ಬ್ರೇಕಿಂಗ್ ನ್ಯೂಸ್
25-05-25 02:46 pm Mangalore Correspondent ಕರಾವಳಿ
ಮಂಗಳೂರು, ಮೇ 25 : ಕಂಕನಾಡಿ ಮ್ಯಾಕ್ ಮಾಲ್ ನ ಪಾರ್ಕಿಂಗ್ ಕೊಠಡಿಯೊಂದರಲ್ಲಿ ಕೆಫಟೇರಿಯಾ ಹೆಸರಲ್ಲಿ ಉದ್ಯಮ ಲೈಸನ್ಸ್ ಪಡೆದು ಅಕ್ರಮವಾಗಿ ಹುಕ್ಕಾ ಬಾರ್ ನಡೆಸುತ್ತಿದ್ದ ಜಾಗಕ್ಕೆ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿದ್ದು ಮಾಲೀಕ ಸಹಿತ ಮೂವರನ್ನು ಬಂಧಿಸಿದ್ದಾರೆ.
ಮಂಗಳೂರು ನಗರದ ಕಂಕನಾಡಿಯ ಮ್ಯಾಕ್ ಮಾಲ್ ನ ಪಾರ್ಕಿಂಗ್ ನಲ್ಲಿರುವ BLACK MOON RESTO CAFÉ ಎಂಬ ಹೆಸರಿನಲ್ಲಿ ಕಾನೂನು ಬಾಹಿರವಾಗಿ ನಡೆಸುತ್ತಿದ್ದ ಹುಕ್ಕಾ ಬಾರ್ ಗೆ ದಾಳಿ ನಡೆಸಿ ಅಕ್ರಮ ಹುಕ್ಕಾ ಬಾರ್ ನಡೆಸುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ಹುಕ್ಕಾ ಬಾರ್ ಮಾಲೀಕ ಉಳ್ಳಾಲ ಮೂಲದ ಸಿದ್ದಿಕ್ @ ಎಂ ಎಫ್ ಸಿ ಸಿದ್ದಿಕ್, ಅಬ್ದುಲ್ ನಾಸೀರ್, ಸಫ್ವಾನ್ ಬಂಧಿತರು. 2023-24ನೇ ಇಸವಿಯಲ್ಲಿ ಕೆಫೆಟೇರಿಯಾ ನಡೆಸಲು ಮಂಗಳೂರು ಮಹಾನಗರ ಪಾಲಿಕೆಯಿಂದ ಉದ್ದಿಮೆ ಪರವಾನಿಗೆ ಪಡೆದಿದ್ದ ಸಿದ್ದಿಕ್, ಕೆಫೆಟೇರಿಯಾ ನೆಪದಲ್ಲಿ ಅಕ್ರಮ ಹುಕ್ಕಾ ಬಾರ್ ನಡೆಸುತ್ತಿದ್ದ. ನಿಯಮಗಳನ್ನು ಉಲ್ಲಂಘಿಸಿ ಹೆಚ್ಚಿನ ಹಣ ಗಳಿಸುವ ಉದ್ದೇಶದಿಂದ ಯುವಕರನ್ನು ಮಾದಕ ಲೋಕದಲ್ಲಿ ತೇಲಿಸುತ್ತಿರುವುದು ಕಂಡುಬಂದಿದ್ದು, ಹುಕ್ಕಾ ಬಾರ್ ನಿಂದ ಹುಕ್ಕಾ ಸೇದುವ ಉಪಕರಣಗಳು, ತಂಬಾಕು ಉತ್ಪನ್ನಗಳನ್ನು ಸ್ವಾಧೀನಪಡಿಸಲಾಗಿದೆ.
ಸಿಸಿಬಿ ಘಟಕದ ಎಸಿಪಿ ಮನೋಜ್ ಕುಮಾರ್ ನಾಯ್ಕ್ ಮಾರ್ಗದರ್ಶನದಲ್ಲಿ ಪೊಲೀಸ್ ನಿರೀಕ್ಷಕರಾದ ರಫೀಕ್ ಕೆ.ಎಂ ನೇತೃತ್ವದಲ್ಲಿ ಪಿಎಸ್ಐ ಸುದೀಪ್ ಎಂ.ವಿ, ಶರಣಪ್ಪ ಭಂಡಾರಿ, ಎಎಸ್ಐ ಸುಜನ್ ಶೆಟ್ಟಿ ಹಾಗೂ ಸಿಸಿಬಿ ಸಿಬ್ಬಂದಿ ಮತ್ತು ಮಂಗಳೂರು ಪೂರ್ವ ಪೊಲೀಸ್ ಠಾಣೆ ಪಿಎಸ್ಐ ಮನೋಹರ್ ಪ್ರಸಾದ್ ಹಾಗೂ ಸಿಬ್ಬಂದಿ ಪಾಲ್ಗೊಂಡಿದ್ದರು.
In a major crackdown, the CCB police raided a hookah bar operating under the guise of a cafeteria in Kankanady and arrested three individuals, including the owner of the well-known MFC Hotel, Siddique. The illegal hookah bar was being run at "Moon Resto Cafe", which was operating with a cafeteria license but was allegedly being used to serve hookah, violating multiple legal provisions. Along with Siddique, the other two accused have been identified as Abdul Nasir and Sawfan.
03-08-25 09:30 pm
HK News Desk
Ravi Poojary Aide Kaviraj Arrested, Kolar Pol...
03-08-25 10:52 am
Dharmasthala News, High Court; ಧರ್ಮಸ್ಥಳ ಸುದ್ದ...
01-08-25 11:34 pm
‘Comedy Kiladigalu’, Chandrashekhar Siddi Sui...
01-08-25 10:45 pm
Kannada Producer Ganesh, Film Dharmasthala Fi...
01-08-25 09:09 pm
03-08-25 05:44 pm
HK News Desk
ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ನರೇಂದ್ರ ಮೋದಿ, ಭಾಗ...
03-08-25 04:25 pm
ಮಾಲೆಗಾಂವ್ ಪ್ರಕರಣದಲ್ಲಿ ಮೋಹನ್ ಭಾಗವತ್ ಬಂಧಿಸುವುದಕ...
01-08-25 10:48 pm
ಭಾರತ, ರಷ್ಯಾದ್ದು ಸತ್ತ ಆರ್ಥಿಕತೆ, ಒಟ್ಟಿಗೇ ನಾಶವಾಗ...
01-08-25 11:44 am
2008ರ ಮಾಲೆಗಾಂವ್ ಸ್ಫೋಟ ಪ್ರಕರಣ ; ಸಾಧ್ವಿ ಪ್ರಜ್ಞ...
31-07-25 10:08 pm
02-08-25 10:51 pm
Mangalore Correspondent
Kallapu Highway News; ಕಲ್ಲಾಪು ಹೆದ್ದಾರಿಯಲ್ಲಿ ಬ...
02-08-25 03:51 pm
Inspector Manjunath Gowda, SIT, Dharmasthala:...
02-08-25 02:31 pm
Dharmasthala Case, UDR, SIT Police News; ಧರ್ಮ...
02-08-25 01:46 pm
Kerala Comes to Mangalore: Feast at Coral, Th...
02-08-25 01:40 pm
03-08-25 10:11 pm
Mangalore Correspondent
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm