ಬ್ರೇಕಿಂಗ್ ನ್ಯೂಸ್
17-03-25 11:29 am Mangalore Correspondent ಕರಾವಳಿ
ಉಳ್ಳಾಲ, ಮಾ.17 : ವೃದ್ಧ ತಾಯಿ ಜೊತೆಗೆ ಸ್ಕೂಟರಿನಲ್ಲಿ ತೆರಳುತ್ತಿದ್ದಾಗ ಕಾಡು ಹಂದಿ ದಿಢೀರ್ ಅಡ್ಡ ಬಂದ ಪರಿಣಾಮ ತಾಯಿ ರಸ್ತೆಗೆಸೆಯಲ್ಪಟ್ಟು ತೀವ್ರ ಗಾಯಗೊಂಡು ಮೃತಪಟ್ಟ ಘಟನೆ ಹರೇಕಳ ಗ್ರಾಮದ ಖಂಡಿಗ ಎಂಬಲ್ಲಿ ಸಂಭವಿಸಿದೆ.
ಹರೇಕಳ ಗ್ರಾಮದ ಪೊಲ್ಕೆ ಮೇಗಿನಮನೆ ನಿವಾಸಿ ದೇವಕಿ ಮಾಣೈ (72) ಮೃತ ಮಹಿಳೆ. ವರದರಾಜ್ ಮಾಣೈ ಅವರು ತನ್ನ ತಾಯಿ ದೇವಕಿ ಮಾಣೈ ಅವರನ್ನ ಶನಿವಾರ ರಾತ್ರಿ ಬಜಾಲಿನ ಸಂಬಂಧಿಕರ ಮನೆಯಿಂದ ಸ್ಕೂಟರಿನಲ್ಲಿ ಕುಳ್ಳಿರಿಸಿ ಅಡ್ಯಾರು-ಪಾವೂರು ಮಾರ್ಗವಾಗಿ ಹರೇಕಳದ ಮನೆಗೆ ಮರಳುತ್ತಿದ್ದ ವೇಳೆ ದಾರಿ ಮಧ್ಯದ ಖಂಡಿಗ ಎಂಬಲ್ಲಿ ಹಳೇ ಪಂಚಾಯತ್ ಕಚೇರಿ ಕಟ್ಟಡದ ಬಳಿಯ ಗುಡ್ಡ ಪ್ರದೇಶದಿಂದ ಕಾಡು ಹಂದಿ ದಿಢೀರ್ ಆಗಿ ರಸ್ತೆ ಕಡೆ ಧಾವಿಸಿತ್ತು. ಈ ವೇಳೆ ಸ್ಕೂಟರ್ ಚಲಾಯಿಸುತ್ತಿದ್ದ ವರದರಾಜ್ ಅವರು ವಿಚಲಿತರಾಗಿ ಹಠಾತ್ತನೆ ಬ್ರೇಕ್ ಹೊಡೆದ ಪರಿಣಾಮ ತಾಯಿ ಮತ್ತು ಮಗ ರಸ್ತೆಗೆ ಎಸೆಯಲ್ಪಟ್ಟಿದ್ದಾರೆ. ಗಂಭೀರ ಗಾಯಗೊಂಡ ದೇವಕಿ ಅವರಿಗೆ ಹರೇಕಳದ ಕ್ಲಿನಿಕ್ ಒಂದರಲ್ಲಿ ಪ್ರಥಮ ಚಿಕಿತ್ಸೆ ನೀಡಿದ ಬಳಿಕ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಮೃತ ದೇವಕಿ ಅವರ ಪತಿ ಭೋಜ ಮಾಣೈ ಅವರು ಆರು ತಿಂಗಳ ಹಿಂದೆಯಷ್ಟೇ ಅಲ್ಪಕಾಲದ ಅನಾರೋಗ್ಯದಿಂದ ಮೃತಪಟ್ಟಿದ್ದರು. ದೇವಕಿ ಅವರು ಓರ್ವ ಪುತ್ರ, ಇಬ್ಬರು ಪುತ್ರಿಯರು ಮತ್ತು ಮೊಮ್ಮಕ್ಕಳನ್ನ ಅಗಲಿದ್ದಾರೆ. ಘಟನೆ ಕುರಿತು ದೇವಕಿ ಮಾಣೈ ಅವರ ಅಳಿಯ ರವೀಂದ್ರ ಭಂಡಾರಿ ನೀಡಿದ ದೂರಿನಂತೆ ಮಂಗಳೂರು ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Tragic Accident in Harekala Mangalore, Wild Boar Leads to Fatal Crash, Claims Life of 72 Year old Woman. The deceased has been identified as Devika. A devastating accident occurred late Saturday night when a man riding a scooter with his elderly mother lost control after a wild boar suddenly crossed their path. The unexpected encounter resulted in the woman being thrown onto the road, leading to a tragic turn of events.
26-05-26 11:03 pm
HK News Desk
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 09:02 pm
HK News Staffer
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm