ಬ್ರೇಕಿಂಗ್ ನ್ಯೂಸ್
27-01-25 08:36 pm Mangalore Correspondent ಕರಾವಳಿ
ಮಂಗಳೂರು, ಜ.27: ಮಂಗಳೂರು ನಗರ ವ್ಯಾಪ್ತಿಯ ಮೂರು ಶಾಲೆಗಳಿಗೆ ಬಾಂಬ್ ಬೆದರಿಕೆ ಇಮೇಲ್ ಸಂದೇಶ ಬಂದಿದ್ದು, ಪೊಲೀಸರು ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ಬಳಿಕ ಇದೊಂದು ಹುಸಿ ಬಾಂಬ್ ಬೆದರಿಕೆ ಎಂಬ ನಿರ್ಧಾರಕ್ಕೆ ಬಂದಿದ್ದಾರೆ.
ಪಾಂಡೇಶ್ವರ ಠಾಣೆ ವ್ಯಾಪ್ತಿಯ ಅತ್ತಾವರದ ಮಣಿಪಾಲ್ ಶಾಲೆ, ಜಪ್ಪಿನಮೊಗರು ಪ್ರೆಸಿಡೆನ್ಸಿ ಶಾಲೆ ಮತ್ತು ಪಿಯು ಕಾಲೇಜು ಹಾಗೂ ನೀರುಮಾರ್ಗ ಬಳಿಯ ಕೇಂಬ್ರಿಡ್ಜ್ ಶಾಲೆಗಳಿಗೆ ಆವರಣದಲ್ಲಿ ಐಇಡಿ ಬಾಂಬ್ ಗಳಿವೆ ಎಂದು ಬೆದರಿಕೆ ಇಮೇಲ್‌ಗಳು ಬಂದಿದ್ದವು. ಬಾಂಬ್ ಬೆದರಿಕೆ ಇಮೇಲ್ ತಿಳಿಯುತ್ತಿದ್ದಂತೆ ಪೊಲೀಸರಿಗೆ ಮಾಹಿತಿ ನೀಡಲಾಗಿತ್ತು. ಪೊಲೀಸರು ತೆರಳಿ ತಪಾಸಣೆ ನಡೆಸಿದ್ದಾರೆ. ಅಲ್ಲದೆ, ಬಾಂಬ್ ನಿಷ್ಕ್ರಿಯ ದಳಗಳು ಸಂಪೂರ್ಣ ತಪಾಸಣೆ ನಡೆಸಿವೆ.
ಪರಿಶೀಲನೆ ನಡೆಸಿದ್ದು, ಯಾವುದೇ ಅನುಮಾನಾಸ್ಪದ ವಸ್ತು ಕಂಡುಬಂದಿಲ್ಲ. ಇದಲ್ಲದೆ, ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ಸುರಕ್ಷತೆಗಾಗಿ ಶಾಲೆಗಳಲ್ಲಿ ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ. ಯಾವುದೇ ಅನುಮಾನಾಸ್ಪದ ಚಲನವಲನ ಕಂಡರೆ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಲು ಸೂಚಿಸಲಾಗಿದೆ. ಬೆದರಿಕೆ ಇಮೇಲ್‌ಗಳಿಗೆ ಸಂಬಂಧಿಸಿ ಪ್ರತ್ಯೇಕ ಪ್ರಕರಣ ದಾಖಲಿಸಿದ್ದು ವಿವರವಾದ ತನಿಖೆ ಕೈಗೊಳ್ಳಲಾಗುವುದು ಎಂದು ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಮಾಹಿತಿ ನೀಡಿದ್ದಾರೆ.
ಉಡುಪಿ ಶಾಲೆಯಲ್ಲೂ ಬೆದರಿಕೆ ಇಮೇಲ್
ಉಡುಪಿ ನಗರದ ಶಾರದಾ ರೆಸಿಡೆನ್ಸಿ ಸ್ಕೂಲ್ ಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದ್ದು ಶಾಲೆಯ ಸಿಬ್ಬಂದಿ ಭಯಕ್ಕೀಡಾಗಿ ಮಕ್ಕಳನ್ನು ಹೊರಕ್ಕೆ ಕಳಿಸಿದ್ದಾರೆ. ಕುಂಜಿಬೆಟ್ಟು ಎಂಜಿಎಂ ಕಾಲೇಜಿನ ಮೈದಾನದ ಸಮೀಪದ ಖಾಸಗಿ ಶಾಲೆಯ ಇಮೇಲ್ ಗೆ ಬಾಂಬ್ ಸ್ಪೋಟದ ಸಂದೇಶ ಬಂದಿದೆ. ಶಾಲೆಯವರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿ, ಮಕ್ಕಳನ್ನು ಶಾಲೆಯಿಂದ ಹೊರಗೆ ಕಳುಹಿಸಿ ಮೈದಾನದಲ್ಲಿ ಇರಿಸಿದ್ದಾರೆ. ಪೊಲೀಸರು ತಪಾಸಣೆ ಬಳಿಕ ಹುಸಿ ಬೆದರಿಕೆ ಎಂದು ಖಚಿತ ಪಡಿಸಿದ್ದಾರೆ.
Mangalore Udupi schools receive hoax bomb threat, police deployed for additional security. According to sources, the email claiming presence of explosive material was received by Manipal School in Attavar under the Pandeshwar Police Station limits, Presidency and Cambridge School in Neermarga under the Mangaluru Rural Police Station limits.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm