ಬ್ರೇಕಿಂಗ್ ನ್ಯೂಸ್
26-05-25 07:09 pm Bangalore Correspondent ಕರಾವಳಿ
ಮಂಗಳೂರು, ಮೇ 26 : ಸುಹಾಸ್ ಶೆಟ್ಟಿ ಕೊಲೆ ಪ್ರಕರಣವನ್ನು ಎನ್ಐಎ ತನಿಖೆಗೆ ಒಪ್ಪಿಸುವಂತೆ ಆಗ್ರಹಿಸಿ ಬಜ್ಪೆ ಪೇಟೆಯಲ್ಲಿ ವಿಶ್ವ ಹಿಂದು ಪರಿಷತ್ ವತಿಯಿಂದ ಆಯೋಜಿಸಿದ್ದ ಜನಾಗ್ರಹ ಸಭೆಗೆ ಪೊಲೀಸ್ ಅನುಮತಿ ಪಡೆದಿರಲಿಲ್ಲವೆಂದು ಬಜ್ಪೆ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ವಿಶ್ವ ಹಿಂದು ಪರಿಷತ್ ಮತ್ತು ಬಜರಂಗದಳ ವತಿಯಿಂದ ಬಜ್ಪೆಯ ಶಾರದಾ ಮಂಟಪದ ಬಳಿ ಬಜ್ಪೆ ಚಲೋ ಎನ್ನುವ ಪ್ರತಿಭಟನಾ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಈ ಕಾರ್ಯಕ್ರಮಕ್ಕೆ ಪೊಲೀಸರ ಅನುಮತಿ ಪಡೆದಿರಲಿಲ್ಲ. ಪೊಲೀಸ್ ಅನುಮತಿ ಪಡೆಯದೆ ನಡೆಸಿದ ಕಾರ್ಯಕ್ರಮದಲ್ಲಿ ಮೂರು ಸಾವಿರದಷ್ಟು ಜನರು ಪಾಲ್ಗೊಂಡಿದ್ದರು. ಕಾನೂನು ವಿರುದ್ಧವಾಗಿ ಬಜ್ಪೆ ಪೇಟೆಯಲ್ಲಿ ಜನರು ಸೇರಿದ್ದು, ಆಮೂಲಕ ಬಜ್ಪೆಗೆ ಹೋಗುವ ಮತ್ತು ಹಿಂತಿರುಗುವ ದಾರಿಗಳನ್ನು ಮುಚ್ಚಲಾಗಿತ್ತು. ಇದರಿಂದ ಸಾರ್ವಜನಿಕರಿಗೆ ಮತ್ತು ವಾಹನ ಪ್ರಯಾಣಿಕರಿಗೆ ಅಡಚಣೆಯಾಗಿತ್ತು.

ಇದಲ್ಲದೆ, ಪ್ರತಿಭಟನೆ ಸಂದರ್ಭದಲ್ಲಿ ಭಾಷಣಕಾರ ಶ್ರೀಕಾಂತ್ ಶೆಟ್ಟಿ ಪ್ರಚೋದನಕಾರಿ ಭಾಷಣ ಮಾಡಿದ್ದು, ಸುಹಾಸ್ ಶೆಟ್ಟಿ ಕೊಲೆಗೆ ಪ್ರತೀಕಾರ ತೀರಿಸಿಕೊಳ್ಳುವಂತೆ ಹೇಳಿ ಜನರನ್ನು ಪ್ರಚೋದಿಸಿದ್ದು, ಇದರಿಂದ ಕೋಮು ಸೌಹಾರ್ದ ಕದಡುವ ಯತ್ನ ಮಾಡಿದ್ದಾರೆ. ಈ ಘಟನೆ ಹಿನ್ನೆಲೆಯಲ್ಲಿ ಬಜ್ಪೆ ಠಾಣೆಯಲ್ಲಿ ಪೊಲೀಸರು ಆಯೋಜಕರು ಮತ್ತು ಭಾಷಣಕಾರನ ವಿರುದ್ಧ ಸುಮೋಟೊ ಪ್ರಕರಣ ದಾಖಲಿಸಿದ್ದಾರೆ. ಬಿಎನ್ಎಸ್ ಸೆಕ್ಷನ್ ಗಳಾದ 189(2), 191(2), 285, 192, 351(2), 351(3), 190 ಮತ್ತು ಕರ್ನಾಟಕ ಪೊಲೀಸ್ ಕಾಯ್ದೆ 107 ಮತ್ತು 109 ಪ್ರಕಾರ ಪ್ರಕರಣ ದಾಖಲಾಗಿದೆ.
Mangalore Bajpe Chalo Held Without Police Permission; FIR Filed Against Organizers and Speaker at Bajpe Station.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm