ಬ್ರೇಕಿಂಗ್ ನ್ಯೂಸ್
03-03-25 09:59 pm Mangalore Correspondent ಕರಾವಳಿ
ಪುತ್ತೂರು, ಮಾ.3 : ಪುತ್ತೂರು ಮೂಲದ ನವವಿವಾಹಿತ ಮಹಿಳೆಯೊಬ್ಬರು ಬೆಂಗಳೂರಿನ ಸಂಬಂಧಿಕರ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು ಸಾವಿನ ಬಗ್ಗೆ ಹೆತ್ತವರು ಸಂಶಯ ವ್ಯಕ್ತಪಡಿಸಿದ್ದಾರೆ.
ಪೂಜಾಶ್ರೀ (23) ನೇಣಿಗೆ ಶರಣಾದ ಮಹಿಳೆ. ಈಕೆ ಪುತ್ತೂರಿನ ಕಾಣಿಯೂರು ಗ್ರಾಮದ ಬಾಕಿಮಾರು ನಿವಾಸಿಯಾಗಿದ್ದು, ಬೆಳ್ತಂಗಡಿಯ ಪಡಂಗಡಿ ಬರಾಯ ನಿವಾಸಿ ಪ್ರಕಾಶ್ ಎಂಬವರನ್ನು 10 ತಿಂಗಳ ಹಿಂದೆ ಮದುವೆಯಾಗಿದ್ದರು. ಕೆಲಸ ಹುಡುಕುವುದಕ್ಕಾಗಿ ಎರಡು ತಿಂಗಳ ಹಿಂದೆ ಪೂಜಾಶ್ರೀಯನ್ನು ಪತಿ ಪ್ರಕಾಶ್ ಬೆಂಗಳೂರಿನಲ್ಲಿರುವ ತನ್ನ ಸಂಬಂಧಿಕರ ಮನೆಗೆ ಕಳುಹಿಸಿಕೊಟ್ಟಿದ್ದರು.
ಸಂಬಂಧಿಕರ ಮನೆಯಲ್ಲಿದ್ದ ಪೂಜಾಶ್ರೀ ಅಲ್ಲಿಯೇ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಪ್ರಕಾಶ್ ಬರಾಯ ಗ್ರಾಮದಲ್ಲಿ ಕೃಷಿ ಮಾಡಿಕೊಂಡಿದ್ದು ಪತ್ನಿ ಕೆಲಸ ಮಾಡುವ ಹಂಬಲ ವ್ಯಕ್ತಪಡಿಸಿದ್ದಕ್ಕೆ ಬೆಂಗಳೂರಿಗೆ ಕಳಿಸಿದ್ದರು. ಆದರೆ ಸೂಕ್ತ ಕೆಲಸ ಸಿಗದ ಕಾರಣವೋ ಏನೋ ಸಾವಿಗೆ ಶರಣಾಗಿದ್ದಾರೆ.
ಪೂಜಾಶ್ರೀ ಆತ್ಮಹತ್ಯೆಗೇನು ಕಾರಣವೆಂದು ತಿಳಿದುಬಂದಿಲ್ಲ. ಆದರೆ ದಿಢೀರ್ ಆಗಿ ಆತ್ಮಹತ್ಯೆ ಮಾಡಿಕೊಂಡಿದ್ದರ ಬಗ್ಗೆ ಹೆತ್ತವರು ಅನುಮಾನ ವ್ಯಕ್ತಪಡಿಸಿದ್ದಾರೆ. ಘಟನೆ ಸಂಬಂಧ ಬೆಂಗಳೂರಿನ ಜಾಲಹಳ್ಳಿ ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Puttur newly wed girl commits suicide in Bangalore. The deceased has been identified as Poojashree. Police are now investigating the case
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm