ಬ್ರೇಕಿಂಗ್ ನ್ಯೂಸ್
23-05-25 05:38 pm Mangalore Correspondent ಕರಾವಳಿ
ಮಂಗಳೂರು, ಮೇ 23 : ಎತ್ತಿಗೆ ಜ್ವರ ಬಂದರೆ, ಕೋಣಕ್ಕೆ ಬರೆ ಎಳೆದರು ಎನ್ನುವ ಹಾಗೆ ಕಾಂಗ್ರೆಸ್ ಸರ್ಕಾರ ಇತ್ತೀಚೆಗೆ ಹಿಂದೂ ಕಾರ್ಯಕರ್ತರನ್ನ ಮನೆಯಲ್ಲಿ ಇರೋದಕ್ಕೆ ಬಿಡದೆ ಗಡೀಪಾರು ಕೆಲಸ ಆರಂಭಿಸಿದೆ. ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆಯಲ್ಲಿ ಸಿದ್ದರಾಮಯ್ಯ ಅವರ ಸರಕಾರ ನಿಷ್ಪಕ್ಷಪಾತ ತನಿಖೆ ನಡೆಸದೇ ಮತ್ತೆ ಹಿಂದು ಕಾರ್ಯಕರ್ತರನ್ನೇ ಟಾರ್ಗೆಟ್ ಮಾಡುತ್ತಿದೆ. ಆ ಕೊಲೆ ಪ್ರಕರಣದ ಹಿಂದೆ ಯಾರಿದ್ದಾರೆ? ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆಗೆ ಹಣ ಬಂದಿದ್ದು ಹೇಗೆ? ಇದ್ಯಾವುದರ ಬಗ್ಗೆಯೂ ತನಿಖೆ ನಡೆಸದೆ, ಸ್ವತಃ ಪೊಲೀಸ್ ಇಲಾಖೆಯಲ್ಲೇ ಕೆಲವರ ಬೆಂಬಲದಿಂದ ಈ ಹತ್ಯೆ ನಡೆದಿರುವ ಬಗ್ಗೆ ಅನುಮಾನ ಇದ್ದರೂ ಅವರ ಕೈಯಲ್ಲೇ ತನಿಖೆ ನಡೆಸಿದ್ರೆ ನ್ಯಾಯ ಸಿಗುವುದು ಹೇಗೆ? ಎಂದು ಯುವಮೋರ್ಚಾ ದ.ಕ. ಜಿಲ್ಲಾಧ್ಯಕ್ಷ ನಂದನ್ ಮಲ್ಯ ಪ್ರಶ್ನಿಸಿದ್ದಾರೆ.
ಜಿಹಾದಿಗಳಿಗೆ ರಾಜ್ಯ ಸರ್ಕಾರದ ಬೆಂಬಲವೂ ಇದ್ದು, ಸರಿಯಾದ ಮಾರ್ಗದಲ್ಲಿ ತನಿಖೆ ನಡೆಯೋದು ಅನುಮಾನವೇ. ಹೀಗಾಗಿ ಪ್ರಕರಣವನ್ನ ಎನ್ಐಎಗೆ ವಹಿಸಬೇಕು. ರಾಷ್ಟ್ರೀಯ ತನಿಖಾ ದಳದಿಂದ ಮಾತ್ರ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ನ್ಯಾಯ ಸಿಗಲು ಸಾಧ್ಯ ಎಂದವರು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣವನ್ನ ಎನ್ಐಎಗೆ ವಹಿಸಲು ವಿಶ್ವ ಹಿಂದೂ ಪರಿಷತ್ ಬಜರಂಗದಳ ಬಜ್ಪೆ ಚಲೋ ಆಯೋಜಿಸಿದ್ದು, ಇಡೀ ಹಿಂದೂ ಸಮುದಾಯ, ಹಿಂದೂ ಕಾರ್ಯಕರ್ತರು, ಸಂಘಟನೆಗಳ ಜೊತೆ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಯುವಮೋರ್ಚಾ ಬಜ್ಪೆ ಚಲೋವನ್ನ ಬೆಂಬಲಿಸಲಿದೆ.
25ರಂದು ಮಧ್ಯಾಹ್ನ ಮೂರು ಗಂಟೆಗೆ ಬಜ್ಪೆಯ ಶಾರದಾ ಮಂಟಪದ ಬಳಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಯಲಿದ್ದು, ಕಾರ್ಯಕ್ರಮಕ್ಕೆ ಎಲ್ಲಾ ರಾಷ್ಟ್ರೀಯವಾದಿಗಳು, ಹಿಂದೂಗಳು, ಹಿಂದೂ ಕಾರ್ಯಕರ್ತರು ಸ್ವಯಂಪ್ರೇರಿತವಾಗಿ ಸಮಯ ನೀಡಿ ಕೈ ಜೋಡಿಸಬೇಕಾಗಿ ವಿಶ್ವ ಹಿಂದೂ ಪರಿಷತ್ ಕೇಳಿಕೊಂಡಿದೆ. ಅದರಂತೆ ಭಾರತೀಯ ಜನತಾ ಪಾರ್ಟಿಯ ಯುವಮೋರ್ಚಾ ವಿಶ್ವ ಹಿಂದು ಪರಿಷತ್ನ ಬಜ್ಪೆ ಚಲೋಗೆ ಬೆಂಬಲ ಘೋಷಿಸುತ್ತಿದೆ.
ಸುಹಾಸ್ ಶೆಟ್ಟಿ ಕೊಲೆ ಪ್ರಕರಣವನ್ನ NIA ಗೆ ರಾಜ್ಯ ಸರ್ಕಾರ ವಹಿಸುವ ವರೆಗೂ ಬಿಜೆಪಿ ಯುವಮೋರ್ಚಾ ಸುಮ್ಮನೆ ಕೂರುವುದಿಲ್ಲ. ವಿಶ್ವ ಹಿಂದು ಪರಿಷತ್ ಜೊತೆ ಭಾರತೀಯ ಜನತಾ ಪಾರ್ಟಿ ಸದಾ ಇರಲಿದೆ ಎಂದು ಬಿಜೆಪಿ ಯುವಮೋರ್ಚಾ ಜಿಲ್ಲಾಧ್ಯಕ್ಷ ನಂದನ ಮಲ್ಯ ಹೇಳಿಕೆಯಲ್ಲಿ ತಿಳಿಸಿದ್ದಾರೆ.
Mangalore How Can Police Investigate Suhas Shetty Murder Amid Allegations of Their Involvement ? BJP Nandan Mallya Backs VHP Bajpe Chalo Protest
11-07-25 06:36 pm
Bangalore Correspondent
ಸಿಎಂ ಬದಲಾವಣೆ ಎಲ್ಲ ಮುಗಿದ ಕಥೆ, ಸೆಪ್ಟೆಂಬರ್ನಲ್ಲಿ...
11-07-25 05:41 pm
24 ಗಂಟೆಯಲ್ಲಿ ಭಟ್ಕಳ ನಗರವನ್ನು ಸ್ಫೋಟಿಸುತ್ತೇನೆ ;...
11-07-25 04:36 pm
Heart Attack, Belagavi, Bidar: ಹೃದಯಾಘಾತ ; ರಸ್...
11-07-25 04:22 pm
ನಾನೇ ಐದು ವರ್ಷಕ್ಕೆ ಸಿಎಂ ; ದೆಹಲಿ ಅಂಗಳದಲ್ಲೂ ಹೂಂಕ...
10-07-25 09:53 pm
11-07-25 12:08 pm
HK News Desk
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
Bangle Seller, Changur Baba Arrest, Uttar Pra...
10-07-25 03:24 pm
Amit Shah; ರಾಜಕೀಯ ನಿವೃತ್ತಿ ಬಳಿಕ ವೇದ, ಉಪನಿಷತ್...
10-07-25 01:00 pm
ಗೋಮಾಂಸ ತಿನ್ನಿಸಿ ಮತಾಂತರಕ್ಕೆ ಯತ್ನ ; ಫೇಸ್ಬುಕ್ಕಲ್...
07-07-25 08:45 pm
11-07-25 08:55 pm
Mangalore Correspondent
Dc Mangalore, Darshan; ಯುವ ಜಿಲ್ಲಾಧಿಕಾರಿ ಚುರುಕ...
10-07-25 07:23 pm
Mangalore, Traffic Constable, Lokayukta, Tasl...
10-07-25 04:01 pm
ಮಂಗಳೂರಿನ ಟೈಲರಿಂಗ್ ಶಾಪಲ್ಲೇ ಕುಸಿದು ಬಿದ್ದಿದ್ದ ನವ...
09-07-25 10:25 pm
Mangalore Home Minister Parameshwara, Peace M...
09-07-25 10:17 pm
11-07-25 10:10 pm
HK News Desk
ಮಂಗಳೂರಿಗೆ ಮಧ್ಯಪ್ರದೇಶ, ಮಹಾರಾಷ್ಟ್ರದಿಂದ ಡ್ರಗ್ಸ್...
11-07-25 07:13 pm
Rape case in Ramanagar: 14 ವರ್ಷದ ಬಾಲಕಿ ಮೇಲೆ ಆ...
10-07-25 08:09 pm
Kerala Couple, Chit Fund Scam; ಚಿಟ್ ಫಂಡ್ ಹೆಸರ...
10-07-25 01:05 pm
Double Murder Hassan, crime: ಆಸ್ತಿ ವಿಚಾರಕ್ಕೆ...
10-07-25 12:04 pm