ಬ್ರೇಕಿಂಗ್ ನ್ಯೂಸ್
27-05-25 10:29 pm Mangalore Correspondent ಕರಾವಳಿ
ಮಂಗಳೂರು, ಮೇ 27 : ಬಂಟ್ವಾಳದಲ್ಲಿ ಯುವಕನ ಕೊಲೆ ಹಿನ್ನೆಲೆ ಮುಸ್ಲಿಂ ಸಂಘಟನೆಗಳು ಹಾಗೂ ಕಾರ್ಯಕರ್ತರ ಆಕ್ರೋಶ ಭುಗಿಲೆದ್ದಿದ್ದು, ಪ್ರಚೋದನಕಾರಿ ಭಾಷಣ ಮಾಡಿದವರನ್ನು ಬಂಧಿಸಿಲ್ಲ ಯಾಕೆಂದು ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದರ ಬೆನ್ನಲ್ಲೇ ವಿಶ್ವ ಹಿಂದು ಪರಿಷತ್ ಮುಖಂಡ ಶರಣ್ ಪಂಪ್ವೆಲ್ ಅವರನ್ನು ಹಳೆ ಕೇಸಿನ ನೆಪದಲ್ಲಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಸುಹಾಸ್ ಶೆಟ್ಟಿ ಕೊಲೆಯ ಹಿನ್ನೆಲೆಯಲ್ಲಿ ಮೇ 1ರಂದು ಎಜೆ ಆಸ್ಪತ್ರೆಯ ಬಳಿ ಜಮಾಯಿಸಿದ್ದ ಕಾರ್ಯಕರ್ತರ ಬೇಡಿಕೆಯಂತೆ, ಶರಣ್ ಪಂಪ್ವೆಲ್ ಮರುದಿನ ಮೇ 2ರಂದು ದಕ್ಷಿಣ ಕನ್ನಡ ಜಿಲ್ಲೆ ಬಂದ್ ಮಾಡುವಂತೆ ಕರೆ ಕೊಟ್ಟಿದ್ದರು. ಅದರಂತೆ, ಮರುದಿನ ಈ ಹೇಳಿಕೆಯಿಂದ ಪ್ರೇರಣೆ ಪಡೆದ ಕಾರ್ಯಕರ್ತರು ಬಸ್ಸಿಗೆ ಕಲ್ಲು ತೂರಿದ್ದಲ್ಲದೆ, ಕೆಲವು ಕಡೆ ಮುಸ್ಲಿಂ ಯುವಕರಿಗೆ ಚೂರಿ ಇರಿತ ಮಾಡಿದ್ದರು. ಅಹಿತಕರ ಘಟನೆಗಳಿಗೆ ಶರಣ್ ಪಂಪ್ವೆಲ್ ಬಂದ್ ಕರೆ ಮತ್ತು ಸುಹಾಸ್ ಶೆಟ್ಟಿಯನ್ನು ಪಿಎಫ್ಐನ ಜಿಹಾದಿ ಇಸ್ಲಾಮಿ ಭಯೋತ್ಪಾದಕರು ಮಾಡಿದ್ದಾರೆಂದು ಉದ್ರೇಕಿಸಿದ್ದು ಕಾರಣವೆಂದು ಕದ್ರಿ ಠಾಣೆಯಲ್ಲಿ ಕೇಸು ದಾಖಲಿಸಲಾಗಿತ್ತು.






ಕದ್ರಿ ಠಾಣೆಯಲ್ಲಿ ಬಿಎನ್ ಎಸ್ ಸೆಕ್ಷನ್ 49, 196(1), 324(2), 324(4), 324(5), 353(2) ಪ್ರಕಾರ ಕೇಸು ದಾಖಲಾಗಿತ್ತು. ಪ್ರಕರಣ ಸಂಬಂಧಿಸಿ ದಾಖಲೆಗಳನ್ನು ಸಂಗ್ರಹಿಸಿ, ವಿಚಾರಣೆಗೆ ಹಾಜರಾಗಲು ಎರಡು ಬಾರಿ ನೋಟೀಸ್ ನೀಡಲಾಗಿತ್ತು. ವಿಚಾರಣೆಗೆ ಬಾರದೆ ತನಿಖೆಗೂ ಸಹಕಾರ ನೀಡದೇ ಇದ್ದ ಶರಣ್ ಪಂಪ್ವೆಲ್ ಅವರನ್ನು ಮೇ 27ರಂದು ಬಂಧನ ಮಾಡಲಾಗಿದೆ. ನ್ಯಾಯಾಲಯಕ್ಕೆ ಹಾಜರು ಪಡಿಸುತ್ತೇವೆ ಎಂದು ಪೊಲೀಸ್ ಕಮಿಷನರ್ ತಿಳಿಸಿದ್ದಾರೆ.
ಇತ್ತ ಮುಸ್ಲಿಂ ಯುವಕನ ಕೊಲೆ ಹಿನ್ನೆಲೆಯಲ್ಲಿ ಮುಸ್ಲಿಂ ನಾಯಕರಿಂದ ಭಾರೀ ಆಕ್ರೋಶ ವ್ಯಕ್ತವಾಗಿದ್ದು, ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಪೊಲೀಸರ ವಿರುದ್ಧ ತಿರುಗಿದೆ. ಇದೇ ವೇಳೆ, ಅಬ್ದುಲ್ ರಹೀಂ ಕೊಲೆ ಘಟನೆಯನ್ನು ಖಂಡಿಸಿರುವ ಸಚಿವ ದಿನೇಶ್ ಗುಂಡೂರಾವ್, ಕಠಿಣ ಕ್ರಮಕ್ಕೆ ಪೊಲೀಸರಿಗೆ ಸೂಚಿಸಿದ್ದಾರೆ.
VHP Leader Sharan Pumpwell Arrested by Kadri Police for Calling Mangalore Bandh Over Suhas Shetty Murder.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm