ಬ್ರೇಕಿಂಗ್ ನ್ಯೂಸ್
22-05-25 10:29 pm Mangalore Correspondent ಕರಾವಳಿ
ಮಂಗಳೂರು, ಮೇ 22 : ಹಿಂದು ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣವನ್ನು ಎನ್ಐಎ ತನಿಖೆಗೆ ಒಪ್ಪಿಸುವಂತೆ ಆಗ್ರಹಿಸಿ ವಿಶ್ವ ಹಿಂದು ಪರಿಷತ್ ಮತ್ತು ಬಜರಂಗದಳ ವತಿಯಿಂದ ಬಜ್ಪೆ ಪೇಟೆಯಲ್ಲಿ ಮೇ 25ರಂದು ಜನಾಗ್ರಹ ಸಭೆ ಮತ್ತು ಶ್ರದ್ಧಾಂಜಲಿ ಸಭೆ ನಡೆಯಲಿದೆ.
ಮೇ 25ರ ಭಾನುವಾರ ಸಂಜೆ 3.30 ಗಂಟೆಗೆ ಬಜ್ಪೆ ಜಂಕ್ಷನ್ನಲ್ಲಿರುವ ಶಾರದಾ ಮಂಟಪ ಬಳಿ ಸಭೆ ನಡೆಯಲಿದ್ದು ಶ್ರೀಕಾಂತ್ ಶೆಟ್ಟಿ ಕಾರ್ಕಳ ಪ್ರಮುಖ ಭಾಷಣ ಮಾಡಲಿದ್ದಾರೆ. ವಿಶ್ವ ಹಿಂದು ಪರಿಷತ್ ಮಂಗಳೂರು ವಿಭಾಗ ಸಹ ಕಾರ್ಯದರ್ಶಿ ಶಿವಾನಂದ್ ಮೆಂಡನ್ ಪ್ರಾಸ್ತಾವಿಕ ಮಾತನಾಡಲಿದ್ದಾರೆ. ಮಂಗಳೂರು ಮಹಾನಗರ ಸೇರಿದಂತೆ ವಿವಿಧ ಭಾಗಗಳಿಂದ ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಸಭೆಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದು ವಿಶ್ವ ಹಿಂದು ಪರಿಷತ್ ಮಂಗಳೂರು ವಿಭಾಗದ ಅಧ್ಯಕ್ಷ ಪುರುಷೋತ್ತಮ ತಿಳಿಸಿದ್ದಾರೆ.
ವಾಹನಗಳಿಗೆ ಪಾರ್ಕಿಂಗ್ ವ್ಯವಸ್ಥೆ
ಮಂಗಳೂರು - ಸುರತ್ಕಲ್ - ಕಾವೂರು ಭಾಗದಿಂದ ಬರುವ ವಾಹನಗಳಿಗೆ ಬಜ್ಪೆ ನಾರಾಯಗುರು ಮಂದಿರ ಬಳಿ ವಾಹನ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ಗುರುಪುರ - ವಾಮಂಜೂರು - ಮಳಲಿ ಕಡೆಯಿಂದ ಬರುವ ವಾಹನಗಳಿಗೆ ಸಂಜೀವ ಶೆಟ್ಟಿ ಸಭಾಭವನ ಮತ್ತು ಪಕ್ಕದ ಮೈದಾನದಲ್ಲಿ ವಾಹನ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ಮುಲ್ಕಿ ಮೂಡುಬಿದ್ರೆಯಿಂದ ಬರುವ ವಾಹನಗಳಿಗೆ ಕನ್ನಿಕಾ ನಿಲಯ ಮೈದಾನ ಬಳಿ ವಾಹನ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ.
ಹಿಂದುಗಳನ್ನು ಭಯಪಡಿಸುವ ಉದ್ದೇಶದಿಂದ ಸುಹಾಸ್ ಶೆಟ್ಟಿ ಹತ್ಯೆ ಮಾಡಲಾಗಿತ್ತು. ಇದಕ್ಕಾಗಿ ವಿದೇಶದಿಂದಲೂ ಫಂಡಿಂಗ್ ಆಗಿತ್ತು. ಹೀಗಾಗಿ ಎನ್ಐಎ ತನಿಖೆ ಆಗಬೇಕೆಂದು ಒತ್ತಾಯ ಮಾಡುತ್ತಿದ್ದೇವೆ. ಸಭೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು, ಹಿತೈಷಿಗಳು ಭಾಗವಹಿಸಬೇಕೆಂದು ಅವರು ಕೇಳಿಕೊಂಡಿದ್ದಾರೆ.
Vishva Hindu Parishad (VHP) will organise a “janagraha sabhe” near Sharada Mantapa at Bajpe Junction here on May 25 seeking NIA probe into the murder of Suhas Shetty, a rowdy sheeter and Hindutva activist, who was murdered near Bajpe on May 1.
11-07-25 06:36 pm
Bangalore Correspondent
ಸಿಎಂ ಬದಲಾವಣೆ ಎಲ್ಲ ಮುಗಿದ ಕಥೆ, ಸೆಪ್ಟೆಂಬರ್ನಲ್ಲಿ...
11-07-25 05:41 pm
24 ಗಂಟೆಯಲ್ಲಿ ಭಟ್ಕಳ ನಗರವನ್ನು ಸ್ಫೋಟಿಸುತ್ತೇನೆ ;...
11-07-25 04:36 pm
Heart Attack, Belagavi, Bidar: ಹೃದಯಾಘಾತ ; ರಸ್...
11-07-25 04:22 pm
ನಾನೇ ಐದು ವರ್ಷಕ್ಕೆ ಸಿಎಂ ; ದೆಹಲಿ ಅಂಗಳದಲ್ಲೂ ಹೂಂಕ...
10-07-25 09:53 pm
11-07-25 12:08 pm
HK News Desk
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
Bangle Seller, Changur Baba Arrest, Uttar Pra...
10-07-25 03:24 pm
Amit Shah; ರಾಜಕೀಯ ನಿವೃತ್ತಿ ಬಳಿಕ ವೇದ, ಉಪನಿಷತ್...
10-07-25 01:00 pm
ಗೋಮಾಂಸ ತಿನ್ನಿಸಿ ಮತಾಂತರಕ್ಕೆ ಯತ್ನ ; ಫೇಸ್ಬುಕ್ಕಲ್...
07-07-25 08:45 pm
11-07-25 08:55 pm
Mangalore Correspondent
Dc Mangalore, Darshan; ಯುವ ಜಿಲ್ಲಾಧಿಕಾರಿ ಚುರುಕ...
10-07-25 07:23 pm
Mangalore, Traffic Constable, Lokayukta, Tasl...
10-07-25 04:01 pm
ಮಂಗಳೂರಿನ ಟೈಲರಿಂಗ್ ಶಾಪಲ್ಲೇ ಕುಸಿದು ಬಿದ್ದಿದ್ದ ನವ...
09-07-25 10:25 pm
Mangalore Home Minister Parameshwara, Peace M...
09-07-25 10:17 pm
11-07-25 10:10 pm
HK News Desk
ಮಂಗಳೂರಿಗೆ ಮಧ್ಯಪ್ರದೇಶ, ಮಹಾರಾಷ್ಟ್ರದಿಂದ ಡ್ರಗ್ಸ್...
11-07-25 07:13 pm
Rape case in Ramanagar: 14 ವರ್ಷದ ಬಾಲಕಿ ಮೇಲೆ ಆ...
10-07-25 08:09 pm
Kerala Couple, Chit Fund Scam; ಚಿಟ್ ಫಂಡ್ ಹೆಸರ...
10-07-25 01:05 pm
Double Murder Hassan, crime: ಆಸ್ತಿ ವಿಚಾರಕ್ಕೆ...
10-07-25 12:04 pm