ಬ್ರೇಕಿಂಗ್ ನ್ಯೂಸ್
30-04-25 11:26 am Mangalore Correspondent ಕರಾವಳಿ
ಮಂಗಳೂರು, ಎ.30 : ಕುಡುಪು ಬಳಿಯಲ್ಲಿ ಯುವಕರ ಗುಂಪಿನಿಂದ ಥಳಿತಕ್ಕೊಳಗಾಗಿ ಹತ್ಯೆಗೀಡಾದ ಪ್ರಕರಣದಲ್ಲಿ ಸಂತ್ರಸ್ತ ಯುವಕನ ಗುರುತು ಪತ್ತೆಯಾಗಿದ್ದು ಕೇರಳದ ವಯನಾಡ್ ಮೂಲದ ಅಶ್ರಫ್ ಎಂದು ಗುರುತಿಸಲಾಗಿದೆ.
ವಯನಾಡ್ ಜಿಲ್ಲೆಯ ಸುಲ್ತಾನ್ ಬತ್ತೇರಿ ಬಳಿಯ ಪುಲಪ್ಪಳ್ಳಿ ನಿವಾಸಿಯೆಂದು ಪ್ರಾಥಮಿಕ ಮೂಲಗಳಿಂದ ತಿಳಿದುಬಂದಿದ್ದು ಯುವಕನ ಗುರುತು ಪತ್ತೆಗಾಗಿ ಕುಟುಂಬ ಸದಸ್ಯರು ಮಂಗಳೂರಿಗೆ ಆಗಮಿಸಲಿದ್ದಾರೆ. ಪ್ರಕರಣ ಸಂಬಂಧಿಸಿ ಈಗಾಗಲೇ 15 ಜನರನ್ನು ಮಂಗಳೂರು ಗ್ರಾಮಾಂತರ ಪೊಲೀಸರು ಬಂಧಿಸಿದ್ದರು. ಇದೀಗ ಮತ್ತೆ ಐವರನ್ನು ಪೊಲೀಸರು ಬಂಧಿಸಿದ್ದಾರೆ. ಯತಿರಾಜ್, ಸಚಿನ್, ಅನಿಲ್, ಸುಶಾಂತ್, ಆದರ್ಶ್ ಬಂಧಿತರು.
ಎಪ್ರಿಲ್ 27ರ ಭಾನುವಾರ ಸಂಜೆ ಕುಡುಪು ಮೈದಾನದಲ್ಲಿ ಕ್ರಿಕೆಟ್ ಆಡುತ್ತಿದ್ದಾಗ ಯುವಕ ದೇಶ ವಿರೋಧಿ ಘೋಷಣೆ ಕೂಗಿದ ವಿಷಯದಲ್ಲಿ ವಾಗ್ವಾದ ನಡೆಸಿ ಸ್ಥಳೀಯ ಯುವಕರು ಹಲ್ಲೆ ನಡೆಸಿದ್ದರು. ಗುಂಪು ಸೇರಿ ಥಳಿಸಿ ಅಲ್ಲಿಯೇ ಬಿಟ್ಟು ಹೋಗಿದ್ದರಿಂದ ಹಲ್ಲೆಗೀಡಾದ ಯುವಕ ಬಳಿಕ ಸ್ಥಳದಲ್ಲೇ ಸಾವನ್ನಪ್ಪಿದ್ದಾಗಿ ಪ್ರಕರಣ ದಾಖಲಾಗಿದೆ.
ಮುಸ್ಲಿಂ ಯುವಕನೆಂದು ಧರ್ಮ ದ್ವೇಷದಲ್ಲಿ ಹಲ್ಲೆ ನಡೆಸಿದ್ದಾರೆಂದು ಆರೋಪ ಕೇಳಿಬಂದಿದೆ. ಆದರೆ ಸಾವಿಗೀಡಾದ ವ್ಯಕ್ತಿ ಯಾರೆಂದೇ ಗುರುತು ಸಿಕ್ಕಿರಲಿಲ್ಲ. ಸ್ಥಳೀಯ ಪೊಲೀಸರು ಹೇಳದಿದ್ದರೂ, ಗೃಹ ಸಚಿವ ಪರಮೇಶ್ವರ್ ಪಾಕಿಸ್ತಾನ ಜೊಂದಾಬಾದ್ ಘೋಷಣೆ ಕೂಗಿದ್ದಕ್ಕಾಗಿ ಹಲ್ಲೆ ನಡೆಸಿದ್ದರು ಎಂದಿದ್ದಾರೆ. ಹೀಗಾಗಿ ಮುಸ್ಲಿಂ ಎನ್ನುವುದಕ್ಕಿಂತಲೂ ದೇಶಕ್ಕೆ ವಿರುದ್ಧವಾಗಿ ಘೋಷಣೆ ಹಾಕಿದ್ದಕ್ಕಾಗಿ ಯುವಕರು ಹಲ್ಲೆ ನಡೆಸಿದ್ದರೆಂಬುದು ಕಂಡುಬರುತ್ತದೆ.
Kudupu Mob Lynching Murder Case, Five More Arrested for Assault Over Alleged Anti National Slogans.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm