ಬ್ರೇಕಿಂಗ್ ನ್ಯೂಸ್
02-03-25 09:36 pm Udupi Correspondent ಕರಾವಳಿ
ಉಡುಪಿ, ಮಾ 02: ನಾಳೆಯಿಂದ ಬಜೆಟ್ ಅಧಿವೇಶನ ಆರಂಭವಾಗುತ್ತಿದೆ. ಸಿದ್ದರಾಮಯ್ಯ 16 ನೇ ಬಜೆಟ್ ಮಂಡಿಸಲಿದ್ದಾರೆ. ಯಡಿಯೂರಪ್ಪನವರ ಬಜೆಟ್ ನಲ್ಲಿ ಎಲ್ಲಾ ಜಿಲ್ಲೆಗಳಿಗೂ ನಮಗೇನು ಸಿಗುತ್ತೆ ಎಂಬ ಕಾತರ ಇತ್ತು. ತುಳುನಾಡಿಗೆ ಯಡಿಯೂರಪ್ಪನವರು ವಿಶೇಷ ಅನುದಾನ ನೀಡುತ್ತಿದ್ದರು. ಈ ಸರ್ಕಾರದಲ್ಲಿ ಆ ಪರಿಸ್ಥಿತಿ ಇಲ್ಲ ಎಂದು ಜಿಲ್ಲಾ ಪ್ರವಾಸದಲ್ಲಿರುವ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿವೈ ವಿಜಯೇಂದ್ರ ವ್ಯಕ್ತಪಡಿಸಿದರು.
ಸಿದ್ದರಾಮಯ್ಯನವರನ್ನು ನೋಡಿದರೆ ನಮಗೆ ಅಯ್ಯೋ ಪಾಪ ಅನಿಸುತ್ತೆ ;
ಉಡುಪಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯನವರನ್ನು ನೋಡಿದರೆ ನಮಗೆ ಅಯ್ಯೋ ಪಾಪ ಅನಿಸುತ್ತೆ. ಗ್ಯಾರೆಂಟಿಗಳಿಂದ ತಮ್ಮ ಕೈ ತಾವೇ ಕಟ್ಟಿ ಹಾಕಿಕೊಂಡಿದ್ದಾರೆ. ರಾಜ್ಯದ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ, ನೀರಾವರಿ ಲೋಕೋಪಯೋಗಿ ಇಲಾಖೆಯಲ್ಲಿ ಹಣವೇ ಇಲ್ಲ. ವಿದ್ಯುತ್ ಬಿಲ್ ನ್ನು ಕೂಡ ಕಟ್ಟಲು ಸಾಧ್ಯವಿಲ್ಲದ ಪರಿಸ್ಥಿತಿಗೆ ಬಂದು ನಿಂತಿದೆ. ಸ್ವತಃ ಇಂಧನ ಸಚಿವ ಜಾರ್ಜ್ ಒಪ್ಪಿಕೊಂಡಿದ್ದಾರೆ. ವಿವಿಧ ಇಲಾಖೆಗಳು 6,000 ಕೋಟಿ ರೂಪಾಯಿ ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿವೆ. ಇದು ಸರ್ಕಾರದ ಆಡಳಿತ ವೈಖರಿಗೆ ಹಿಡಿದ ಕೈಗಡಿಯಾರವಾಗಿದೆ ಎಂದರು.
9 ವಿಶ್ವವಿದ್ಯಾಲಯಗಳನ್ನು ರಾಜ್ಯ ಸರ್ಕಾರ ಮುಚ್ಚಿ ಹಾಕಿದೆ ;
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಮುಖ್ಯಮಂತ್ರಿಗಳು ತಮ್ಮ ಕ್ಷೇತ್ರಕ್ಕೆ ಯಾವಾಗ ಅನುದಾನ ಕೊಡುತ್ತಾರೆ ಎಂದು ಎಲ್ಲಾ ಶಾಸಕರು ಕಾಯುವಂತಾಗಿದೆ. ಇಂಥ ಸ್ಥಿತಿ ನಮ್ಮ ರಾಜ್ಯಕ್ಕೆ ಯಾವತ್ತೂ ಬಂದಿರಲಿಲ್ಲ. 9 ವಿಶ್ವವಿದ್ಯಾಲಯಗಳನ್ನು ರಾಜ್ಯ ಸರ್ಕಾರ ಮುಚ್ಚಿ ಹಾಕಿದೆ. ವಿಶ್ವವಿದ್ಯಾಲಯ ಅನುದಾನ ಕೊಡಲು ರಾಜ್ಯ ಸರ್ಕಾರಕ್ಕೆ ಅಸಾಧ್ಯವಾಗಿದೆ ಎಂದು ಕಿಡಿಕಾರಿದರು.
Feels pitty while seeing CM Siddaramaiah says BJP President BY Vijayendra in udupi. He said that the Congress government has put the financial system of the State completely down. 9 universities has been closed. They are unable to pay the free bees which they promised he added.
04-08-25 01:00 pm
Bangalore Correspondent
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
Dharmasthala News, High Court; ಧರ್ಮಸ್ಥಳ ಸುದ್ದ...
01-08-25 11:34 pm
‘Comedy Kiladigalu’, Chandrashekhar Siddi Sui...
01-08-25 10:45 pm
04-08-25 05:11 pm
HK News Desk
ಗೆಳೆಯನೊಂದಿಗೆ ಪತ್ನಿಯ ಸರಸ ; ಪರಿ ಪರಿ ಬೇಡಿಕೊಂಡರೂ...
04-08-25 02:16 pm
ವಿಮಾನದಲ್ಲಿ ಸಹ ಪ್ರಯಾಣಿಕನಿಗೆ ಕಪಾಳಮೋಕ್ಷ ; ಅಶಿಸ್ತ...
03-08-25 05:44 pm
ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ನರೇಂದ್ರ ಮೋದಿ, ಭಾಗ...
03-08-25 04:25 pm
ಮಾಲೆಗಾಂವ್ ಪ್ರಕರಣದಲ್ಲಿ ಮೋಹನ್ ಭಾಗವತ್ ಬಂಧಿಸುವುದಕ...
01-08-25 10:48 pm
04-08-25 10:58 pm
Mangalore Correspondent
Dharmasthala Case, Jayan T: ಧರ್ಮಸ್ಥಳ ಕೇಸ್, ಪೊ...
04-08-25 10:34 pm
Mangalore Congress: ಮೆಸ್ಕಾಂ ನೌಕರರ ಪಿಂಚಣಿಗೆ ಗ್...
04-08-25 09:51 pm
Dharmasthala Case, SIT, Body Found: ಬಂಗ್ಲೆಗುಡ...
04-08-25 07:38 pm
ವಿದ್ಯುತ್ ನಿಗಮಗಳ ನೌಕರರಿಗೆ ಪಿಂಚಣಿಗಾಗಿ ಗ್ರಾಹಕರಿ...
04-08-25 06:05 pm
03-08-25 10:11 pm
Mangalore Correspondent
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm