ಬ್ರೇಕಿಂಗ್ ನ್ಯೂಸ್
26-01-25 08:18 pm Mangalore Correspondent ಕರಾವಳಿ
ಮಂಗಳೂರು, ಜ.26 : ನಗರದ ಬಂದರಿನಲ್ಲಿರುವ ಈಗಿನ ಜಿಲ್ಲಾಧಿಕಾರಿ ಕಚೇರಿ ಪಕ್ಕದಲ್ಲೇ ಇರುವ ಬ್ರಿಟೀಷರ ಕಾಲದಲ್ಲಿ ನಿರ್ಮಾಣಗೊಂಡ ಹಳೆ ಕಟ್ಟಡ "ಕಲೆಕ್ಟರೇಟ್ ಆಫೀಸು" ಕಟ್ಟಡವನ್ನು ಮ್ಯೂಸಿಯಂ ಆಗಿ ಪರಿವರ್ತಿಸಲು ಅಗತ್ಯ ಕ್ರಮ ಕೈಗೊಳ್ಳಲು ಕಂದಾಯ ಸಚಿವ ಕೃಷ್ಣ ಭೈರೇಗೌಡ ಜಿಲ್ಲಾಡಳಿತಕ್ಕೆ ಸೂಚಿಸಿದ್ದಾರೆ.
ಭಾನುವಾರ ನಗರದಲ್ಲಿ ಹಳೆ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿ, ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರೊಂದಿಗೆ ಕಟ್ಟಡ ವೀಕ್ಷಿಸಿ, ಪರಿಶೀಲಿಸಿದರು. ಬಳಿಕ ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಿದ ಅವರು, ಸುಮಾರು 200 ವರ್ಷಗಳ ಹಳೆಯ ಈ ಕಟ್ಟಡ ಈಗಲೂ ಸದೃಢವಾಗಿದೆ. ಬಹಳ ಅಪರೂಪದ ಇತಿಹಾಸ ಹೊಂದಿರುವ ಈ ಪಾರಂಪರಿಕ ಕಟ್ಟಡವನ್ನು ಮುಂದಿನ ಜನಾಂಗಕ್ಕೂ ರಕ್ಷಿಸುವ ಉದ್ದೇಶದಿಂದ ಇದನ್ನು ಮ್ಯೂಸಿಯಂ ಆಗಿ ಪರಿವರ್ತಿಸುವುದು ಉತ್ತಮವಾಗಿದೆ ಎಂದರು.



ಈ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಟ್ರಸ್ಟ್ ರಚಿಸಿ, ಪ್ರಮುಖ ವ್ಯಕ್ತಿಗಳನ್ನು ಸೇರಿಸುವಂತೆ ಅವರು ಸೂಚಿಸಿದರು. ಅಲ್ಲದೇ, ಇಲ್ಲಿ ಸ್ಟುಡಿಯೋ ನಿರ್ಮಾಣ, ತೆರೆದ ವೇದಿಕೆ, ಸಣ್ಣ ಉದ್ಯಾನವನ, ವಾಕಿಂಗ್ ಟ್ರ್ಯಾಕ್ ಮತ್ತಿತರ ಸೌಲಭ್ಯಗಳನ್ನು ಒದಗಿಸುವ ಬಗ್ಗೆ ಪರಿಶೀಲಿಸಲು ಕಂದಾಯ ಸಚಿವರು ತಿಳಿಸಿದರು. ಇಡೀ ವ್ಯವಸ್ಥೆಯನ್ನು ಸಂಪೂರ್ಣವಾಗಿ ಸರಕಾರದಿಂದಲೇ ನಿರ್ವಹಿಸುವಂತೆ ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಶಾಸಕರಾದ ಐವನ್ ಡಿಸೋಜ, ಮಂಜುನಾಥ್ ಭಂಡಾರಿ, ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಮತ್ತಿತರರು ಇದ್ದರು.
Convert old Mangalore DC office as heritage building Revenue Minister Krishna Byre Gowda. Revenue Minister Krishna Byre Gowda and District in charge Minister Dinesh Gundu Rao on Sunday directed Deputy Commissioner M.P. Mullai Muhilan to shift in a month to his office in the new office complex that has come up in Padil in Mangaluru.
26-05-26 11:03 pm
HK News Desk
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 09:02 pm
HK News Staffer
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm