ಬ್ರೇಕಿಂಗ್ ನ್ಯೂಸ್
25-02-25 10:58 pm Mangalore Correspondent ಕರಾವಳಿ
ಮಂಗಳೂರು, ಫೆ.25: ಸೈಬರ್ ವಂಚನೆ ಪ್ರಕರಣದ ಆರೋಪಿಗಳ ಜೊತೆಗೆ ಸುತ್ತಾಟಕ್ಕೆ ಹೋಗಿ ಪೊಲೀಸರು ಸೆಲ್ಫಿ ತೆಗೆದುಕೊಂಡ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್, ಘಟನೆ ಸಂಬಂಧಿಸಿ ಉರ್ವಾ ಠಾಣೆಯ ಹೆಡ್ ಕಾನ್ಸ್ ಟೇಬಲ್ ಪೀಟರ್ ಡಿಸೋಜ ಅವರನ್ನು ಅಮಾನತುಗೊಳಿಸಿ ಆದೇಶಿಸಿದ್ದಾರೆ. ಜೊತೆಗೆ, ಒಟ್ಟು ಪ್ರಕರಣದಲ್ಲಿ ನಿರ್ಲಕ್ಷ್ಯ ತೋರಿದ ಇನ್ಸ್ ಪೆಕ್ಟರ್ ವಿರುದ್ಧ ಶಿಸ್ತು ಕ್ರಮ ಜರುಗಿಸಲು ಮುಂದಾಗಿದ್ದಾರೆ.
ಆರೋಪಿಗಳ ಜೊತೆಗೆ ಪೊಲೀಸ್ ಸಿಬಂದಿ ಸೆಲ್ಫಿ ತೆಗೆದುಕೊಳ್ಳುವುದು ಇಲಾಖೆಯ ಶಿಸ್ತನ್ನು ಉಲ್ಲಂಘಿಸಿದಂತೆ. ಹೀಗಾಗಿ ಸೆಲ್ಫಿ ತೆಗೆದುಕೊಂಡ ಸಿಬಂದಿ ಪೀಟರ್ ಡಿಸೋಜ ಅವರನ್ನು ಇಲಾಖಾ ತನಿಖೆ ಬಾಕಿಯಿರಿಸಿ ತಕ್ಷಣಕ್ಕೆ ಅಮಾನತು ಮಾಡಲಾಗಿದೆ ಎಂದು ತಿಳಿದುಬಂದಿದೆ. ಸಿಸಿಬಿ ಎಸಿಪಿ ಮನೋಜ್ ನಾಯ್ಕ್ ಅವರು ಪ್ರಾಥಮಿಕ ತನಿಖೆ ನಡೆಸಿದ್ದು, ಮೇಲ್ನೋಟಕ್ಕೆ ತಪ್ಪು ಕಂಡುಬಂದ ಹಿನ್ನೆಲೆಯಲ್ಲಿ ಕ್ರಮ ಜರುಗಿಸಿದ್ದಾರೆ.



ಅಮೆಜಾನ್ ಕಂಪನಿಗೆ ವಂಚನೆ ಎಸಗಿದ ಪ್ರಕರಣದಲ್ಲಿ ಆರೋಪಿಗಳನ್ನು ಕಸ್ಟಡಿಗೆ ಪಡೆದ ಸಂದರ್ಭದಲ್ಲಿ ಪೊಲೀಸರು ರಾಜಸ್ಥಾನಕ್ಕೆ ತೆರಳಿದಾಗ ಸೆಲ್ಫಿ ತೆಗೆದುಕೊಂಡಿದ್ದರು ಎನ್ನಲಾಗಿದೆ. ಪ್ರಕರಣದ ತನಿಖೆಯ ಹೊಣೆಯನ್ನು ಉರ್ವಾ ಇನ್ಸ್ ಪೆಕ್ಟರ್ ವಹಿಸಿಕೊಂಡಿದ್ದರು. ಈ ವೇಳೆ, ಬೆಂಗಳೂರು ಏರ್ಪೋರ್ಟ್ ನಿಂದ ರಾಜಸ್ಥಾನದ ಜೈಪುರಕ್ಕೆ ಇತರೇ ಸಿಬಂದಿಯೊಂದಿಗೆ ವಿಮಾನದಲ್ಲಿ ತೆರಳಿದ್ದರು. ವಿಮಾನದ ಟಿಕೆಟ್ ಮೊತ್ತವನ್ನು ಉರ್ವಾ ಇನ್ಸ್ ಪೆಕ್ಟರ್ ಅವರೇ ಖಾಸಗಿಯಾಗಿ ಭರಿಸಿದ್ದರು. ಆರೋಪಿಗಳು ಟಿಕೆಟ್ ವ್ಯವಸ್ಥೆ ಮಾಡಿರಲಿಲ್ಲ.
ಇದಲ್ಲದೆ, ಪೊಲೀಸ್ ಠಾಣೆಯ ಸಿಸಿಟಿವಿಯನ್ನು ಚೆಕ್ ಮಾಡಲಾಗಿದ್ದು, ಕಸ್ಟಡಿ ಸಂದರ್ಭದಲ್ಲಿ ಠಾಣೆಯ ಲಾಕಪ್ ನಲ್ಲಿಯೇ ಆರೋಪಿಗಳನ್ನು ಇರಿಸಿಕೊಳ್ಳಲಾಗಿತ್ತು. ವಿಚಾರಣೆ ಸಲುವಾಗಿ ಮಾತ್ರ ಹೊರಗೆ ಕರೆದೊಯ್ಯಲಾಗಿತ್ತು. ಆರೋಪಿಗಳಿಗೆ ವಿಶೇಷ ವ್ಯವಸ್ಥೆ ಮಾಡಲಾಗಿದೆ ಎನ್ನುವ ಆರೋಪದ ಬಗ್ಗೆ ಯಾವುದೇ ಸಾಕ್ಷ್ಯ ಲಭಿಸಿಲ್ಲ ಎಂದು ಎಸಿಪಿ ಮನೋಜ್ ನಾಯ್ಕ್ ಅವರು, ಕಮಿಷನರ್ ಅವರಿಗೆ ವರದಿ ನೀಡಿದ್ದಾರೆ. ಮೂಡುಬಿದ್ರೆಯ ಕಾಲೇಜು ವಿದ್ಯಾರ್ಥಿಗಳು ಠಾಣೆಗೆ ಭೇಟಿ ನೀಡಿದ್ದಾಗ, ಠಾಣೆಯೊಳಗೆ ಕುಳಿತುಕೊಂಡಿದ್ದ ಆರೋಪಿ ಎದ್ದು ನಿಂತಿದ್ದಾನೆ. ಆದರೆ ವಿದ್ಯಾರ್ಥಿಗಳಿಗೆ ಜಾಗೃತಿ ಶಿಬಿರವನ್ನು ಆರೋಪಿಯಿಂದ ಮಾಡಿಸಿರಲಿಲ್ಲ ಎಂದು ಕಮಿಷನರ್ ಸ್ಪಷ್ಟನೆ ನೀಡಿದ್ದಾರೆ.
Mangalore Police Commissioner Anupam Agrawal has suspended police constable peter dsouza and ordered disciplinary proceedings for taking a selfie with an accused arrested in a cyber crime case.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm