ಬ್ರೇಕಿಂಗ್ ನ್ಯೂಸ್
12-04-25 09:43 pm Mangalore Correspondent ಕರಾವಳಿ
ಮಂಗಳೂರು, ಎ.12 : ಮುಂದಿನ ವರ್ಷದಿಂದ ಮೈಸೂರು ದಸರಾ ಉತ್ಸವ ಕ್ರೀಡಾಕೂಟದಲ್ಲಿ ಕಂಬಳ ಆಯೋಜನೆ ಮಾಡಲಾಗುವುದು. ಈ ಬಗ್ಗೆ ಮುಖ್ಯಮಂತ್ರಿ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಿಗೆ ಹೇಳಿ ಕಂಬಳಕ್ಕೆ ವಿಶೇಷ ಪ್ರೋತ್ಸಾಹ ನೀಡಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
ಮಂಗಳೂರಿನ ಗುರುಪುರದಲ್ಲಿ ಶನಿವಾರ ನಡೆದ ಮೂಳೂರು- ಪಡೂರು ಕಂಬಳದಲ್ಲಿ ಡಿಕೆ ಶಿವಕುಮಾರ್ ಪಾಲ್ಗೊಂಡು ಕಂಬಳಕ್ಕೆ ಹುರಿದುಂಬಿಸಿ ಮಾತನಾಡಿದ್ದಾರೆ. ಕಳೆದ ಬಾರಿ ಅಶೋಕ್ ರೈಯವರು ಬೆಂಗಳೂರಿನಲ್ಲಿ ಕಂಬಳ ಮಾಡಿ ಇತಿಹಾಸ ನಿರ್ಮಿಸಿದ್ದಾರೆ. ಕಂಬಳ ಕೇವಲ ಕರಾವಳಿಗೆ ಸೀಮಿತ ಆಗಬಾರದು. ಕಂಬಳ ಅಂತಾರಾಷ್ಟ್ರೀಯ ಮಟ್ಟದ ಕ್ರೀಡೆಯಾಗಿ ಬೆಳಗಬೇಕು. ಇದಕ್ಕಾಗಿ ಕಂಬಳ ಸಮಿತಿ ಅಧ್ಯಕ್ಷ ಬೆಳಪು ದೇವಿಪ್ರಸಾದ್ ಶೆಟ್ಟಿ ಅವರ ಜೊತೆಗೆ ಮಾತನಾಡಿದ್ದೇನೆ. ಕಂಬಳಕ್ಕೆ ಏನೆಲ್ಲ ಬೇಕೋ ಅದನ್ನೆಲ್ಲ ವ್ಯವಸ್ಥೆ ಮಾಡಬೇಕು, ಅದಕ್ಕಾಗಿ ಅನುದಾನ ವ್ಯವಸ್ಥೆ ಮಾಡುತ್ತೇನೆ ಎಂದು ಹೇಳಿದರು.
ಮೈಸೂರಿನಲ್ಲಿ ಮೂರು ಎಕರೆ ಜಾಗದಲ್ಲಿ ಕಂಬಳ ನಿರ್ಮಿಸಿ ಪ್ರತಿ ವರ್ಷ ಕಂಬಳ ನಡೆಸುವಂತಾಗಬೇಕು. ದಸರಾ ಕ್ರೀಡಾಕೂಟದಲ್ಲಿ ಕಂಬಳವನ್ನೂ ಸ್ಪರ್ಧೆಯಾಗಿಸಿ ಜನರನ್ನು ಆಕರ್ಷಿಸುವಂತೆ ವ್ಯವಸ್ಥೆ ಆಗಬೇಕು. ಇದಲ್ಲದೆ, ಕರಾವಳಿಯಲ್ಲಿ ಜಾತಿ ಭೇದ ಇಲ್ಲದೆ ಎಲ್ಲರೂ ಜೊತೆಗೂಡಿ ಕಂಬಳ ನಡೆಸುವಂತಾಗಲು ಸರಕಾರದಿಂದ ವಿಶೇಷ ಪ್ರೋತ್ಸಾಹ ಮತ್ತು ಶಾಶ್ವತ ಅನುದಾನ ನೀಡಲಾಗುವುದು ಎಂದು ಡಿಕೆ ಶಿವಕುಮಾರ್ ಹೇಳಿದರು. ಈ ಸಂದರ್ಭದಲ್ಲಿ ಮಾಜಿ ಸಚಿವ ರಮಾನಾಥ ರೈ, ಕಾಂಗ್ರೆಸ್ ಮುಖಂಡರಾದ ಮಿಥುನ್ ರೈ, ಇನಾಯತ್ ಆಲಿ ಮತ್ತಿತರರು ಇದ್ದರು.
ಗುರುಪುರ ಕಂಬಳ ಸಮಿತಿ ಅಧ್ಯಕ್ಷ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಮಾತಾಡಿ, ಕಂಬಳ ದಕ್ಷಿಣ ಕನ್ನಡ ಜಿಲ್ಲೆಯ ಸಂಸ್ಕೃತಿ, ಜಾನಪದ ಕ್ರೀಡೆಯಾಗಿರದೆ ನಮ್ಮ ಸಂಸ್ಕೃತಿಯಾಗಿದೆ. ತಲಪಾಡಿಯಿಂದ ಮುಲ್ಕಿ ವರೆಗಿನ ಬೀಚ್ ರಸ್ತೆ ಗಳನ್ನು ಅಭಿವೃದ್ಧಿ ಪಡಿಸಿ ಬೀಚ್ ಪ್ರವಾಸೋದ್ಯಮಕ್ಕೆ ಒತ್ತು ನೀಡಬೇಕು ಎಂದು ಮನವಿ ಮಾಡಿದರು.
ಕಂಬಳ ಸಮಿತಿ ವತಿಯಿಂದ ನೇಗಿಲು ಹಸ್ತಾಂತರಿಸಿ ಉಪ ಮುಖ್ಯಮಂತ್ರಿ ಅವರನ್ನು ಸನ್ಮಾನಿಸಲಾಯಿತು. ಕಂಬಳ ಕ್ಷೇತ್ರದಲ್ಲಿ ವಿಶೇಷ ಸಾಧನೆ ತೋರಿದ ದೂಜ ಕೊಣವನ್ನು ಡಿಕೆಶಿ ಸನ್ಮಾನಿಸಿ ಅದರ ಪೋಸ್ಟಲ್ ಸ್ಟಾಂಪ್ ಬಿಡುಗಡೆ ಗೊಳಿಸಿದರು.
ಕಂಬಳ ಕ್ಷೇತ್ರದ ಗುಣಪಾಲ ಕಡಂಬ ಪ್ರಾಸ್ತಾವಿಕ ಮಾತನಾಡಿದರು. ಸಮಾರಂಭದಲ್ಲಿ ಎಸ್ ಸಿಡಿಸಿಸಿ ಬ್ಯಾಂಕ್ ಅದ್ಯಕ್ಷ ರಾಜೇಂದ್ರ ಕುಮಾರ್, ಮಾಜಿ ಸಚಿವರಾಗಿರುವ ರಮಾನಾಥ ರೈ, ಅಭಯಚಂದ್ರಜೈನ್, ವಿನಯ ಕುಮಾರ್ ಸೊರಕೆ, ವಿ.ಪ. ಸದಸ್ಯ ಐವನ್ ಡಿಸೋಜಾ, ಪದ್ಮರಾಜ್ ಪೂಜಾರಿ, ಶಕುಂತಲಾ ಶೆಟ್ಟಿ ಪುತ್ತೂರು, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ, ರಕ್ಷಿತ್ ಶಿವರಾಮ್, ಮಮತಾ ಗಟ್ಟಿ, ಕಣಚೂರು ಮೋನು, ದೇವಿಪ್ರಸಾದ್ ಶೆಟ್ಟಿ ಮೊದಲಾದವರು ಇದ್ದರು.
In a significant development for traditional sports enthusiasts, Deputy Chief Minister D.K. Shivakumar announced that the popular Mangalore Kambala will be included in the Mysore Dasara Games starting next year. The announcement was made during the Gurupura Kambala event, where local farmers showcased their skills in the time-honored buffalo race.
29-04-25 10:45 pm
Bangalore Correspondent
CM Siddaramaiah, Belagavi, BJP Suresh Kumar:...
29-04-25 09:51 pm
Protest Kalaburagi, islamabad Locality: ಕಲಬುರ...
29-04-25 09:20 pm
Kudupu Murder, Mob attack, Parameshwar: ಕುಡುಪ...
29-04-25 04:28 pm
Praveen Nettaru, Mohsin Shukur, Karwar Police...
29-04-25 01:04 pm
30-04-25 03:14 pm
HK News Desk
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
ಪಾಕಿಸ್ತಾನದ ಶಾಂತಿ ಸಮಿತಿ ಕಚೇರಿ ಎದುರೇ ಬಾಂಬ್ ಸ್ಫೋ...
28-04-25 05:53 pm
30-04-25 11:26 am
Mangalore Correspondent
Puttur Elephant Attack: ಕಾಡಾನೆ ತಿವಿತಕ್ಕೆ ಪುತ್...
29-04-25 11:00 pm
Mangalore, Ullal Nethravathi Bridge: ಉಳ್ಳಾಲ ನ...
29-04-25 05:45 pm
Mangalore, Dr Kalladka Bhat: ಹೆಣ್ಣು ಮಕ್ಕಳು ವ್...
29-04-25 12:40 pm
Vadiraj, Mangalore, B R Ambedkar: ಕಾಂಗ್ರೆಸ್ ಸ...
29-04-25 11:53 am
29-04-25 09:59 pm
Mangalore Correspondent
Kudupu Murder, Mangalore Crime, Police: ಕುಡುಪ...
29-04-25 02:53 pm
Belthagady, Blackmail, Mangalore crime: ಬೆಳ್ತ...
28-04-25 11:39 am
Shootout Bakrebail, Mangalore Crime: ಬಾಕ್ರಬೈಲ...
28-04-25 11:24 am
Mangalore crime, Murder, Kudupu: ಕುಡುಪು ಬಳಿಯಲ...
27-04-25 10:59 pm