ಬ್ರೇಕಿಂಗ್ ನ್ಯೂಸ್
29-05-25 08:52 pm Mangalore Correspondent ಕರಾವಳಿ
ಮಂಗಳೂರು, ಮೇ 29 : ನಿರೀಕ್ಷೆಯಂತೆ ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಅವರನ್ನು ಎತ್ತಂಗಡಿ ಮಾಡಲಾಗಿದೆ. ಮಂಗಳೂರು ಪೊಲೀಸ್ ಕಮಿಷನರ್ ಜಾಗಕ್ಕೆ ಈ ಹಿಂದೆ ಮಂಗಳೂರಿನಲ್ಲಿ ಎಸ್ಪಿ ಆಗಿ ಕರ್ತವ್ಯ ನಿರ್ವಹಿಸಿದ್ದ ಸುಧೀರ್ ಕುಮಾರ್ ರೆಡ್ಡಿ ಅವರನ್ನು ನೇಮಕ ಮಾಡಲಾಗಿದೆ.
ಅನುಪಮ್ ಅಗರ್ವಾಲ್ ಅವರನ್ನು ಬೆಂಗಳೂರಿನ ಆರ್ಥಿಕ ಅಪರಾಧಗಳ ವಿಭಾಗಕ್ಕೆ ಡಿಐಜಿ ಆಗಿ ವರ್ಗಾವಣೆ ಮಾಡಲಾಗಿದೆ. ಅಲ್ಲದೆ, ದಕ್ಷಿಣ ಕನ್ನಡ ಎಸ್ಪಿ ಯತೀಶ್ ಅವರನ್ನೂ ವರ್ಗಾವಣೆ ಮಾಡಲಾಗಿದ್ದು, ಅವರಿಗೆ ಜಾಗ ತೋರಿಸಿಲ್ಲ. ದಕ್ಷಿಣ ಕನ್ನಡ ಎಸ್ಪಿ ಜಾಗಕ್ಕೆ ಉಡುಪಿಯಲ್ಲಿ ಎಸ್ಪಿಯಾಗಿ ದಕ್ಷ ಅಧಿಕಾರಿಯೆಂದು ಹೆಸರು ಮಾಡಿರುವ ಡಾ.ಅರುಣ್ ಕೆ. ಅವರನ್ನು ನೇಮಕ ಮಾಡಲಾಗಿದೆ. ಉಡುಪಿ ಎಸ್ಪಿ ಹುದ್ದೆಗೆ ಮಂಗಳೂರಿನಲ್ಲಿ ಈ ಹಿಂದೆ ಡಿಸಿಪಿಯಾಗಿ ದಕ್ಷತೆಯಿಂದ ಕೆಲಸ ಮಾಡಿದ್ದ ಹರಿರಾಮ್ ಶಂಕರ್ ಅವರನ್ನು ನೇಮಿಸಲಾಗಿದೆ. ಹರಿರಾಮ್ ಶಂಕರ್ ಬೆಂಗಳೂರಿನಲ್ಲಿ ಇಂಟೆಲಿಜೆನ್ಸ್ ವಿಭಾಗದಲ್ಲಿ ಎಸ್ಪಿ ಆಗಿದ್ದರು.


ಸುಧೀರ್ ಕುಮಾರ್ ರೆಡ್ಡಿ ಬೆಂಗಳೂರಿನ ಇಂಟೆಲಿಜೆನ್ಸ್ ವಿಭಾಗದಲ್ಲಿ ಡಿಐಜಿ ಆಗಿದ್ದರು. ಇದಕ್ಕೂ ಹಿಂದೆ ಕರ್ನಾಟಕ ಕೇಡರ್ ಬೇಡವೆಂದು ಆಂಧ್ರಪ್ರದೇಶಕ್ಕೆ ಡೆಪ್ಯುಟೇಶನ್ ಮೇಲೆ ಹೋಗಿದ್ದ ಕೆಲವು ವರ್ಷಗಳ ಕಾಲ ಕೆಲಸ ಮಾಡಿ ಇತ್ತೀಚೆಗಷ್ಟೇ ಮರಳಿದ್ದರು. ಈ ಹಿಂದೆ 2018ರಲ್ಲಿ ದಕ್ಷಿಣ ಕನ್ನಡ ಎಸ್ಪಿಯಾಗಿ ಕೆಲವೇ ತಿಂಗಳ ಕಾಲ ಕರ್ತವ್ಯ ನಿರ್ವಹಿಸಿದ್ದ ಸುಧೀರ್ ಕುಮಾರ್ ರೆಡ್ಡಿ ಬಿಸಿ ರೋಡಿನಲ್ಲಿ ಆರೆಸ್ಸೆಸ್ ಕಾರ್ಯಕರ್ತ ಶರತ್ ಮಡಿವಾಳ ಪ್ರಕರಣದಲ್ಲಿ ಮಿಂಚಿನ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಹೆಡೆಮುರಿ ಕಟ್ಟಿದ್ದರು.
ಅನುಪಮ್ ಅಗರ್ವಾಲ್ ಕಾರ್ಯಶೈಲಿ ಬಗ್ಗೆ ಬಹಳಷ್ಟು ಆರೋಪಗಳಿದ್ದವು. ಜನಪರವಾಗಿಲ್ಲ, ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆಂಬ ವಿಚಾರದಲ್ಲಿ ಬಹಿರಂಗವಾಗಿಯೇ ಕಮ್ಯುನಿಸ್ಟ್ ನಾಯಕರು ಆರೋಪ ಮಾಡಿದ್ದರು. ಈ ಬಗ್ಗೆ ಪ್ರತಿಭಟನೆ ಎಲ್ಲ ನಡೆದರೂ, ಸ್ಪೀಕರ್ ಯುಟಿ ಖಾದರ್ ಮತ್ತು ಇವರ ತಂಡವು ಕಮಿಷನರ್ ಪರವಾಗಿ ನಿಂತಿದ್ದರಿಂದ ವರ್ಗಾವಣೆ ಆಗಿರಲಿಲ್ಲ. ಇತ್ತೀಚೆಗೆ ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಸಂದರ್ಭದಲ್ಲಿ ಬಿಜೆಪಿ ನಾಯಕರೂ ಆರೋಪ ಮಾಡಿದ್ದರು. ಕುಡುಪು ಗುಂಪು ಹತ್ಯೆ ಮತ್ತು ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎರಡರಲ್ಲೂ ಎಡವಟ್ಟು ಮಾಡಿಕೊಂಡಿದ್ದರು. ಮಾಧ್ಯಮಕ್ಕೆ ಮಾಹಿತಿ ನೀಡುವುದರಲ್ಲೂ ಸ್ಪಷ್ಟತೆ ಇರಲಿಲ್ಲ. ಇದೀಗ ಮತ್ತೊಂದು ಕೊಲೆ ನಡೆಯುವುದರೊಂದಿಗೆ ಸ್ಪೀಕರ್ ಖಾದರ್ ಅನುಪಸ್ಥಿತಿಯಲ್ಲೇ ಅನುಪಮ್ ಅಗರ್ವಾಲ್ ಅವರನ್ನು ನೇರವಾಗಿ ಎತ್ತಂಗಡಿ ಮಾಡಲಾಗಿದೆ. ಮಂಗಳೂರಿನಂಥ ಜಾಗಕ್ಕೆ ಅಧಿಕಾರಿಗಳನ್ನು ನೇಮಕ ಮಾಡುವಾಗಲೂ ಜಾಗ್ರತೆ ಇರಬೇಕಿತ್ತು ಎನ್ನುವುದು ಕೊನೆಗೂ ಸರಕಾರಕ್ಕೆ ಅರಿವಾದಂತಿದೆ.
In a major reshuffle, Mangalore Police Commissioner Anupam Agrawal has been transferred amid recent law and order concerns. CH Sudheer Kumar Reddy has been appointed as the new Commissioner of Mangalore. Udupi SP Arun Kumar has been posted as the new SP of Mangalore, while Hariram Shankar takes over as the new SP of Udupi.
29-10-25 09:12 pm
Bangalore Correspondent
ಬ್ರಿಟಿಷರ ಕಾಲದ ಸ್ಲೋಚ್ ಮಾದರಿ ಕ್ಯಾಪ್ ಬದಲು ; ಅರಸು...
28-10-25 10:03 pm
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
28-10-25 10:23 pm
HK News Desk
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
30-10-25 11:28 am
Udupi Correspondent
ಮಂಗಳೂರಿನಲ್ಲಿ ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡ...
29-10-25 10:47 pm
ಕೊಳಲನ್ನೂದುತ್ತ ಈಜಿನಲ್ಲಿ ವಿಶ್ವದಾಖಲೆ ; ಅಲೋಶಿಯಸ್...
29-10-25 06:55 pm
ಸುಳ್ಳು ಕೇಸು ಹಾಕುತ್ತಿದ್ದಾರೆಂದು ಮನವಿ ಕೊಡಲು ಬಂದವ...
29-10-25 03:57 pm
ಭ್ರಷ್ಟಾಚಾರ ಆರೋಪಕ್ಕೆ ಉತ್ತರಿಸಲು ಸ್ಪೀಕರ್ ಖಾದರ್ ನ...
29-10-25 03:16 pm
29-10-25 10:43 pm
Mangalore Correspondent
ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm
ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm
ಕೇರಳ ಮೂಲದ ಗಲ್ಫ್ ಉದ್ಯಮಿಗೆ ಹನಿಟ್ರ್ಯಾಪ್ ; ಬಂಧನಕ್...
28-10-25 10:48 pm