ಬ್ರೇಕಿಂಗ್ ನ್ಯೂಸ್
05-03-25 09:30 pm Mangalore Correspondent ಕರಾವಳಿ
ಮಂಗಳೂರು, ಮಾ.5 : ಫರಂಗಿಪೇಟೆಯ ಪಿಯುಸಿ ವಿದ್ಯಾರ್ಥಿ ದಿಗಂತ್ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿ ವಿಧಾನಸಭೆ ಅಧಿವೇಶನದಲ್ಲಿ ಸ್ಪೀಕರ್ ಯುಟಿ ಖಾದರ್ ಅವರೇ ಪ್ರಸ್ತಾಪ ಎತ್ತಿದ್ದು, ತನಿಖೆಯ ಪ್ರಗತಿ ಎಷ್ಟರ ಮಟ್ಟಿಗೆ ಆಗಿದೆ ಎನ್ನುವ ಬಗ್ಗೆ ಸಂಬಂಧಪಟ್ಟ ಸಚಿವರಲ್ಲಿ ಪ್ರಶ್ನೆ ಎತ್ತಿದ್ದಾರೆ.
ಹೆತ್ತವರು ತುಂಬ ಚಿಂತೆಗೆ ಒಳಗಾಗಿದ್ದಾರೆ, ನನ್ನ ಕ್ಷೇತ್ರದ ಫರಂಗಿಪೇಟೆಯಲ್ಲಿ ಘಟನೆಯಾಗಿದ್ದು, ರಾಜ್ಯ ಸರಕಾರದ ತನಿಖೆ ಏನು ಮಾಡಿದೆ ಎಂದು ಸ್ಪೀಕರ್ ಕೇಳಿದ್ದಾರೆ. ಗೃಹ ಸಚಿವರ ಅನುಪಸ್ಥಿತಿಯಲ್ಲಿ ಉತ್ತರ ನೀಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಪಿಯುಸಿ ವಿದ್ಯಾರ್ಥಿ ದಿಗಂತ್ ಮಂಗಳೂರಿನ ಕಪಿತಾನಿಯೋ ಶಾಲೆಯಲ್ಲಿ ಕಲಿಯುತ್ತಿದ್ದು, ಫೆ.25ರಂದು ದೇವಸ್ಥಾನಕ್ಕೆಂದು ಹೇಳಿ ಹೋದಾತ ನಾಪತ್ತೆಯಾಗಿದ್ದಾನೆ. ಈ ಬಗ್ಗೆ ಮಂಗಳೂರು ಎಸ್ಪಿ ಜೊತೆಗೆ ಮಾತುಕತೆ ನಡೆಸಿದ್ದು, ಏಳು ಪೊಲೀಸ್ ತಂಡಗಳನ್ನು ರಚಿಸಿದ್ದಾರೆ. ಆತ ಎಲ್ಲಿಗೆ ಹೋಗಿದ್ದಾನೆ, ಏನಾಗಿದ್ದಾನೆ ಅನ್ನುವ ಕಾಳಜಿ ಇದೆ. ಪೊಲೀಸರು ಸೂಕ್ತ ರೀತಿಯಲ್ಲಿ ತನಿಖೆ ನಡೆಸಲಿದ್ದಾರೆ ಎಂದು ಹೇಳಿದರು.
ಇದೇ ವೇಳೆ, ಇದೇ ವಿಚಾರ ಪ್ರಸ್ತಾಪಿಸಿದ ಕಾರ್ಕಳ ಶಾಸಕ ಸುನಿಲ್ ಕುಮಾರ್, ದಿಗಂತ್ ನಾಪತ್ತೆ ಪ್ರಕರಣದ ಬಗ್ಗೆ ನಮ್ಮ ಅಲ್ಲಿನ ಶಾಸಕರು ಕೂಡ ದನಿಯೆತ್ತಿದ್ದಾರೆ. ಫರಂಗಿಪೇಟೆಯನ್ನು ಬಂದ್ ಮಾಡಿ ಪ್ರತಿಭಟನೆ ಮಾಡಿದ್ದಾರೆ. ಏಳು ಪೊಲೀಸ್ ತಂಡಗಳನ್ನು ರಚಿಸಿದರೆ ಸಾಲದು, ರಾಜ್ಯ ಸರಕಾರ ಈ ಬಗ್ಗೆ ಗಂಭೀರ ಪರಿಗಣಿಸಿ ತನಿಖೆ ನಡೆಸಬೇಕಾಗಿದೆ ಎಂದು ಹೇಳಿದರು. ರಾಜ್ಯ ಸರಕಾರ ವಿಷಯವನ್ನು ಗಂಭೀರವಾಗಿ ತೆಗೆದುಕೊಂಡಿದೆ, ಆತನ ಫೋನ್ ಡಿಟೇಲ್ಸ್ ತೆಗೆದಿದ್ದಾರೆ. ಫೋನನ್ನು ಓಪನ್ ಮಾಡದಂತೆ 16 ಪಿನ್ ಹಾಕಿದ್ದ. ಯಾರಿಗೆಲ್ಲ ಕರೆ ಹೋಗಿದೆ ಎನ್ನುವ ಬಗ್ಗೆಯೂ ತನಿಖೆ ನಡೆಸಿದ್ದಾರೆ. ಈ ವಿಷಯದ ಬಗ್ಗೆ ಸ್ಪೀಕರ್ ಸಾಹೇಬ್ರು ಕೂಡ ಸ್ಪೀಕರ್ ಜೊತೆಗೆ ಸಂಪರ್ಕದಲ್ಲಿದ್ದಾರೆ. ನಾನು ವಿಷಯ ತಿಳಿದ ಕೂಡಲೇ ಸದನಕ್ಕೆ ಮಾಹಿತಿ ನೀಡುತ್ತೇನೆ ಎಂದು ಸಚಿವ ಬಂಗಾರಪ್ಪ ಹೇಳಿದ್ದಾರೆ.
ಇದೇ ವೇಳೆ, ದಿಗಂತ್ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ನಾನಾ ಆಯಾಮಗಳಿಂದ ತನಿಖೆ ನಡೆಸುತ್ತಿದ್ದರೂ, ಸರಿಯಾದ ಮಾಹಿತಿ ಲಭಿಸಿಲ್ಲ ಎನ್ನಲಾಗುತ್ತಿದೆ. ಬಂಟ್ವಾಳ ಪೊಲೀಸರು ಪ್ರಕರಣದ ಹಿಂದೆ ಬಿದ್ದಿದ್ದು ಎಸ್ಪಿ ಯತೀಶ್ ವಿಶೇಷ ಮುತುವರ್ಜಿ ವಹಿಸಿದ್ದಾರೆ. ಸ್ಥಳೀಯ ಪೊಲೀಸರು ಯಾವುದೇ ಮಾಹಿತಿ ನೀಡುತ್ತಿಲ್ಲ, ಎಸ್ಪಿ ಅವರನ್ನೇ ಕೇಳಬೇಕು ಎನ್ನುತ್ತಿದ್ದಾರೆ. ಅಂತೆ ಕಂತೆಗಳ ಬಗ್ಗೆ ಚರ್ಚೆಯಾಗುತ್ತಿದ್ದರೂ, ಸೂಕ್ತ ಮಾಹಿತಿಯನ್ನು ಪೊಲೀಸರೇ ನೀಡಬೇಕಾಗಿದೆ.
Mangalore student Diganth missing case, topic raised in assembly by speaker and MLAs.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm