯಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಅಲ್ಲದೆ, ಎಫ್ಐಆರ್ ನಲ್ಲಿ ಅಂದಾಜು ಲೆಕ್ಕ ಕೊಡಲಾಗಿತ್ತು. ಅದನ್ನು ಮತ್ತೆ ಸೇರಿಸಲಾಗುವುದು ಎಂದು ಹೇಳಿದ್ದರು.
ಇದೀಗ ತಮಿಳುನಾಡಿನಲ್ಲಿ ವಶಕ್ಕೆ ಪಡೆದ ಇಬ್ಬರನ್ನು ಕೋರ್ಟಿಗೆ ಹಾಜರುಪಡಿಸಿದ ವೇಳೆ ಎರಡು ಕೇಜಿ ಚಿನ್ನಾಭರಣವೆಂದು ತೋರಿಸಲಾಗಿದೆ. ಮುಂಬೈನಲ್ಲಿ ಬಂಧಿಸಲ್ಪಟ್ಟ ಆರೋಪಿಯ ಬಳಿ ಎಷ್ಟು ಸಿಕ್ಕಿದೆಯೆಂದು ಪೊಲೀಸರು ಮಾಹಿತಿ ನೀಡಿಲ್ಲ. ಪ್ರಕರಣದಲ್ಲಿ ಇನ್ನೂ ಆರು ಮಂದಿ ಪರಾರಿಯಾಗಿದ್ದು, ಅವರು ತಮ್ಮೊಂದಿಗೆ ಚಿನ್ನಾಭರಣ ಇಟ್ಟುಕೊಂಡು ಹೋಗಿದ್ದಾರೆಯೇ ಎಂಬ ಬಗ್ಗೆ ತನಿಖೆ ನಡೆಯುತ್ತಿದೆ. ಮೊನ್ನೆ ಮಂಗಳೂರಿನಲ್ಲಿ ಮಾಧ್ಯಮಕ್ಕೆ ಮಾಹಿತಿ ನೀಡಿದ್ದ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್, ಗೋಣಿ ಚೀಲದಲ್ಲಿ ಒಯ್ದಿದ್ದ ಚಿನ್ನಾಭರಣಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಹೇಳಿದ್ದರು.
Kotekar bank robbery case, police seize 2 kilos of gold and cash worth 3 lakhs from accused murgan at Tirunelveli. The police also seized a revolver with three bullets from them. After producing them before Ambasamudram Judicial Magistrate Achuthan on Tuesday, the police took the duo to Mangalore.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm