ಬ್ರೇಕಿಂಗ್ ನ್ಯೂಸ್
25-02-25 02:34 pm Mangalore Correspondent ಕರಾವಳಿ
ಮಂಗಳೂರು, ಫೆ.25 : ಮಹಿಳೆಯೊಬ್ಬರು ಚಲಾಯಿಸುತ್ತಿದ್ದ ಕಾರು ನಿಯಂತ್ರಣ ಕಳೆದುಕೊಂಡು ಅಂಗಡಿಗೆ ನುಗ್ಗಿದ್ದು ಅಂಗಡಿ ಹೊರಗಡೆ ಕುಳಿತುಕೊಂಡಿದ್ದ ವೃದ್ಧೆಯೊಬ್ಬರು ಕಾರಿನ ಹೊಡೆತಕ್ಕೆ ಸಿಲುಕಿ ದುರಂತ ಸಾವನ್ನಪ್ಪಿದ ಘಟನೆ ಬಂಟ್ವಾಳ ತಾಲೂಕಿನ ಚೆನ್ನೈತ್ತೋಡಿ ಗ್ರಾಮದ ಪಾಲೆದಮರ ಎಂಬಲ್ಲಿ ನಡೆದಿದೆ.
ಅಪಘಾತದ ಭೀಕರ ದೃಶ್ಯ ಅಂಗಡಿ ಮುಂದೆ ಅಳವಡಿಸಿದ್ದ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು ಕಾರಿನ ಧಾವಂತಕ್ಕೆ ಸಾಕ್ಷಿಯಾಗಿದೆ. ವಾಮದಪದವು ನಿವಾಸಿ ಸುಮತಿ(91) ಮೃತಪಟ್ಟ ವೃದ್ಧ ಮಹಿಳೆ.



ಕಾರನ್ನು ಶೋಭಾ ಎಂಬವರು ಚಲಾಯಿಸುತ್ತಿದ್ದು ಅಂಗಡಿ ಮುಂದೆ ತಲುಪಿದಾಗ ನಿಯಂತ್ರಣ ಕಳೆದುಕೊಂಡು ಅಂಗಡಿಯತ್ತ ನುಗ್ಗಿ ಬಂದಿದೆ. ಮೊದಲಿಗೆ ಅಂಗಡಿಗೆ ಬಂದಿದ್ದ ಗ್ರಾಹಕ ಲೂಯಿಸ್ ಡಿಕೋಸ್ತಾ ಅವರಿಗೆ ಕಾರು ಡಿಕ್ಕಿ ಹೊಡೆದಿದ್ದು ದೂರಕ್ಕೆ ಬಿದ್ದಿದ್ದಾರೆ. ಬಳಿಕ ಅಂಗಡಿ ಮುಂದೆ ಕುಳಿತಿದ್ದ ವೃದ್ಧೆ ಸುಮತಿಗೆ ಕಾರು ನೇರವಾಗಿ ಡಿಕ್ಕಿಯಾಗಿದೆ. ಗಂಭೀರ ಗಾಯಗೊಂಡಿದ್ದ ಸುಮತಿ ಅವರನ್ನು ಮಂಗಳೂರು ಹೊರವಲಯದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಚಿಕಿತ್ಸೆ ಫಲಕಾರಿಯಾಗದೆ ಮಹಿಳೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಘಟನೆ ಸಂಬಂಧ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A heartbreaking #accident occurred in #Bantwal, #Mangalore, where a 91-year-old woman named Sumathi lost her life after being struck by a vehicle while sitting near her son's shop. #liveaccident pic.twitter.com/6xvszb3Jlz
— Headline Karnataka (@hknewsonline) February 25, 2025
A heartbreaking accident occurred in Bantwal, Mangalore, where a 91-year-old woman named Sumathi lost her life after being struck by a vehicle while sitting near her son's shop. The incident has garnered significant attention, with a video of the accident circulating widely on social media.
26-05-26 11:03 pm
HK News Desk
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 09:02 pm
HK News Staffer
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm