ಬ್ರೇಕಿಂಗ್ ನ್ಯೂಸ್
15-04-25 09:21 pm Mangalore Correspondent ಕರಾವಳಿ
ಮಂಗಳೂರು, ಎ.15 : ಸುರತ್ಕಲ್ ನಲ್ಲಿ ನಡೆದ ಮದುವೆಗೆ ಮುಂಬೈನಿಂದ ಬಂದಿದ್ದ ಹತ್ತು ಮಂದಿಯಿದ್ದ ಕುಟುಂಬವೊಂದು ಎನ್ಐಟಿಕೆ ಬಳಿಯ ಬೀಚ್ ಗೆ ತೆರಳಿದ್ದು, ಅಲ್ಲಿ ಸಮುದ್ರದ ಅಲೆಗಳೊಂದಿಗೆ ಈಜಾಡುತ್ತಿದ್ದಾಗ ಇಬ್ಬರು ಹದಿಹರೆಯದ ವಿದ್ಯಾರ್ಥಿಗಳು ನೀರಿಗೆ ಬಿದ್ದು ಸಮುದ್ರ ಪಾಲಾಗಿದ್ದಾರೆ.
ಮುಂಬೈನಲ್ಲಿ ದ್ವಿತೀಯ ಪಿಯುಸಿ ಮುಗಿಸಿರುವ ಧ್ಯಾನ್ ಬಂಜನ್ (18) ಮತ್ತು ಈಚೆಗಷ್ಟೇ ಎಸ್ಎಸ್ಎಲ್ ಸಿ ಮುಗಿಸಿದ್ದ ಹನೀಶ್ ಕುಲಾಲ್ (15) ನೀರುಪಾಲಾದವರು. ಹತ್ತು ಮಂದಿಯ ಕುಟುಂಬ ಸುರತ್ಕಲ್ ಸಮೀಪದ ಸೂರಿಂಜೆಯ ಪ್ರಖ್ಯಾತ್ ಎಂಬವರ ಮನೆಗೆ ಮದುವೆ ಕಾರ್ಯಕ್ರಮಕ್ಕೆಂದು ಬಂದಿತ್ತು. ಮಂಗಳವಾರ ಸಂಜೆ 5.30ರ ವೇಳೆಗೆ ಎನ್ಐಟಿಕೆ ಬೀಚ್ ಬಳಿಗೆ ಬಂದಿದ್ದು ಸಮುದ್ರದಲ್ಲಿ ನೀರಾಟಕ್ಕಿಳಿದಿದ್ದರು.
ನೀರಿನಲ್ಲಿ ಆಡುತ್ತಿದ್ದಾಗಲೇ ಧ್ಯಾನ್ ಮತ್ತು ಹನೀಶ್ ಕುಲಾಲ್ ನೀರಿನ ಅಲೆಯಲ್ಲಿ ಸಿಲುಕಿದ್ದು, ಈ ವೇಳೆ ಲೈಫ್ ಗಾರ್ಡ್ ಸಿಬಂದಿ ಪ್ರದೀಪ್ ಆಚಾರ್ಯ ಅಲೆಗಳ ಎಡೆಯಿಂದ ಧ್ಯಾನ್ ನನ್ನು ಎಳೆದು ಮೇಲಕ್ಕೆ ತಂದಿದ್ದಾರೆ. ಆದರೆ ಹನೀಶ್ ಕುಲಾಲ್ ಜೀವರಕ್ಷಕ ಸಿಬಂದಿ ಕೈಗೆ ಸಿಗದೆ ನಾಪತ್ತೆಯಾಗಿದ್ದಾರೆ. ಧ್ಯಾನ್ ನನ್ನು ಕೂಡಲೇ ಸುರತ್ಕಲ್ ಪದ್ಮಾವತಿ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದರೂ ಅಷ್ಟರಲ್ಲಿ ಸಾವನ್ನಪ್ಪಿದ್ದಾರೆ. ಧ್ಯಾನ್ ಮುಂಬೈನಲ್ಲಿ ನೆಲೆಸಿರುವ ಬೈಂದೂರು ಮೂಲದ ವಿವೇಕಾನಂದ ಬಂಜನ್ ಅವರ ಪುತ್ರನಾಗಿದ್ದು, ಹನೀಶ್ ಕುಲಾಲ್ ಮುಂಬೈನಲ್ಲಿ ನೆಲೆಸಿರುವ ಮಂಗಳೂರು ಮೂಲದ ಉಮೇಶ್ ಕುಲಾಲ್ ಅವರ ಪುತ್ರನೆಂದು ಸುರತ್ಕಲ್ ಪೊಲೀಸರು ತಿಳಿಸಿದ್ದಾರೆ. ಹನೀಶ್ ಪತ್ತೆಗಾಗಿ ಲೈಫ್ ಗಾರ್ಡ್ ಸಿಬಂದಿ ಮತ್ತು ಅಗ್ನಿಶಾಮಕ ದಳ ಕಾರ್ಯಾಚರಣೆ ನಡೆಸಿದ್ದಾರೆ. ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a heartbreaking incident, two youths from Mumbai drowned at Surathkal Beach in Mangalore. The deceased have been identified as Dhyan, 18, and Hanish Kulal, 15. The unfortunate event occurred while the families were celebrating a wedding function in Surathkal. Following the ceremony, Dhyan and Hanish, along with their family, decided to visit the beach. Witnesses report that the youths were enjoying the water when they encountered difficulties, leading to the tragic drowning.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm