ಬ್ರೇಕಿಂಗ್ ನ್ಯೂಸ್
08-03-25 02:06 pm Mangalore Correspondent ಕರಾವಳಿ
ಮಂಗಳೂರು, ಮಾ.8 : ಜಿಲ್ಲಾ ಕಾರಾಗೃಹದಲ್ಲಿ ಕೈದಿಗಳು ಮೊಬೈಲ್ ಬಳಕೆ ಮಾಡಬಾರದೆಂದು 5ಜಿ ಮೇಲ್ದರ್ಜೆಗೇರಿಸಿದ ಜಾಮರ್ ಅಳವಡಿಸಿದ್ದು ಸದ್ರಿ ಉಪಕರಣಗಳನ್ನು ಉಪ್ಪು ಸುರಿದು ನಿಷ್ಕ್ರಿಯಗೊಳಿಸಲು ಪ್ರಯತ್ನಿಸಿದ್ದಾರೆ ಎಂದು ಕೈದಿಗಳ ವಿರುದ್ದ ಜೈಲು ಅಧೀಕ್ಷಕರು ಬರ್ಕೆ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಈ ಹಿಂದೆ 2ಜಿ/3ಜಿ ಮಾದರಿಯ 5 ಮೊಬೈಲ್ ಜಾಮರ್ ಉಪಕರಣಗಳನ್ನು ಜೈಲಿನಲ್ಲಿ ಅಳವಡಿಸಲಾಗಿತ್ತು. ಅದನ್ನು 5ಜಿ ಆಗಿ ಮೇಲ್ದರ್ಜೆಗೇರಿಸಲು ಟಿಐಸಿಎಲ್ ಸಂಸ್ಥೆಗೆ ವಹಿಸಲಾಗಿತ್ತು. ಅದರಂತೆ 5ಜಿ ಜಾಮರ್ ಉಪಕರಣಗಳನ್ನು ಅಳವಡಿಸಿದ್ದು ಅದನ್ನು ಇಲಾಖೆಯ ವಶಕ್ಕೆ ನೀಡಬೇಕಾದ ಕೆಲಸ ಮಾತ್ರ ಬಾಕಿ ಇತ್ತು. ಅಷ್ಟರಲ್ಲಿ ಜೈಲಿನ ಎ ಮತ್ತು ಬಿ ವಿಭಾಗಗಳಲ್ಲಿ ಜಾಮರ್ ಉಪಕರಣಗಳನ್ನು ಉಪ್ಪು ಸುರಿದು ಕೆಡಿಸಲು ಪ್ರಯತ್ನ ಮಾಡಿದ್ದಾರೆ.
ಈ ಬಗ್ಗೆ ಸಂಸ್ಥೆಯವರು ಕಾರಾಗೃಹ ಇಲಾಖೆ ಮಹಾನಿರ್ದೇಶಕರಿಗೆ ವರದಿ ನೀಡಿದ್ದಾರೆ. ವರದಿಯ ಆಧಾರದಲ್ಲಿ ಜೈಲಿನ ಸಿಸಿ ಕೆಮರಾ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ 9 ಮಂದಿ ವಿಚಾರಣಾಧೀನ ಕೈದಿಗಳು ಜಾಮರ್ ಉಪಕರಣವನ್ನು ಕೆಡಿಸಲು ಯತ್ನಿಸಿರುವುದು ಕಂಡು ಬಂದಿದೆ ಎಂದು ಜೈಲು ಅಧೀಕ್ಷಕರು ತಿಳಿಸಿದ್ದಾರೆ. ಜಾಮರ್ ಅಳವಡಿಸಿದ್ದರಿಂದ ಸ್ಥಳೀಯವಾಗಿ ಆಸುಪಾಸಿನಲ್ಲಿ ಮೊಬೈಲ್ ಸೇವೆಯಲ್ಲಿ ವ್ಯತ್ಯಯವಾಗಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.
ಜೈಲಿನಲ್ಲಿ ಮೊಬೈಲ್ ಬಳಕೆಗೆ ಅವಕಾಶ ಇಲ್ಲ. ಆದರೂ, ಕೈದಿಗಳು ಅಕ್ರಮವಾಗಿ ಮೊಬೈಲ್ ಬಳಸುತ್ತಿದ್ದಾರೆ ಎನ್ನುವುದು ಆರೋಪ. ಹೀಗಾಗಿ ಮೊಬೈಲ್ ಮೇಲೆ ಕಡಿವಾಣ ಹಾಕಲು ರೇಂಜ್ ಸಿಗದಂತೆ ಮಾಡಲು ಜೈಲು ಅಧೀಕ್ಷಕರು ಪ್ರಬಲ ಜಾಮರ್ ಹಾಕಲು ಮುಂದಾಗಿದ್ದಾರೆ.
Jammer in Mangalore jail, jail inmates try to destroy jammer, Jai authorities file case at barke station.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm