ಬ್ರೇಕಿಂಗ್ ನ್ಯೂಸ್
30-03-25 02:39 pm Mangalore Correspondent ಕರಾವಳಿ
ಉಳ್ಳಾಲ, ಮಾ.30: ಲಕೋಟೆಯೊಂದರಲ್ಲಿ ಸಂಸ್ಕರಿಸಿಟ್ಟ ಮಾನವ ಅಸ್ಥಿಗಳು ಕುಂಪಲ ಚಿತ್ರಾಂಜಲಿ ನಗರದಲ್ಲಿ ಶನಿವಾರ ರಾತ್ರಿ ಪತ್ತೆಯಾಗಿದ್ದು, ಘಟನೆಯಿಂದ ಬೇಸ್ತು ಬಿದ್ದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಉಳ್ಳಾಲ ಪೊಲೀಸರು ಅಸ್ಥಿಗಳ ಹಿಂದಿನ ಅಸಲಿಯತ್ತನ್ನ ಪತ್ತೆ ಹಚ್ಚಿದ್ದಾರೆ.
ಶನಿವಾರ ನಡುರಾತ್ರಿ ಚಿತ್ರಾಂಜಲಿ ನಗರದ ಮನೆಯ ಆವರಣದ ಬಳಿ ಪ್ರಯೋಗಾಲಯದ ಮಾದರಿಯ ಅಸ್ಥಿಗಳು ಲಕೋಟೆಯಲ್ಲಿ ಸಂಸ್ಕರಿಸಿದ ರೀತಿಯಲ್ಲಿ ಪತ್ತೆಯಾಗಿದ್ದು ಸುದ್ದಿ ಕಾಡ್ಗಿಚ್ಚಿನಂತೆ ಹಬ್ಬಿ ಸ್ಥಳದಲ್ಲಿ ಸಾಕಷ್ಟು ಜನರು ಜಮಾಯಿಸಿದ್ದರು. ವಿಚಾರ ತಿಳಿದು ಸ್ಥಳಕ್ಕೆ ದೌಡಾಯಿಸಿದ ಉಳ್ಳಾಲ ಪೊಲೀಸರು ಅಸ್ಥಿಗಳು ತುಂಬಿದ್ದ ಲಕೋಟೆಯನ್ನ ವಶಕ್ಕೆ ಪಡೆದಿದ್ದರು.



ಮಹಿಳೆಯ ಎಡವಟ್ಟು, ಬೇಸ್ತು ಬಿದ್ದ ಜನರು
ಚಿತ್ರಾಂಜಲಿ ನಗರದಲ್ಲಿ ದೊರೆತ ಅಸ್ಥಿಗಳನ್ನ ಸ್ಥಳೀಯ ಮಹಿಳೆಯೇ ತನ್ನ ಮನೆಯ ಆವರಣದ ಬಳಿ ಎಸೆದಿರುವ ವಿಚಾರ ಪೊಲೀಸರ ವಿಚಾರಣೆಯಲ್ಲಿ ತಿಳಿದು ಬಂದಿದೆ. ಮಹಿಳೆಯು ಮಂಗಳೂರಿನ ವೈದ್ಯರೋರ್ವರ ಮನೆಯಲ್ಲಿ ಕೆಲಸಕ್ಕಿದ್ದು ನಿವೃತ್ತಿ ಹೊಂದಿದ್ದ ವೈದ್ಯರು ಮನೆ ಬಿಟ್ಟು ಹೋದಾಗ ಮನೆಯಲ್ಲಿದ್ದ ಕೆಲ ಸಾಮಾಗ್ರಿಗಳನ್ನ ಮಹಿಳೆ ತಂದಿದ್ದರೆನ್ನಲಾಗಿದೆ. ವೈದ್ಯರ ಮನೆಯಿಂದ ತಂದಿದ್ದ ಸಂಸ್ಕರಿಸಿಡಲಾದ ಅಸ್ಥಿಗಳ ಲಕೋಟೆಯನ್ನ ಮಹಿಳೆಯು ತನ್ನ ಮನೆಯ ಕಂಪೌಡ್ ಬಳಿ ಎಸೆದಿದ್ದರೆನ್ನಲಾಗಿದೆ.
ಕಳೆದ ವಾರ ಚಿತ್ರಾಂಜಲಿ ನಗರದಲ್ಲಿ ಸ್ಥಳೀಯ ಸಂಘಟನೆಯೊಂದರ ವಾರ್ಷಿಕೋತ್ಸವ ನಡೆದಿತ್ತು. ವಾರ್ಷಿಕೋತ್ಸವದ ವೇದಿಕೆಯಲ್ಲಿ ನೃತ್ಯ ಪ್ರದರ್ಶನ ನೀಡಿದ್ದ ಯುವಕನೋರ್ವನ ಬಾಡಿಗೆ ಕಾಸ್ಟ್ಯೂಮ್ ಈ ಪ್ರದೇಶದಲ್ಲೇ ಕಳೆದು ಹೋಗಿತ್ತು. ನಿನ್ನೆ ರಾತ್ರಿ ಯುವಕನು ಕಾಸ್ಟ್ಯೂಮ್ ಹುಡುಕಲು ಬಂದಾಗ ಅಸ್ಥಿಗಳ ಲಕೋಟೆ ದೊರೆತಿದೆ. ಅಸ್ಥಿಗಳನ್ನ ಕಂಡು ಹೌಹಾರಿದ ಯುವಕ ಊರೆಲ್ಲಾ ಸುದ್ದಿ ಹಬ್ಬಿಸಿದ್ದು, ಸ್ಥಳದಲ್ಲಿ ಜನ ಜಮಾಯಿಸಿದ್ದಾರೆ. ಒಟ್ಟಾರೆ ಮಹಿಳೆ ಮಾಡಿದ ಎಡವಟ್ಟಿನಿಂದಾಗಿ ಊರವರು ಮತ್ತು ಪೊಲೀಸರು ಅಸ್ಥಿಗಳ ಬಗ್ಗೆ ನಾನಾ ರೀತಿಯ ಹುಳಗಳನ್ನ ತಲೆಗೆ ಬಿಟ್ಟು ರಾತ್ರಿ ನಿದ್ದೆಗೆಡುವಂತಾಗಿತ್ತು.
Mangalore Processed Human Remains Found in Envelope Spark Panic in Kumpala as Mysterious Shadow Haunts Residents.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm