ಬ್ರೇಕಿಂಗ್ ನ್ಯೂಸ್
02-03-25 11:01 pm Mangalore Correspondent ಕರಾವಳಿ
ಪುತ್ತೂರು, ಮಾ.2 : ಕೆಎಸ್ ಆರ್ ಟಿಸಿ ಬಸ್ ಬರುತ್ತಿದ್ದಾಗ ಆಟೋ ರಿಕ್ಷಾವೊಂದು ಚಾಲಕನ ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದಿದ್ದು ರಿಕ್ಷಾದಲ್ಲಿದ್ದ ತಾಯಿ, ಮಗು ಮೃತಪಟ್ಟ ದಾರುಣ ಘಟನೆ ಪುತ್ತೂರು ಪೇಟೆ ಹೊರವಲಯದ ಮಂಜಲ್ಪಡ್ಪು ಎಂಬಲ್ಲಿ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ಸಂಜೆ ನಡೆದಿದೆ.
ಮೃತರನ್ನು ಕೆದಂಬಾಡಿ ನಿವಾಸಿಗಳಾದ ಜಮೀಲ(49) ಹಾಗೂ ತಪ್ಸಿಬ್(5) ಎಂದು ಗುರುತಿಸಲಾಗಿದೆ. ಮಂಗಳೂರಿನಿಂದ ಪುತ್ತೂರಿನತ್ತ ವೇಗವಾಗಿ ಬರುತ್ತಿದ್ದ ಕೆಎಸ್ ಆರ್ ಟಿಸಿ ಬಸ್ಸಿಗೆ ಪುತ್ತೂರು ಕಡೆಯಿಂದ ಕಬಕ ಕಡೆಗೆ ಬರುತ್ತಿದ್ದ ಆಟೋ ರಿಕ್ಷಾ ಡಿಕ್ಕಿಯಾಗಿದೆ. ಡಿಕ್ಕಿಯಾದ ದೃಶ್ಯ ಸ್ಥಳೀಯ ಕಟ್ಟಡದ ಸಿಸಿಟಿವಿಯಲ್ಲಿ ದಾಖಲಾಗಿದ್ದು ಆಟೋ ನೇರವಾಗಿ ರಸ್ತೆ ನಡುವೆ ಬಂದಿದ್ದು ಬಸ್ಸನ್ನು ನೋಡಿ ತಪ್ಪಿಸಲೆಂದು ಹೋದಾಗ ಪಲ್ಟಿಯಾಗಿದೆ.

ಕೆದಂಬಾಡಿ ಗ್ರಾಮದ ನಿವಾಸಿ ಆಟೋ ಚಾಲಕ ಮಹಮ್ಮದ್ ಎಂಬವರು ತನ್ನ ಪತ್ನಿ ಮತ್ತು ಮೊಮ್ಮಗನನ್ನು ಕುಳ್ಳಿರಿಸಿಕೊಂಡು ಭಾನುವಾರ ಸಂಜೆ ಮನೆ ಕಡೆಗೆ ಹೋಗುತ್ತಿದ್ದರು. ಆಟೋ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗುತ್ತಲೇ ಅದಕ್ಕೆ ಬಸ್ ಡಿಕ್ಕಿಯಾಗಿದ್ದು ಅಪ್ಪಚ್ಚಿಯಾಗಿದೆ. ಅದರಲ್ಲಿ ಪ್ರಯಾಣಿಸುತ್ತಿದ್ದ ಚಾಲಕ ಮಹಮ್ಮದ್ ಅವರ ಪತ್ನಿ ಜಮೀಲ(52) ಮತ್ತು ಅವರ ಮೊಮ್ಮಗ ತಪ್ಸಿಬ್(5) ಇದರ ನಡುವೆ ಸಿಕ್ಕಿಕೊಂಡು ಮೃತಪಟ್ಟಿದ್ದಾರೆ. ರಿಕ್ಷಾ ಚಾಲಕ ಮಹಮ್ಮದ್ ಗಂಭೀರ ಗಾಯಗೊಂಡಿದ್ದಾರೆ.
ಮಹಮ್ಮದ್ ಅವರು ಪತ್ನಿ, ಮೊಮ್ಮಗನ ಜೊತೆಗೆ ಬಟ್ಟೆ ಖರೀದಿಸಿ ರಿಕ್ಷಾದಲ್ಲಿ ಮನೆಯತ್ತ ತೆರಳುತ್ತಿದ್ದಾಗ ಘಟನೆ ಸಂಭವಿಸಿದೆ. ಪುತ್ತೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Puttur KSRTC bus Auto accident, wife and five year old grandson killed. A devastating accident occurred at puttur when an auto rickshaw lost control and collided with KSRTC bus, resulting in the tragic deaths of a mother and her young child.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm