ಬ್ರೇಕಿಂಗ್ ನ್ಯೂಸ್
30-05-25 10:20 pm Mangalore Correspondent ಕರಾವಳಿ
ಉಳ್ಳಾಲ, ಮೇ 30 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅನಾಹುತ ಆದ ಬೆನ್ನಲ್ಲೇ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮಂಗಳೂರಿಗೆ ದೌಡಾಯಿಸಿ ಬಂದಿದ್ದು ವಿಪತ್ತು ಸಂಭವಿಸಿದ ಮಂಜನಾಡಿ ಮತ್ತು ಕೊಣಾಜೆ ಬಳಿಯ ಬೆಳ್ಮ ಪ್ರದೇಶಗಳಿಗೆ ಭೇಟಿ ನೀಡಿದ್ದಾರೆ. ಮನೆ ಕುಸಿದು ಮೃತಪಟ್ಟ ಅಜ್ಜಿ ಮತ್ತು ಮೊಮ್ಮಕ್ಕಳು ಹಾಗೂ ದೇರಳಕಟ್ಟೆಯ ಕಾನಕೆರೆಯಲ್ಲಿ ಮನೆಯ ಆವರಣ ಗೋಡೆ ಕುಸಿದು ಮೃತಪಟ್ಟ ಬಾಲಕಿಯ ಕುಟುಂಬಸ್ಥರಿಗೆ ಸಚಿವ ದಿನೇಶ್ ಗುಂಡೂರಾವ್ ಅವರು ತಲಾ ಐದು ಲಕ್ಷ ರೂ. ಪರಿಹಾರ ಧನದ ಚೆಕ್ ವಿತರಿಸಿದರು.
ಶುಕ್ರವಾರ ಸಂಜೆ ಮನೆ ಕುಸಿದು ಅಜ್ಜಿ ಮತ್ತು ಇಬ್ಬರು ಮೊಮ್ಮಕ್ಕಳು ದುರ್ಮರಣ ಹೊಂದಿದ ಮಂಜನಾಡಿ ಗ್ರಾಮದ ಮೊಂಟೆಪದವಿನ ಕೋಡಿ ಕೊಪ್ಪಲದ ಮನೆ ಮತ್ತು ಬೆಳ್ಮದಲ್ಲಿ ಮನೆ ಆವರಣ ಗೋಡೆ ಕುಸಿದು ಮೃತಪಟ್ಟ ಬಾಲಕಿಯ ಮನೆಗೆ ಭೇಟಿ ನೀಡಿ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದರು. ಜಿಲ್ಲೆಯಲ್ಲಿ ಮಳೆಯಿಂದಾಗಿ ನೂರಾರು ಮನೆಗಳು ಜಲಾವೃತಗೊಂಡಿದೆ. ಉಳ್ಳಾಲ ಭಾಗದಲ್ಲಿ ಎರಡು ಕುಟುಂಬಗಳಲ್ಲಿ ನಾಲ್ಕು ಸಾವುಗಳು ಸಂಭವಿಸಿದೆ. ಮನೆ ಕಳೆದುಕೊಂಡವರಿಗೆ ಪುನರ್ವಸತಿ ನೀಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುತ್ತದೆ. ಮೇ ತಿಂಗಳಲ್ಲಿ ಇಂತಹ ಮಳೆ ಅನಿರೀಕ್ಷಿತ. ಮುಂಜಾಗ್ರತಾ ಕ್ರಮದ ಭಾಗವಾಗಿ ಅಧಿಕಾರಿಗಳ ಸಭೆ ಕರೆಯಲಾಗಿದ್ದು ಅಲ್ಲಿ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.










ಬಳಿಕ ಸಚಿವರು ದೇರಳಕಟ್ಟೆಯ ಕೆ.ಎಸ್.ಹೆಗ್ಡೆ ಆಸ್ಪತ್ರೆಗೆ ಭೇಟಿ ನೀಡಿ ಮೊಂಟೆಪದವು ಕೋಡಿ ಕೊಪ್ಪಲದಲ್ಲಿ ಮನೆ ಕುಸಿತ ಘಟನೆಯಲ್ಲಿ ಗಾಯಗೊಂಡವರ ಆರೋಗ್ಯ ವಿಚಾರಿಸಿದರು. ಬೆಳ್ಮದಲ್ಲಿ ಮೃತಪಟ್ಟ ಬಾಲಕಿ ಫಾತಿಮ ನಯೀಮ ಹೆತ್ತವರಾದ ನೌಶಾದ್‌ಗೆ ಐದು ಲಕ್ಷ ರೂ. ಪರಿಹಾರ ಧನದ ಚೆಕ್ಕನ್ನು ಸಚಿವ ಗುಂಡೂರಾವ್ ಹಸ್ತಾಂತರಿಸಿದರು. ಮಂಜನಾಡಿಯಲ್ಲಿ ಮೃತಪಟ್ಟ ಕುಟುಂಬ ಸದಸ್ಯರಿಗೂ ತಲಾ ಐದು ಲಕ್ಷ ರೂ. ಪರಿಹಾರಧನದ ಚೆಕ್ಕನ್ನ ಸಚಿವರು ವಿತರಣೆ ಮಾಡಿದರು.
ಎಂಎಲ್‌ಸಿ ಐವನ್ ಡಿಸೋಜ, ಮಂಜುನಾಥ ಭಂಡಾರಿ, ಪದ್ಮರಾಜ್ ಸೇರಿದಂತೆ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.
Rain Havoc in Mangalore, Minister Dinesh Gundu Rao Rushes to Ullal, Hands Over 5 Lakh Compensation Cheques to Families of Four Deceased.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm