ಬ್ರೇಕಿಂಗ್ ನ್ಯೂಸ್
28-05-25 03:49 pm Mangalore Correspondent ಕರಾವಳಿ
ಮಂಗಳೂರು, ಮೇ 28 : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಕೊಳತ್ತಮಜಲು ಗ್ರಾಮದಲ್ಲಿ ಅಬ್ದುಲ್ ರಹಿಮಾನ್ ಅವರ ಹತ್ಯೆ ಮಾಡಿದವರನ್ನು ಪತ್ತೆ ಹಚ್ಚಿ ಪೊಲೀಸರು ಕಾನೂನು ಕ್ರಮ ಕೈಗೊಳ್ಳಲಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಶಿವಮೊಗ್ಗದಲ್ಲಿ ಪ್ರಕರಣ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಚಿವರು, ಯಾವುದೇ ಅಹಿತಕರ ಘಟನೆ ನಡೆಯದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಲ್ಲ ರೀತಿಯ ಕಟ್ಟೆಚ್ಚರ ವಹಿಸುವಂತೆ ಸೂಚನೆ ನೀಡಲಾಗಿದೆ. ಅಬ್ದುಲ್ ಅವರ ಅಂತ್ಯಕ್ರಿಯೆ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ ಎಂದರು.
ಬಿಜೆಪಿ ಶವಗಳ ಮೇಲೆ ರಾಜಕಾರಣ ನಡೆಸುತ್ತಿದೆ ಎಂದು ಆರೋಪಿಸಿದ ಸಚಿವರು, ಪ್ರಚೋದನಕಾರಿ ಭಾಷಣಗಳನ್ನ ಮಾಡಿ ಸಮಾಜದಲ್ಲಿ ಕೋಮು ದ್ವೇಷವನ್ನ ಮೂಡಿಸಲಾಗುತ್ತಿದೆ. ಹತ್ಯೆ ಮಾಡುವ ಕೊಲೆಗಡುಕರ ವಿಚಾರದಲ್ಲಿ ಧರ್ಮ, ಜಾತಿ ನೋಡುವ ಪ್ರಶ್ನೆಯೇ ಇಲ್ಲ. ಮಂಗಳೂರಿನಲ್ಲಿ ನಡೆದ ಹತ್ಯೆಗಳ ವಿಚಾರದಲ್ಲಿ ನಮ್ಮ ಸರ್ಕಾರ ನಿಷ್ಪಕ್ಷಪಾತ ತನಿಖೆ ನಡೆಸಿ ಕಾನೂನು ರೀತಿ ಕ್ರಮ ಕೈಗೊಂಡಿದೆ. ಯಾವುದೇ ಭೇದ ಭಾವ ಮಾಡಿಲ್ಲ. ತಪ್ಪಿತಸ್ಥರು ಯಾರೇ ಆಗಿರಲಿ, ಎಷ್ಟೇ ಪ್ರಭಾವಿಗಳಿದ್ದರೂ, ಅವರ ಹೆಡಿಮುರಿ ಕಟ್ಟಿ, ಅಗತ್ಯ ಕಾನೂನು ಕ್ರಮ ತೆಗೆದುಕೊಳ್ಳುವಂತೆ ಪೊಲೀಸರಿಗೆ ಸೂಚನೆ ನೀಡಲಾಗಿದೆ.
ಅಮಾಯಕ ಅಶ್ರಫ್ ಹತ್ಯೆ ಮಾಡಿದವರನ್ನು ಹಿಡಿದು ಬಂಧಿಸಲಾಗಿದೆ. ರೌಡಿಶಿಟರ್ ಸುಹಾಸ್ ಶೆಟ್ಟಿ ಹತ್ಯೆ ಮಾಡಿದವರನ್ನೂ ಪೊಲೀಸರು ಪತ್ತೆ ಹಚ್ಚಿ ಬಂಧಿಸಿದ್ದಾರೆ. ಇದೀಗ ಅಬ್ದುಲ್ ಅವರ ಪ್ರಕರಣದಲ್ಲೂ ಆರೋಪಿಗಳನ್ನ ಹಿಡಿದು ತರುವಲ್ಲಿ ಪೊಲೀಸರು ಸಕ್ಷಮರಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ವಿಶ್ವಾಸ ವ್ಯಕ್ತಪಡಿಸಿದರು.
ಕರಾವಳಿ ಭಾಗದಲ್ಲಿ ಈ ರೀತಿಯ ಪ್ರತೀಕಾರದ ಹತ್ಯೆಗಳನ್ನ ತಡೆಗಟ್ಟಲು ಕೋಮು ನಿಗ್ರಹ ದಳ ರಚಿಸಲಾಗುತ್ತಿದೆ. ಶೀಘ್ರದಲ್ಲಿಯೇ ಆ್ಯಂಟಿ ಕಮ್ಯುನಲ್ ಫೋರ್ಸ್ ತನ್ನ ಕಾರ್ಯ ಪ್ರಾರಂಭಿಸಲಿದೆ. ಕೋಮುವಾದದಿಂದ ಸಮಾಜಗಳಲ್ಲಿ ಮೂಡುತ್ತಿರುವ ಒಡಕನ್ನು ಹೋಗಲಾಡಿಸಿ ಸೌಹಾರ್ದಯುತ, ಸಹಬಾಳ್ವೆಯ ಶಾಂತಿಯುತ ಸಮಾಜ ನಿರ್ಮಾಣಕ್ಕೆ ಎಲ್ಲರೂ ಮುಂದಾಗಬೇಕು ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
Mangalore Strict Action Against Murderers of Rahiman in bantwal, No Room for Discrimination Based on Caste or Religion says minister Dinesh Gundurao
10-07-26 10:12 pm
HK News Staffer
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
10-07-26 10:46 pm
HK News Desk
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 10:14 pm
HK News Staffer
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm