ಬ್ರೇಕಿಂಗ್ ನ್ಯೂಸ್
29-05-25 10:51 pm Mangalore Correspondent ಕರಾವಳಿ
ಮಂಗಳೂರು, ಮೇ 29 : ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರ ನಿರಂತರ ಪ್ರಯತ್ನದ ಫಲವಾಗಿ, ಮಂಗಳೂರಿನ ಶಿವಭಾಗ್ನಲ್ಲಿರುವ ಇಎಸ್ಐ ಆಸ್ಪತ್ರೆಗೆ ದೆಹಲಿಯಿಂದ ಇಎಸ್ಐಸಿ ಪ್ರಧಾನ ಕಚೇರಿಯ ಉನ್ನತ ಅಧಿಕಾರಿಗಳ ತಂಡವು ಭೇಟಿ ನೀಡಿ ಲಭ್ಯವಿರುವ ಸೌಲಭ್ಯ ಹಾಗೂ ಸಮಸ್ಯೆಗಳ ಬಗ್ಗೆ ಪರಿಶೀಲನೆ ನಡೆಸಿದೆ.
ಮಂಗಳೂರಿನ ಕಾರ್ಮಿಕ ರಾಜ್ಯ ವಿಮಾ ಆಸ್ಪತ್ರೆ(ಇಎಸ್ಐ)ಯಲ್ಲಿ ವೈದ್ಯರು ಹಾಗೂ ಸಿಬ್ಬಂದಿ ಕೊರತೆಯಿದ್ದು, ಆಸ್ಪತ್ರೆ ಸುಧಾರಣೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕೆಂದು ಸಂಸದ ಚೌಟ ಪ್ರಯತ್ನ ನಡೆಸಿದ್ದರು. ನವದೆಹಲಿಯಲ್ಲಿ ಇಎಸ್ಐಸಿ ಪ್ರಧಾನ ಕಚೇರಿಯ ಮಹಾ ನಿರ್ದೇಶಕ ಅಶೋಕ್ ಕುಮಾರ್ ಸಿಂಗ್ ಅವರನ್ನು ಭೇಟಿ ಮಾಡಿ ಮಂಗಳೂರಿನ ಇಎಸ್ಐ ಆಸ್ಪತ್ರೆ ಉನ್ನತಿಕರಣಕ್ಕೆ ಮನವಿ ಸಲ್ಲಿಸಿದ್ದರು. ರಾಜ್ಯ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರಿಗೂ ವೈದ್ಯಕೀಯ ಉಪಕರಣಗಳ ಖರೀದಿಗೆ ಹಾಗೂ ನುರಿತ ತಜ್ಞ ವೈದ್ಯರು ಮತ್ತು ಸಿಬ್ಬಂದಿ ನೇಮಕ ನಿಟ್ಟಿನಲ್ಲಿ ರಾಜ್ಯ ಇಎಸ್ಐ ಸೊಸೈಟಿ ರಚಿಸುವಂತೆ ಒತ್ತಾಯಿಸಿದ್ದರು.
ಇದರಂತೆ, ಗುರುವಾರ ಇಎಸ್ಐಸಿ ಪ್ರಧಾನ ಕಚೇರಿಯ ಉಪ ವೈದ್ಯಕೀಯ ಆಯುಕ್ತೆ ಮೋನಾ ವರ್ಮ, ಇಎಸ್ಐಸಿ ದಕ್ಷಿಣ ವಲಯದ (ಐಸಿಟಿ ಅಡಿ) ವಿಮಾ ಆಯುಕ್ತ ಟಿ. ರೇಣುಕಾಪ್ರಸಾದ್ ಅವರನ್ನೊಳಗೊಂಡ ತಂಡವು ಇಎಸ್ಐ ಆಸ್ಪತ್ರೆಗೆ ಭೇಟಿ ಕೊಟ್ಟು ಇಲ್ಲಿನ ಸಮಸ್ಯೆ - ಸವಾಲುಗಳ ಬಗ್ಗೆ ಪರಿಶೀಲಿಸಿ, ಆಸ್ಪತ್ರೆ ಸುಧಾರಣೆಗೆ ಏನೆಲ್ಲ ಕ್ರಮ ಕೈಗೊಳ್ಳಬಹುದು ಎಂಬ ಬಗ್ಗೆ ಆಸ್ಪತ್ರೆ ವೈದ್ಯಕೀಯ ಅಧೀಕ್ಷಕರು ಹಾಗೂ ಸಿಬ್ಬಂದಿಗಳ ಜತೆ ಸುದೀರ್ಘ ಸಮಲೋಚನೆ ನಡೆಸಿದ್ದಾರೆ. ಇಎಸ್ಐ ಆಸ್ಪತ್ರೆಯ ಪ್ರಯೋಗಾಲಯ, ವಾರ್ಡ್, ಶಸ್ತ್ರಚಿಕಿತ್ಸೆ ಕೊಠಡಿ, ಸಿಬ್ಬಂದಿಗಳ ಕ್ವಾಟರ್ಸ್ ಸೇರಿ ಆಸ್ಪತ್ರೆಯ ಸಂಪೂರ್ಣ ಪರಿಶೀಲನೆ ನಡೆಸಿದ್ದಾರೆ.
ರಾಜ್ಯ ಸರ್ಕಾರವು ಆಸ್ಪತ್ರೆಯ ನಿರ್ವಹಣೆಯನ್ನು ಇಎಸ್ಐಸಿ ಪ್ರಧಾನ ಕಚೇರಿಗೆ ಬಿಟ್ಟು ಕೊಟ್ಟರೆ ಇರುವ ಚೌಕಟ್ಟಿನೊಳಗೆ ಅದನ್ನು ಮತ್ತಷ್ಟು ಸುಧಾರಣೆಗಳೊಂದಿಗೆ ನಿಭಾಯಿಸಲು ಸಿದ್ಧ ಎನ್ನುವ ಒಲವು ಇದೇ ವೇಳೆ ತಂಡ ವ್ಯಕ್ತಪಡಿಸಿದೆ. ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಮನವಿಯಂತೆ ಇಎಸ್ಐ ಆಸ್ಪತ್ರೆಯ ಮೇಲ್ದರ್ಜೆ ಹಾಗೂ ಮೂಲಸೌಕರ್ಯ ಸುಧಾರಣೆಗೆ ಸಹಕಾರ ನೀಡುವುದಾಗಿ ದೆಹಲಿ ಅಧಿಕಾರಿಗಳು ಭರವಸೆ ನೀಡಿದ್ದಾರೆ.
ತಕ್ಷಣವೇ ಇಎಸ್ಐ ಸೊಸೈಟಿ ರಚಿಸಿ, ಇಎಸ್ಐಸಿಗೆ ಹಸ್ತಾಂತರಿಸಿ
ಈ ಬಗ್ಗೆ ಪ್ರತಿಕ್ರಿಯಿಸಿರುವ ಸಂಸದ ಕ್ಯಾ. ಚೌಟ, ತಮ್ಮ ಮನವಿಗೆ ಸ್ಪಂದಿಸಿ ದೆಹಲಿಯ ಇಎಸ್ಐಸಿ ಅಧಿಕಾರಿಗಳ ತಂಡವು ಮಂಗಳೂರಿನ ಇಎಸ್ಐ ಆಸ್ಪತ್ರೆಗೆ ಭೇಟಿ ನೀಡಿರುವುದು ಬಹಳ ಖುಷಿ ತಂದಿದೆ. ಇಎಸ್ಐ ಆಸ್ಪತ್ರೆ ಚಟುವಟಿಕೆ ಸುಗಮಗೊಳಿಸಲು ರಾಜ್ಯ ಸರ್ಕಾರವು ಕೂಡಲೇ "ರಾಜ್ಯ ಇಎಸ್ಐ ಸೊಸೈಟಿ"ಯನ್ನು ರಚನೆ ಮಾಡಬೇಕು. ಈ ಬಗ್ಗೆ ಕಾರ್ಮಿಕ ಸಚಿವರಿಗೆ ಮೂರು ತಿಂಗಳ ಹಿಂದೆಯೇ ಪತ್ರ ಬರೆದಿದ್ದರೂ ಕ್ರಮ ಕೈಗೊಂಡಿಲ್ಲ. ಇಲ್ಲವಾದರೆ ವಿಳಂಬ ಮಾಡದೆ ಮಂಗಳೂರು ಇಎಸ್ಐ ಆಸ್ಪತ್ರೆಯ ನಿರ್ವಹಣೆಯನ್ನು ಇಎಸ್ಐಸಿ ಪ್ರಧಾನ ಕಚೇರಿಗೆ ಹಸ್ತಾಂತರಿಸಲು ಸಿದ್ದರಾಮಯ್ಯ ಸರ್ಕಾರ ತಕ್ಷಣವೇ ಕ್ರಮ ಜರುಗಿಸಿಬೇಕೆಂದು ಕ್ಯಾ. ಚೌಟ ಅವರು ಆಗ್ರಹಿಸಿದ್ದಾರೆ.
ESIC Officials from Delhi Visit Mangalore ESI Hospital, Assure Facility Upgrades, Urge State Government to Handover to ESIC.
03-08-25 09:30 pm
HK News Desk
Ravi Poojary Aide Kaviraj Arrested, Kolar Pol...
03-08-25 10:52 am
Dharmasthala News, High Court; ಧರ್ಮಸ್ಥಳ ಸುದ್ದ...
01-08-25 11:34 pm
‘Comedy Kiladigalu’, Chandrashekhar Siddi Sui...
01-08-25 10:45 pm
Kannada Producer Ganesh, Film Dharmasthala Fi...
01-08-25 09:09 pm
03-08-25 05:44 pm
HK News Desk
ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ನರೇಂದ್ರ ಮೋದಿ, ಭಾಗ...
03-08-25 04:25 pm
ಮಾಲೆಗಾಂವ್ ಪ್ರಕರಣದಲ್ಲಿ ಮೋಹನ್ ಭಾಗವತ್ ಬಂಧಿಸುವುದಕ...
01-08-25 10:48 pm
ಭಾರತ, ರಷ್ಯಾದ್ದು ಸತ್ತ ಆರ್ಥಿಕತೆ, ಒಟ್ಟಿಗೇ ನಾಶವಾಗ...
01-08-25 11:44 am
2008ರ ಮಾಲೆಗಾಂವ್ ಸ್ಫೋಟ ಪ್ರಕರಣ ; ಸಾಧ್ವಿ ಪ್ರಜ್ಞ...
31-07-25 10:08 pm
02-08-25 10:51 pm
Mangalore Correspondent
Kallapu Highway News; ಕಲ್ಲಾಪು ಹೆದ್ದಾರಿಯಲ್ಲಿ ಬ...
02-08-25 03:51 pm
Inspector Manjunath Gowda, SIT, Dharmasthala:...
02-08-25 02:31 pm
Dharmasthala Case, UDR, SIT Police News; ಧರ್ಮ...
02-08-25 01:46 pm
Kerala Comes to Mangalore: Feast at Coral, Th...
02-08-25 01:40 pm
03-08-25 10:11 pm
Mangalore Correspondent
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm