ಬ್ರೇಕಿಂಗ್ ನ್ಯೂಸ್
18-03-25 03:15 pm Mangalore Correspondent ಕರಾವಳಿ
ಮಂಗಳೂರು, ಮಾ.18 : ಮುಲ್ಕಿ ಸಮೀಪದ ಬಟ್ಟಕೋಡಿ ಎಂಬಲ್ಲಿ ಭೀಕರ ಅಪಘಾತ ನಡೆದಿದ್ದು ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದು ಸವಾರರಿಬ್ಬರು ದುರಂತ ಸಾವನ್ನಪ್ಪಿದ್ದಾರೆ.
ನಿನ್ನೆ ರಾತ್ರಿ ಘಟನೆ ನಡೆದಿದ್ದು ಧಾರವಾಡ ಸಮೀಪದ ಕಲ್ಲೂರು ನಿವಾಸಿ ಆತ್ಮಾನಂದ ಅಂಬಿಗರ(27) ಮತ್ತು ನವೀನ್ ಹೂಗಾರ (26) ಮೃತ ದುರ್ದೈವಿಗಳು. ಬೈಕಿನಲ್ಲಿ ಅತೀ ವೇಗವಾಗಿ ಬಂದು ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದ್ದಾರೆ.
ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ನಜ್ಜು ಗುಜ್ಜಾಗಿದೆ. ಬೈಕ್ ಸವಾರ ಆತ್ಮಾನಂದ ಸ್ಥಳದಲ್ಲೇ ಸಾವನ್ನಪ್ಪಿದರೆ, ಗಂಭೀರ ಗಾಯಗೊಂಡಿದ್ದ ನವೀನ್ ನನ್ನು ಸ್ಥಳೀಯರು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಚಿಕಿತ್ಸೆ ಫಲಕಾರಿಯಾಗದೇ ನವೀನ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.



ಯುವಕರಿಬ್ಬರು ಪದ್ಮನೂರಿನಿಂದ ಕಿನ್ನಿಗೋಳಿಯತ್ತ ತೆರಳುತಿದ್ದಾಗ ಅಪಘಾತ ನಡೆದಿದೆ. ಅಪಘಾತದ ಭೀಕರ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಈ ಬಗ್ಗೆ ಮಂಗಳೂರು ಉತ್ತರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Severe #Accident Near #Kinnigoli in #mangalore, Biker Collides with Electric Pole, Two Riders Killed on spot pic.twitter.com/lEqkyvSVfg
— Headline Karnataka (@hknewsonline) March 18, 2025
Severe Accident Near Kinnigoli in mangalore, Biker Collides with Electric Pole, Two Riders Killed on spot.
31-10-25 08:10 pm
HK News Desk
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
30-10-25 03:20 pm
HK News Desk
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
31-10-25 10:47 pm
Mangalore Correspondent
MP Brijesh Chowta, Mangalore: ದೇಶವ್ಯಾಪಿ ಸರ್ದಾ...
31-10-25 09:23 pm
ಅನಧಿಕೃತ ಪಾರ್ಕಿಂಗ್ ವಿರುದ್ಧ ಮಂಗಳೂರು ಪೊಲೀಸರ ಕಾರ್...
31-10-25 09:00 pm
78 ಶೇ. ಜನರಿಗೆ ಎರಡು ವರ್ಷದಲ್ಲಿ 23 ಸಾವಿರ ಮಕ್ಕಳು,...
31-10-25 03:05 pm
ಬಿಸಿ ರೋಡಿನಲ್ಲಿ ಆಂಬುಲೆನ್ಸ್ ಗೆ ಸೈಡ್ ಕೊಡದೆ ಸತಾಯಿ...
30-10-25 11:16 pm
31-10-25 10:57 pm
Mangalore Correspondent
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm
ಇಂಗ್ಲೆಂಡಿನಲ್ಲಿ ಉದ್ಯೋಗ ಆಮಿಷ ; ಮಂಗಳೂರು- ಉಡುಪಿಯ...
29-10-25 10:43 pm
ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm