ಬ್ರೇಕಿಂಗ್ ನ್ಯೂಸ್
12-02-25 09:18 pm Mangalore Correspondent ಕರಾವಳಿ
ಮಂಗಳೂರು, ಫೆ.12 : ಮಂಗಳೂರಿನ ಕಾರ್ಮಿಕ ರಾಜ್ಯ ವಿಮಾ(ಇಎಸ್ಐ) ಆಸ್ಪತ್ರೆಯ ಸುಧಾರಣೆಗೆ ರಾಜ್ಯ ಸರ್ಕಾರ ಶೀಘ್ರ ’ರಾಜ್ಯ ಇಎಸ್ಐ ಸೊಸೈಟಿ’ಯನ್ನು ರಚಿಸಬೇಕೆಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರಿಗೆ ಪತ್ರ ಬರೆದು ಆಗ್ರಹಿಸಿದ್ದಾರೆ.
ಈ ಬಗ್ಗೆ ಸಚಿವರಿಗೆ ಪತ್ರ ಬರೆದಿರುವ ಸಂಸದರು, "ರಾಜ್ಯ ಇಎಸ್ಐ ಸೊಸೈಟಿ ರಚನೆಯಿಂದ ಇಎಸ್ಐ ಆಸ್ಪತ್ರೆಗಳಲ್ಲಿ ಮೂಲಸೌಕರ್ಯದ ತ್ವರಿತ ಸುಧಾರಣೆ, ವೈದ್ಯಕೀಯ ಉಪಕರಣಗಳ ಖರೀದಿ, ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಅನುಕೂಲವಾಗುವುದು ಮಾತ್ರವಲ್ಲದೇ ಅನುಭವಿ ತಜ್ಞ ವೈದ್ಯರು ಮತ್ತು ನುರಿತ ಸಿಬ್ಬಂದಿ ನೇಮಕ ಮಾಡಲು ಇದು ಸಹಾಯಕವಾಗಲಿದೆ" ಎಂದು ತಿಳಿಸಿದ್ದಾರೆ.


ಕ್ಯಾ. ಚೌಟ ಅವರು ಮಂಗಳೂರು ಇಎಸ್ಐ ಆಸ್ಪತ್ರೆಯ ಸಮಸ್ಯೆಗಳ ಕುರಿತು ಚರ್ಚಿಸಲು ಇತ್ತೀಚೆಗೆ ದೆಹಲಿಯಲ್ಲಿ ನೌಕರರ ರಾಜ್ಯ ವಿಮಾ ನಿಗಮದ (ESIC) ಮಹಾನಿರ್ದೇಶಕ ಅಶೋಕ್ ಕುಮಾರ್ ಸಿಂಗ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದ ವೇಳೆ ಇಎಸ್ಐಸಿಗೆ ಸಂಬಂಧಿಸಿದ ರಾಜ್ಯದ ಎಲ್ಲಾ ಕಾರ್ಯ ಚಟುವಟಿಕೆ ಸುಗಮಗೊಳಿಸಲು ಮತ್ತು ಕೇಂದ್ರದಿಂದ ಅನುದಾನ ಬಿಡುಗಡೆಯನ್ನು ಸಮರ್ಥವಾಗಿ ನಿರ್ವಹಿಸಲು ರಾಜ್ಯ ಸರ್ಕಾರವು ಪ್ರತ್ಯೇಕ ಸೊಸೈಟಿ ರಚಿಸಬೇಕು. ಅದು ರಾಜ್ಯದಲ್ಲಿನ ಎಲ್ಲಾ ಇಎಸ್ಐಸಿಗೆ ಸಂಬಂಧಿಸಿದ ವಿಷಯಗಳಿಗೆ ಮತ್ತು ಕೇಂದ್ರದ ಫಂಡ್ ವಿತರಣೆಗೆ ಆಡಳಿತ ಮಂಡಳಿಯಾಗಿದ್ದು, ಕರ್ನಾಟಕ ಸರಕಾರದ ಮುಖ್ಯ ಕಾರ್ಯದರ್ಶಿ ಮತ್ತು ಕಾರ್ಮಿಕ ಕಾರ್ಯದರ್ಶಿಗಳು ಈ ಸೊಸೈಟಿಯ ಮುಖ್ಯಸ್ಥರಾಗಿರುತ್ತಾರೆ ಎಂದು ಡಿಜಿ ತಿಳಿಸಿದ್ದರು. ಈ ಹಿನ್ನಲೆಯಲ್ಲಿ ಶೀಘ್ರವಾಗಿ "ರಾಜ್ಯ ಇಎಸ್ಐ ಸೊಸೈಟಿ " ರಚನೆ ಸಂಬಂಧ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬೇಕೆಂದು ಸಂಸದರು ಕಾರ್ಮಿಕ ಸಚಿವರನ್ನು ಒತ್ತಾಯಿಸಿದ್ದಾರೆ.
"ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯವು ಕರ್ನಾಟಕದ ಮುಖ್ಯ ಕಾರ್ಯದರ್ಶಿ ಮತ್ತು ಕಾರ್ಮಿಕ ಕಾರ್ಯದರ್ಶಿಗಳನ್ನು ಸಂಪರ್ಕಿಸಿ 'ರಾಜ್ಯ ಇಎಸ್ಐ ಸೊಸೈಟಿ ರಚನೆ' ಕುರಿತು ಈಗಾಗಲೇ ಮನವಿ ಸಲ್ಲಿಸಿದೆ. ಈ ಸೊಸೈಟಿ ರಚನೆಯಿಂದ ಜಿಲ್ಲೆಯ ಶ್ರಮಿಕ ವರ್ಗಕ್ಕೆ ಅನುಕೂಲ ಕಲ್ಪಿಸಲು ಹಾಗೂ ಇಎಸ್ಐ ಆಸ್ಪತ್ರೆಗೆ ಎಲ್ಲಾ ರೀತಿಯ ಮೂಲಭೂತ ಸೌಕರ್ಯ ಅಭಿವೃದ್ದಿಗೆ ದೊಡ್ಡ ರೀತಿಯಲ್ಲಿ ಸಹಕಾರಿಯಾಗಲಿದೆ. ಆದ್ದರಿಂದ, ಸೊಸೈಟಿ ರಚನೆ ಕುರಿತು ತ್ವರಿತ ಗತಿಯಲ್ಲಿ ಕ್ರಮ ಕೈಗೊಳ್ಳಲು ಮತ್ತು ಸಚಿವಾಲಯದ ಮಾರ್ಗಸೂಚಿಗಳ ಪ್ರಕಾರ ರಾಜ್ಯ ಇಎಸ್ಐ ಸೊಸೈಟಿ ರಚಿಸಲು ಮುಖ್ಯ ಕಾರ್ಯದರ್ಶಿ / ಕಾರ್ಮಿಕ ಕಾರ್ಯದರ್ಶಿಗಳಿಗೆ ತಾವು ನಿರ್ದೇಶನ ನೀಡಬೇಕು ಎಂದು ಪ್ರತ್ರದಲ್ಲಿ ಕ್ಯಾ. ಚೌಟ ಆಗ್ರಹಿಸಿದ್ದಾರೆ.
ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿದ್ದ ಸಂಸದ ಚೌಟ
ಜನವರಿ ಮೊದಲ ವಾರದಲ್ಲಿ ಸಂಸದ ಕ್ಯಾ.ಚೌಟ ಮಂಗಳೂರಿನ ಇಎಸ್ಐ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿದಾಗ ಕಾರ್ಮಿಕರಿಗೆ ವೈದ್ಯಕೀಯ ಸೇವೆಗಳು ಸಮರ್ಪಕವಾಗಿ ಸಿಗದಿರುವ ವಿಚಾರ ಹಾಗೂ ಅಲ್ಲಿನ ಅವ್ಯವಸ್ಥೆ ಬೆಳಕಿಗೆ ಬಂದಿತ್ತು. 100 ಹಾಸಿಗೆಗಳ ಸಾಮರ್ಥ್ಯವಿರುವ ಈ ಆಸ್ಪತ್ರೆಯಲ್ಲಿ, 70 ಬೆಡ್ ಮಾತ್ರ ಉಪಯೋಗಕ್ಕೆ ಯೋಗ್ಯವಾಗಿತ್ತು. ಇಲ್ಲಿ 28 ವೈದ್ಯರು ಸೇವೆಗೆ ಅಗತ್ಯವಿದ್ದು, 5 ವೈದ್ಯರು ಮಾತ್ರ ಕಾರ್ಯ ನಿರ್ವಹಿಸುತ್ತಿದ್ದಾರೆ. ಶ್ರಮಿಕ ವರ್ಗಕ್ಕೆ ಕೇವಲ ಜನರಲ್ ಟ್ರೀಟ್ ಮೆಂಟ್ ದೊರಕುತ್ತಿದ್ದು ತೀರಾ ಅಗತ್ಯವಾಗಿರುವ ಪ್ರಸೂತಿ, ಮಕ್ಕಳ, ಆರ್ಥೋ ಇತ್ಯಾದಿ ತಜ್ಞ ವೈದ್ಯರ ಹಾಗೂ ನುರಿತ ಸಿಬ್ಬಂದಿ ವರ್ಗದ ಕೊರತೆ ಕಂಡುಬಂದ ಹಿನ್ನಲೆ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ಇತ್ತೀಚೆಗೆ ದೆಹಲಿಯಲ್ಲಿ ESIC ಡಿಜಿ ಅವರನ್ನು ಸಂಸದರು ಭೇಟಿಯಾಗಿ ಸಮಸ್ಯೆ ಗಮನಕ್ಕೆ ತಂದಿದ್ದರು.
Dakshina Kannada Member of Parliament Capt. Brijesh Chowta on Wednesday, February 12, urged Karnataka Labour Department to forthwith establish Employees State Insurance (ESI) Society for the smooth running of ESI hospitals in the State, including the one in Mangaluru.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm