ಬ್ರೇಕಿಂಗ್ ನ್ಯೂಸ್
10-05-25 07:10 pm Mangalore Correspondent ಕರಾವಳಿ
ಮಂಗಳೂರು, ಮೇ 10 : ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಮೇ 10ರ ಸಂಜೆ 4 ಗಂಟೆಯಿಂದ ಮೇ 14ರ ಸಂಜೆ 4 ಗಂಟೆ ವರೆಗೆ ಡ್ರೋಣ್ ಹಾರಾಟ ನಿಷೇಧಿಸಿ ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಆದೇಶ ಹೊರಡಿಸಿದ್ದಾರೆ.
ಸಾರ್ವಜನಿಕ ಶಾಂತಿ ಮತ್ತು ಕಾನೂನು ಸುವ್ಯವಸ್ಥೆಗೆ ಯಾವುದೇ ಧಕ್ಕೆ ಬರದಂತೆ ತಡೆಯಲು ಹಾಗೂ ಪ್ರಸಕ್ತ ವಿದ್ಯಮಾನಗಳನ್ನು ಪರಿಗಣಿಸಿ ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಡ್ರೋಣ್ ಹಾರಾಟ ನಿಷೇಧ ಮಾಡಲಾಗಿದೆ. ಮಂಗಳೂರು ನಗರ ವ್ಯಾಪ್ತಿಯ ಎಲ್ಲ ಪೊಲೀಸ್ ಠಾಣೆಗಳ ಠಾಣಾಧಿಕಾರಿಯವರು ತಮ್ಮ ವ್ಯಾಪ್ತಿಯಲ್ಲಿ ಯಾವುದೇ ಡ್ರೋಣ್ ಹಾರಾಟ ಆಗದಂತೆ ಅಗತ್ಯ ಕ್ರಮ ತೆಗೆದುಕೊಳ್ಳಲು ಮತ್ತು ಈ ಆದೇಶ ಕಟ್ಟುನಿಟ್ಟಾಗಿ ಪಾಲನೆ ಆಗುತ್ತಿರುವುದನ್ನು ಖಚಿತಪಡಿಸಿಕೊಳ್ಳಲು ಆದೇಶಿಸಲಾಗಿದೆ.
ಇದೇ ಮಾದರಿಯಲ್ಲಿ ಮೈಸೂರು ನಗರ ಕಮಿಷನರೇಟ್ ವ್ಯಾಪ್ತಿಯಲ್ಲು ಡ್ರೋಣ್ ಹಾರಾಟ ನಿಷೇಧಿಸಿ ಅಲ್ಲಿನ ಪೊಲೀಸ್ ಕಮಿಷನರ್ ಆದೇಶ ಮಾಡಿದ್ದಾರೆ. ಭಾರತ- ಪಾಕ್ ಮಧ್ಯೆ ಉದ್ವಿಗ್ನ ಸ್ಥಿತಿ ಮತ್ತು ಗಡಿಭಾಗದಲ್ಲಿ ಡ್ರೋಣ್ ಮೂಲಕ ದಾಳಿ ಹೆಚ್ಚುತ್ತಿರುವುದರಿಂದ ಡ್ರೋಣ್ ಹಾರಾಟ ನಿಷೇಧಿಸಲಾಗಿದೆ ಎನ್ನಲಾಗುತ್ತಿದೆ. ಆದರೆ ಈ ಕುರಿತು ಹೊರಡಿಸಿದ ಆದೇಶದಲ್ಲಿ ಪೊಲೀಸರು ಮಾಹಿತಿ ನೀಡಿಲ್ಲ. ರಾಷ್ಟ್ರೀಯ ಸುರಕ್ಷಿತ ಕೇಂದ್ರಗಳು, ವಿಮಾನ ನಿಲ್ದಾಣಗಳು ಇನ್ನಿತರ ಪ್ರಮುಖ ಕೇಂದ್ರಗಳಿರುವಲ್ಲಿ ಡ್ರೋಣ್ ಹಾರಾಟ ನಿಷೇಧಿಸಿರುವ ಸಾಧ್ಯತೆಯಿದೆ.
Drone Banned in Mangalore and Mysuru Amid India Pakistan Tensions, Police on High Alert.
11-07-25 06:36 pm
Bangalore Correspondent
ಸಿಎಂ ಬದಲಾವಣೆ ಎಲ್ಲ ಮುಗಿದ ಕಥೆ, ಸೆಪ್ಟೆಂಬರ್ನಲ್ಲಿ...
11-07-25 05:41 pm
24 ಗಂಟೆಯಲ್ಲಿ ಭಟ್ಕಳ ನಗರವನ್ನು ಸ್ಫೋಟಿಸುತ್ತೇನೆ ;...
11-07-25 04:36 pm
Heart Attack, Belagavi, Bidar: ಹೃದಯಾಘಾತ ; ರಸ್...
11-07-25 04:22 pm
ನಾನೇ ಐದು ವರ್ಷಕ್ಕೆ ಸಿಎಂ ; ದೆಹಲಿ ಅಂಗಳದಲ್ಲೂ ಹೂಂಕ...
10-07-25 09:53 pm
12-07-25 04:21 pm
HK News Desk
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
Bangle Seller, Changur Baba Arrest, Uttar Pra...
10-07-25 03:24 pm
12-07-25 01:42 pm
Mangalore Correspondent
Dharmasthala News, Dead bodies, Court: ಧರ್ಮಸ್...
11-07-25 08:55 pm
Dc Mangalore, Darshan; ಯುವ ಜಿಲ್ಲಾಧಿಕಾರಿ ಚುರುಕ...
10-07-25 07:23 pm
Mangalore, Traffic Constable, Lokayukta, Tasl...
10-07-25 04:01 pm
ಮಂಗಳೂರಿನ ಟೈಲರಿಂಗ್ ಶಾಪಲ್ಲೇ ಕುಸಿದು ಬಿದ್ದಿದ್ದ ನವ...
09-07-25 10:25 pm
12-07-25 01:32 pm
HK News Desk
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm
ಮಂಗಳೂರಿಗೆ ಮಧ್ಯಪ್ರದೇಶ, ಮಹಾರಾಷ್ಟ್ರದಿಂದ ಡ್ರಗ್ಸ್...
11-07-25 07:13 pm
Rape case in Ramanagar: 14 ವರ್ಷದ ಬಾಲಕಿ ಮೇಲೆ ಆ...
10-07-25 08:09 pm