ಬ್ರೇಕಿಂಗ್ ನ್ಯೂಸ್
26-03-25 05:38 pm Mangalore Correspondent ಕರಾವಳಿ
ಮಂಗಳೂರು, ಮಾ.26 : ರಾಜ್ಯ ಸರ್ಕಾರದ ಕಂದಾಯ ಇಲಾಖೆ ಯಾವುದೇ ಪೂರ್ವ ಸಿದ್ಧತೆ ಇಲ್ಲದೇ ಏಕಾಏಕಿ ಆಸ್ತಿ ನೋಂದಣಿಗೆ ಇ–ಖಾತಾ ಕಡ್ಡಾಯ ಮಾಡಿದ ನಂತರ ಮಂಗಳೂರು ನಗರದ ಮಹಾನಗರ ಪಾಲಿಕೆ, ಮುಡಾದಲ್ಲಿ ಅವ್ಯವಸ್ಥೆಯಾಗಿದ್ದು ಸಾರ್ವಜನಿಕರು ನಿತ್ಯವೂ ಕಚೇರಿಗಳಿಗೆ ಅಲೆದಾಡುವಂತಾಗಿದೆ. ಈ ಬಗ್ಗೆ ಅಧಿವೇಶನದಲ್ಲಿ ವಿಷಯ ಪ್ರಸ್ತಾಪಿಸಿ ಕಂದಾಯ ಸಚಿವರನ್ನು ಭೇಟಿಯಾದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಆಕ್ಷೇಪಿಸಿದ್ದಾರೆ.
ಸುದ್ದಿಗೋಷ್ಟಿ ನಡೆಸಿದ ಅವರು, ಇಂತಹ ನಿಯಮಗಳನ್ನು ಏಕಾಏಕಿ ಇಡೀ ರಾಜ್ಯದಲ್ಲಿ ಜಾರಿಗೆ ತಂದು ಜನಸಾಮಾನ್ಯರಿಗೆ ತೊಂದರೆ ಮಾಡಿದ್ದಾರೆ. ಮೊದಲು ಒಂದೆರಡು ಸಬ್ ರಿಜಿಸ್ಟರ್ ಕಚೇರಿಗಳಲ್ಲಿ ಪ್ರಾಯೋಗಿಕವಾಗಿ ಅನುಷ್ಠಾನಗೊಳಿಸಿ ನ್ಯೂನತೆಗಳನ್ನು ನೋಡಿಕೊಂಡು ನಂತರವೇ ರಾಜ್ಯಕ್ಕೆ ಅನ್ವಯಿಸಬೇಕಿತ್ತು. ಅದು ಬಿಟ್ಟು ಧಿಡೀರನೆ ಆತುರದಿಂದ ಕೈಗೊಂಡ ನಿರ್ಧಾರದಿಂದ ಎಲ್ಲವೂ ಅಯೋಮಯವಾಗಿದೆ.
ಕಾವೇರಿ 2.0 ತಂತ್ರಾಂಶ ಜೋಡಣೆಯ ನಂತರವಂತೂ ಸಮಸ್ಯೆ ಉಲ್ಬಣವಾಗಿದ್ದು ಯಾವಾಗ ನೋಡಿದರೂ ಸರ್ವರ್ ಡೌನ್, ದಾಖಲೆಗಳು ಅಪ್ಲೋಡ್ ಆಗುತ್ತಿಲ್ಲ ಎಂಬ ಉತ್ತರ ಸಿಗುತ್ತಿದೆ. ಮದುವೆ, ಸಾಲ, ಲೋನ್ ಇತ್ಯಾದಿ ಅಗತ್ಯ ಸಂದರ್ಭದಲ್ಲಿ ತಮ್ಮ ಆಸ್ತಿಪಾಸ್ತಿಗಳ ಮೂಲಕ ಹಣವನ್ನು ಹೊಂದಿಸಿಕೊಳ್ಳಲು ಸಾಧ್ಯವಾಗದೇ ಸಾವಿರಾರು ಜನರು ಈ ಅವ್ಯವಸ್ಥೆಗೆ ಹಿಡಿಶಾಪ ಹಾಕುತ್ತ ಪರಿತಪಿಸುತ್ತಿದ್ದಾರೆ ಎಂದು ಹೇಳಿದರು.
ಮೂಡಾದಲ್ಲಿ ಆಡಳಿತ ವೈಫಲ್ಯ, ಅವ್ಯವಸ್ಥೆ
ರಾಜ್ಯದಲ್ಲಿ ಯಾವುದೇ ಸಾರ್ವಜನಿಕ ಕಚೇರಿಗಳಲ್ಲಿ ಪ್ರವೇಶ ನಿರ್ಬಂಧಿಸುವ ಕ್ರಮವಿಲ್ಲ. ಆದರೆ ನಮ್ಮ ಮಂಗಳೂರಿನ ಮೂಡಾ ಕಚೇರಿ ಒಳಗೆ ಸಾರ್ವಜನಿಕರಿಗೂ, ವಕೀಲರುಗಳಿಗೂ ಪ್ರವೇಶ ನಿರ್ಬಂಧಿಸಲಾಗಿದೆ. ಮಾಧ್ಯಮಗಳಲ್ಲೂ ಈ ಬಗ್ಗೆ ವರದಿಯಾಗಿದ್ದು ಕೆಟ್ಟ ದಾಖಲೆಯೊಂದು ನಮ್ಮ ಮಂಗಳೂರಿನ ಹೆಸರಿನಲ್ಲಿ ದಾಖಲಾಗಿರುವುದು ಕಾಂಗ್ರೆಸ್ ಸರ್ಕಾರದ ಸಾಧನೆಯಾಗಿದೆ ಎಂದು ಶಾಸಕ ಕಾಮತ್ ಆರೋಪಿಸಿದ್ದಾರೆ.
ಎರಡು ವರ್ಷಗಳಿಂದ ಭ್ರಷ್ಟಾಚಾರದ ಗೂಡಾಗಿರುವ ಮಂಗಳೂರಿನ ಮೂಡಾದ ಅಕ್ರಮಗಳನ್ನು ನಿಯಂತ್ರಿಸುವುದನ್ನು ಬಿಟ್ಟು ನ್ಯಾಯಯುತ ಕಾರ್ಯಗಳನ್ನು ಮಾಡುವುದಕ್ಕೂ ಸಾರ್ವಜನಿಕರನ್ನು, ವಕೀಲರುಗಳನ್ನು ನಿರ್ಬಂಧಿಸುವುದು ಎಷ್ಟು ಸರಿ? ಇಂದು ಮೂಡಾ ಕಚೇರಿಯಲ್ಲಿ ಅಗತ್ಯ ಸಿಬ್ಬಂದಿಗಳೇ ಇಲ್ಲ.
TPM (Town planning Member), ATP (Aassistant Town Planner) ಟೈಪಿಸ್ಟ್, ಸರ್ವೇಯರ್ ಹೀಗೆ ಪ್ರತಿ ವಿಭಾಗದಲ್ಲೂ ಸಿಬ್ಬಂದಿಗಳ ಕೊರತೆ ಇದೆ. ಹೀಗಾದರೆ ಸಮಯಕ್ಕೆ ಸರಿಯಾಗಿ ಜನರ ಕೆಲಸಗಳು ನಡೆಯುವುದಾದರೂ ಹೇಗೆ? ಇರುವ ಒಬ್ಬ TP (Town Planner) ತನಗೆ ವಹಿಸಿದ ಕೆಲಸಗಳನ್ನು ಮುಗಿಸಿ ಕಚೇರಿಗೆ ಬಂದರೆ, 50-60 ಜನ ಸಾಲಾಗಿ ನಿಂತಿರುತ್ತಾರೆ. ಅವರೆಲ್ಲರನ್ನೂ ಒಬ್ಬ ಅಧಿಕಾರಿ ಸಣ್ಣ ಅವಧಿಯಲ್ಲಿ ವಿಚಾರಿಸಲು ಸಾಧ್ಯವೇ? ಹಾಗಾದರೆ ಸಾರ್ವಜನಿಕರು ತಮ್ಮ ಎಲ್ಲಾ ಕೆಲಸ ಕಾರ್ಯಗಳನ್ನು ಬಿಟ್ಟು ಎಷ್ಟು ದಿನ ಇದೇ ರೀತಿ ಬಂದು ನಿಲ್ಲಬೇಕು ಎಂದು ಪ್ರಶ್ನಿಸಿದರು.
ಸ್ಮಾರ್ಟ್ ಮೀಟರ್ ಟೆಂಡರ್ ನಲ್ಲಿ ಹಗರಣ
ರಾಜ್ಯದಲ್ಲಿ ಸ್ಮಾರ್ಟ್ ಮೀಟರ್ ಖರೀದಿ ಟೆಂಡರ್ನಲ್ಲಿ ಸುಮಾರು 15 ಸಾವಿರ ಕೋಟಿ ಮೊತ್ತದ ಹಗರಣ ನಡೆದಿರುವ ಶಂಕೆ ದಟ್ಟವಾಗಿದ್ದು, ಕಾಂಗ್ರೆಸ್ ಸರ್ಕಾರದ ಮತ್ತೊಂದು ಹಗರಣ ಬಯಲಿಗೆ ಬರುತ್ತಿದೆ. ಸ್ಮಾರ್ಟ್ ಮೀಟರ್ ಖರೀದಿಯಲ್ಲಿ ಕೆಟಿಪಿಪಿ ಕಾಯ್ದೆ ಉಲ್ಲಂಘನೆಯಾಗಿದ್ದು ಅರ್ಹತೆ ಇಲ್ಲದಿದ್ದರೂ ತಮಗೆ ಬೇಕಾದ ಕಂಪೆನಿಗೆ ಅನುಕೂಲವಾಗುವಂತೆ ಟೆಂಡರ್ ಕರೆಯಲಾಗಿದೆ. ಈ ಬಗ್ಗೆ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದ ಮಾಜಿ ಅಧ್ಯಕ್ಷರೇ ದಾಖಲೆಗಳ ಸಹಿತ ಆರೋಪಿಸಿದ್ದಾರೆ.
ಕೇಂದ್ರದ ಗೈಡ್ಲೈನ್ಸ್ ಗಳನ್ನು ಅನುಸರಿಸದೇ ಏಕಾಏಕಿ ಹೊಸ ಗ್ರಾಹಕರಿಗೆ ಸ್ಮಾರ್ಟ್ ಮೀಟರ್ ಕಡ್ಡಾಯ ಮಾಡಲಾಗಿದೆ. ಆದರೆ ಬೇರೆ ರಾಜ್ಯಗಳಿಗಿಂತ ಹೆಚ್ಚಿನ ದರದಲ್ಲಿ ಸ್ಮಾರ್ಟ್ ಮೀಟರ್ ಖರೀದಿಸಿ 7,408 ಕೋಟಿ ರೂ. ಗೋಲ್ ಮಾಲ್ ಮಾಡಲಾಗುತ್ತಿದೆ. ದೇಶಾದ್ಯಂತ ಸ್ಮಾರ್ಟ್ ಮೀಟರ್ ಅಳವಡಿಕೆಯಲ್ಲಿ ಒಂದು ರೂಲ್ಸ್ ಇದ್ದರೆ, ನಮ್ಮ ರಾಜ್ಯದಲ್ಲಿ ಮಾತ್ರ ಬೇರೆ ರೂಲ್ಸ್ ಇದೆ. ಅಕ್ಕಪಕ್ಕದ ರಾಜ್ಯಗಳಲ್ಲಿ ಸ್ಮಾರ್ಟ್ ಮೀಟರ್ ಅಳವಡಿಕೆಗೆ 900 ರೂ. ನಿಗದಿ ಮಾಡಲಾಗಿದ್ದು, ಉಳಿದ ಹಣವನ್ನು 8 ವರ್ಷಗಳಲ್ಲಿ ತಿಂಗಳಿಗೆ 57 ರೂ. ರಂತೆ ಪಾವತಿಸಬೇಕು. ಆದರೆ, ಕರ್ನಾಟಕದಲ್ಲಿ 8,510 ರೂ. ಹಾಗೂ ತಿಂಗಳಿಗೆ 71 ರೂ. ಪಾವತಿಸಬೇಕು. ಇದು ಯಾವ ಹಗಲು ದರೋಡೆಗೂ ಕಮ್ಮಿ ಇಲ್ಲ. ಇನ್ನು ಹಳೆಯ ದರಕ್ಕೆ ಹೋಲಿಕೆ ಮಾಡಿದರೆ ರಾಜ್ಯದಲ್ಲಿ ಸ್ಮಾರ್ಟ್ ಮೀಟರ್ ದರ ಶೇ.400ರಿಂದ ಶೇ.800ರಷ್ಟು ಏರಿಕೆ ಮಾಡಲಾಗಿದೆ ಎಂದು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ರಮೇಶ್ ಕಂಡೆಟ್ಟು, ಲಲ್ಲೇಶ್, ರಮೇಶ್ ಹೆಗ್ಡೆ, ಪೂರ್ಣಿಮಾ, ಪ್ರೇಮಾನಂದ ಶೆಟ್ಟಿ, ಸಂಜಯ್ ಪ್ರಭು, ನಿತಿನ್ ಕುಮಾರ್, ರವಿಶಂಕರ್ ಮಿಜಾರ್ ಉಪಸ್ಥಿತರಿದ್ದರು.
MLA Vedavyas Kamath criticized the Revenue Department for its lack of foresight regarding the mandatory implementation of electronic records (e-records). He emphasized that the current approach has led to confusion and unnecessary difficulties for residents.
14-09-25 05:18 pm
Bangalore Correspondent
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
14-09-25 10:49 pm
HK News Desk
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
14-09-25 10:55 pm
Mangalore Correspondent
Mangalore Protest: ರಸ್ತೆ ನಮ್ಮ ಹಕ್ಕು, ಭಿಕ್ಷೆಯಲ...
14-09-25 10:34 pm
Kundapura Accident, Samba Deer, Bike: ಕುಂದಾಪು...
13-09-25 11:05 pm
Mangalore, Police, Loud Speakers: ಗಣೇಶೋತ್ಸವಕ್...
12-09-25 10:58 pm
Mahesh Vikram Hegde Arrested, Post Card Kanna...
12-09-25 09:25 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm