ಬ್ರೇಕಿಂಗ್ ನ್ಯೂಸ್
11-03-25 08:42 pm Mangalore Correspondent ಕರಾವಳಿ
ಮಂಗಳೂರು, ಮಾ.11 : ಮಂಗಳೂರಿನಲ್ಲಿರುವ ಇಂಡಿಯನ್ ಸ್ಟ್ರಾಟೆಜಿಕ್ ಪೆಟ್ರೋಲಿಯಂ ರಿಸರ್ವ್ಸ್ ಲಿಮಿಟೆಡ್ (ಐಎಸ್‌ಪಿಆರ್‌ಎಲ್)ನ ಕಚ್ಚಾ ತೈಲ ಸಂಗ್ರಹಾಗಾರ ಘಟಕದಲ್ಲಿ ದುಡಿಯುತ್ತಿರುವ ಉದ್ಯೋಗಿಗಳ ವೇತನ ತಾರತಮ್ಯ, ಭತ್ಯೆ-ಭಡ್ತಿ ಸಮಸ್ಯೆಗೆ ವ್ಯವಸ್ಥಿತ ಎಚ್‌ಆರ್ ನೀತಿ ಅನುಷ್ಠಾನಗೊಳಿಸುವಂತೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಕೇಂದ್ರ ಪೆಟ್ರೋಲಿಯಂ ಹಾಗೂ ನೈಸರ್ಗಿಕ ಅನಿಲ ಸಚಿವಾಲಯದ ಕಾರ್ಯದರ್ಶಿ ಪಂಕಜ್ ಜೈನ್ ಅವರನ್ನು ಭೇಟಿಯಾಗಿ ಮನವಿ ಮಾಡಿದ್ದಾರೆ.
ದೆಹಲಿಯಲ್ಲಿ ಪಂಕಜ್ ಜೈನ್ ಅವರನ್ನು ಭೇಟಿ ಮಾಡಿದ ಸಂಸದ ಚೌಟ, ಸುಮಾರು 8 ವರ್ಷಗಳಿಂದ ಬಗೆಹರಿಯದೆ ತೊಂದರೆ ಅನುಭವಿಸುತ್ತಿರುವ ಮಂಗಳೂರಿನ ಐಎಸ್‌ಪಿಆರ್‌ಎಲ್ ಘಟಕದ ಉದ್ಯೋಗಿಗಳ ಸಮಸ್ಯೆಗಳಿಗೆ ತುರ್ತಾಗಿ ಸ್ಪಂದಿಸುವಂತೆ ಕೋರಿದ್ದಾರೆ. ಜತೆಗೆ, ಈ ಕಚ್ಚಾ ತೈಲ ಸಂಗ್ರಹಾಗಾರ ಘಟಕದಲ್ಲಿ ದುಡಿಯುವ ಉದ್ಯೋಗಿಗಳಿಗೆ ವ್ಯವಸ್ಥಿತ ಮಾನವ ಸಂಪನ್ಮೂಲ ನೀತಿಯಿಲ್ಲದೆ ಏನೆಲ್ಲ ತೊಂದರೆ ಅನುಭವಿಸುತ್ತಿದ್ದಾರೆ ಎಂಬುದರ ಬಗ್ಗೆ ಸುದೀರ್ಘವಾಗಿ ಚರ್ಚಿಸಿ, ಇಲ್ಲಿನ ನೌಕರರು ಎದುರಿಸುತ್ತಿರುವ ಗಂಭೀರ ಔದ್ಯೋಗಿಕ ಸಮಸ್ಯೆಗಳನ್ನು ಕಾರ್ಯದರ್ಶಿಯವರಿಗೆ ಮನವರಿಕೆ ಮಾಡಿದ್ದಾರೆ.
ಸಾರ್ವಜನಿಕ ವಲಯದ ತೈಲ ಸಂಸ್ಥೆಗಳಿಂದ ನಿಯೋಜನೆಗೊಳ್ಳುವ ಅಧಿಕಾರಿಗಳಿಗೆ ಹೋಲಿಸಿದರೆ ಈ ಐಎಸ್‌ಪಿಆರ್‌ಎಲ್ ಘಟಕಕ್ಕೆ ನೇರ ನೇಮಕವಾಗುವ ಉದ್ಯೋಗಿಗಳ ವೇತನ ಪಾವತಿ ಹಾಗೂ ಭತ್ಯೆ ನೀಡುವಲ್ಲಿ ಸಾಕಷ್ಟು ತಾರತಮ್ಯ ಮಾಡಲಾಗುತ್ತಿದೆ. ಐಎಸ್‌ಪಿಆರ್‌ಎಲ್‌ನಲ್ಲಿ ಹಲವರು ಸುಮಾರು 5 ವರ್ಷಗಳಿಂದ ಯಾವುದೇ ಭಡ್ತಿ ದೊರೆಯದೆ ಒಂದೇ ಸ್ಥಾನದಲ್ಲಿ ಕೆಲಸ ಮಾಡುತ್ತಿದ್ದಾರೆ. ಕೆಲಸದ ಅವಧಿಯಲ್ಲಿಯೂ ತಾರತಮ್ಯವಿದ್ದು, ಮಂಗಳೂರಿನ ಐಎಸ್‌ಪಿಆರ್‌ಎಲ್‌ನಲ್ಲಿರುವ ಉದ್ಯೋಗಿಗಳು ವಾರಕ್ಕೆ 6 ದಿನ ಕೆಲಸ ಮಾಡಬೇಕು. ಅದೇ ನೋಯ್ಡಾದ ಐಎಸ್‌ಪಿಆರ್‌ಎಲ್ ಕೇಂದ್ರ ಕಚೇರಿ ಅಧಿಕಾರಿಗಳಿಗೆ ವಾರಕ್ಕೆ ಐದು ದಿನ ಮಾತ್ರ ಕೆಲಸ ಮಾಡುವ ಸೌಲಭ್ಯವಿದೆ ಎಂದು ಕ್ಯಾ. ಚೌಟ ಅವರು ಕಾರ್ಯದರ್ಶಿಗಳ ಗಮನ ಸೆಳೆದಿದ್ದಾರೆ.
ಅತ್ಯಂತ ಅಪಾಯಕಾರಿ ಉದ್ಯೋಗದ ಸವಾಲುಗಳಿರುವ ಸ್ಥಳವಾಗಿದ್ದರೂ, ಇಲ್ಲಿನ ಉದ್ಯೋಗಿಗಳಿಗೆ ಸರಿಯಾದ ವೈದ್ಯ ಸೌಲಭ್ಯ, ವಿಮಾ ವ್ಯವಸ್ಥೆ, ಪಿಂಚಣಿ, ಗ್ರಾಚ್ಯುಟಿ, ಶಿಫ್ಟ್ ಭತ್ಯೆ, ಅಪಘಾತ ಪರಿಹಾರ ಸೇರಿ ಯಾವುದೇ ಕಾರ್ಮಿಕ ಸವಲತ್ತುಗಳಿಲ್ಲ. ಬೇರೆ ಕೈಗಾರಿಕೆಗಳಿಗೆ ಹೋಲಿಸಿದರೆ ಐಎಸ್‌ಪಿಆರ್‌ಎಲ್‌ನಲ್ಲಿ ಪಿಡಿಎಫ್ ತರಬೇತಿ ಅವಧಿ ಒಂದರ ಬದಲಿಗೆ ಎರಡು ವರ್ಷಗಳಾಗಿದೆ. ಇದರಿಂದ ಅವರ ವೃತ್ತಿ ಭವಿಷ್ಯಕ್ಕೂ ತೊಂದರೆಯಾಗುತ್ತಿದೆ ಎಂದು ಕ್ಯಾ. ಚೌಟ ಅವರು ಪಂಕಜ್ ಜೈನ್ ಗಮನಕ್ಕೆ ತಂದಿದ್ದಾರೆ.
ದೇಶದ ಇಂಧನ ರಕ್ಷಣೆ ಹಾಗೂ ಭವಿಷ್ಯದ ದೃಷ್ಟಿಯಿಂದ ಐಎಸ್‌ಪಿಆರ್‌ಎಲ್‌ನಲ್ಲಿ ದುಡಿಯುವ ಉದ್ಯೋಗಿಗಳು- ಕಾರ್ಮಿಕರ ಸೇವೆ ಅತ್ಯಂತ ಮಹತ್ವದ್ದಾಗಿದೆ. ಹೀಗಿರುವಾಗ, ಈ ಐಎಸ್‌ಪಿಆರ್‌ಎಲ್ ಘಟಕದಲ್ಲಿ ದುಡಿಯುತ್ತಿರುವ ಉದ್ಯೋಗಿಗಳಿಗೆ ಸಮಗ್ರ ಎಚ್‌ಆರ್(ಮಾನವ ಸಂಪನ್ಮೂಲ) ನೀತಿ ರೂಪಿಸಬೇಕು. ಜತೆಗೆ ವೇತನ ಆದ್ಯತೆ, ಉತ್ತಮ ಸೌಲಭ್ಯ, ಸೇವಾ ಭದ್ರತೆಗಾಗಿ ಈ ಕೂಡಲೇ ಮಧ್ಯಂತರ ಪರಿಹಾರವನ್ನು ಕೂಡಲೇ ಬಿಡುಗಡೆಗೊಳಿಸಬೇಕೆಂದು ಕ್ಯಾ. ಚೌಟ ಅವರು ಕೋರಿದ್ದಾರೆ.
ಸಂಸದರ ಮನವಿ ಆಲಿಸಿದ ಪಂಕಜ್ ಜೈನ್ ಅವರು ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದ್ದು, ಆದಷ್ಟು ಬೇಗ ಮಂಗಳೂರಿನ ಐಎಸ್‌ಪಿಆರ್‌ಎಲ್ ಕಚ್ಚಾ ತೈಲ ಸಂಗ್ರಹಾಗಾರ ಘಟಕದ ಉದ್ಯೋಗಿಗಳ ಬೇಡಿಕೆಗಳಿಗೆ ಸ್ಪಂದಿಸುವ ಭರವಸೆ ನೀಡಿದ್ದಾರೆ.
Dakshina Kannada MP Capt Brijesh Chowta met petroleum and natural gas secretary Pankaj Jain in Delhi on Monday, urging immediate intervention in the long-pending concerns of employees at the Indian Strategic Petroleum Reserves Limited (ISPRL) facility in Mangaluru.
04-08-25 01:00 pm
Bangalore Correspondent
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
Dharmasthala News, High Court; ಧರ್ಮಸ್ಥಳ ಸುದ್ದ...
01-08-25 11:34 pm
‘Comedy Kiladigalu’, Chandrashekhar Siddi Sui...
01-08-25 10:45 pm
04-08-25 05:11 pm
HK News Desk
ಗೆಳೆಯನೊಂದಿಗೆ ಪತ್ನಿಯ ಸರಸ ; ಪರಿ ಪರಿ ಬೇಡಿಕೊಂಡರೂ...
04-08-25 02:16 pm
ವಿಮಾನದಲ್ಲಿ ಸಹ ಪ್ರಯಾಣಿಕನಿಗೆ ಕಪಾಳಮೋಕ್ಷ ; ಅಶಿಸ್ತ...
03-08-25 05:44 pm
ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ನರೇಂದ್ರ ಮೋದಿ, ಭಾಗ...
03-08-25 04:25 pm
ಮಾಲೆಗಾಂವ್ ಪ್ರಕರಣದಲ್ಲಿ ಮೋಹನ್ ಭಾಗವತ್ ಬಂಧಿಸುವುದಕ...
01-08-25 10:48 pm
04-08-25 10:58 pm
Mangalore Correspondent
Dharmasthala Case, Jayan T: ಧರ್ಮಸ್ಥಳ ಕೇಸ್, ಪೊ...
04-08-25 10:34 pm
Mangalore Congress: ಮೆಸ್ಕಾಂ ನೌಕರರ ಪಿಂಚಣಿಗೆ ಗ್...
04-08-25 09:51 pm
Dharmasthala Case, SIT, Body Found: ಬಂಗ್ಲೆಗುಡ...
04-08-25 07:38 pm
ವಿದ್ಯುತ್ ನಿಗಮಗಳ ನೌಕರರಿಗೆ ಪಿಂಚಣಿಗಾಗಿ ಗ್ರಾಹಕರಿ...
04-08-25 06:05 pm
03-08-25 10:11 pm
Mangalore Correspondent
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm