ಬ್ರೇಕಿಂಗ್ ನ್ಯೂಸ್
31-05-25 11:14 pm Mangalore Correspondent ಕರಾವಳಿ
ಮಂಗಳೂರು, ಮೇ 31 : ಕೋಮು ವೈಷಮ್ಯದ ಕೊಲೆಗೆ ಪ್ರಚೋದನಕಾರಿ ಭಾಷಣವೇ ಕಾರಣ. ಅಂಥ ಭಾಷಣ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಮುಸ್ಲಿಂ ಮುಖಂಡರು ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಗೆ ಮನವಿ ಸಲ್ಲಿಸಿದ್ದಾರೆ. ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಲು ಆಗಮಿಸಿದ್ದ ಸಚಿವರನ್ನು ಭೇಟಿಯಾಗಿ ನಾಯಕರು ಮನವಿ ಸಲ್ಲಿಸಿದ್ದಾರೆ.
ಇದೇ ವೇಳೆ, ಕಾಂಗ್ರೆಸ್ ಮುಖಂಡ ಜಿಎ ಬಾವಾ ಮಾತನಾಡಿ, ನಮ್ಮ ಜಿಲ್ಲೆಯಲ್ಲಿ ಶಾಂತಿ ಬೇಕು. ನಮ್ಮ ಮಕ್ಕಳು ಇಂಥ ಸ್ಥಿತಿಯಲ್ಲಿ ಬದುಕುವಂತೆ ಆಗಬಾರದು. ಯಾವುದೇ ಧರ್ಮ, ಜಾತಿ ಇರಲಿ, ಹಿಂದು- ಮುಸ್ಲಿಂ ಯಾರಿದ್ದರೂ ದ್ವೇಷದ ಭಾಷಣ ಮಾಡಿದರೆ ಕಠಿಣ ಕ್ರಮ ಜರುಗಿಸಿ. ಈ ರೀತಿಯ ಕೊಲೆ ಮುಂದೆ ಯಾವತ್ತೂ ಆಗದಂತೆ ಕಠಿಣ ಕ್ರಮ ಆಗಬೇಕಾಗಿದೆ. ನಮಗೆ ಸಿಎಂ ಸಿದ್ದರಾಮಯ್ಯ ಮೇಲೆ ವಿಶ್ವಾಸ ಇದೆ, ಹಾಗಾಗಿ ಮನವಿ ಕೊಟ್ಟಿದ್ದೇವೆ. ಪೊಲೀಸ್ ಇಲಾಖೆಯಲ್ಲೂ ಅಮೂಲಾಗ್ರ ಬದಲಾವಣೆ ಆಗಬೇಕೆಂದು ಬೇಡಿಕೆ ಇಟ್ಟಿದ್ದೇವೆ ಎಂದರು.
ಹಿರಿಯ ಮುಖಂಡ ಇಬ್ರಾಹಿಂ ಕೋಡಿಜಾಲ್ ಮಾತನಾಡಿ, ಕೋಮು ದ್ವೇಷದ ಕೊಲೆಗಳು ಯಾವತ್ತೂ ಆಗಬಾರದು. ಮುಸ್ಲಿಮರು ಶಾಂತಿ ಪ್ರಿಯರು. ಯಾರನ್ನೂ ಹಿಂಸಿಸುವ ಪ್ರವೃತ್ತಿ ನಮ್ಮಲ್ಲಿ ಇಲ್ಲ. ಆದರೆ ಇಂಥ ಸ್ಥಿತಿ ಬರುವುದಕ್ಕೆ ಪೊಲೀಸರ ವೈಫಲ್ಯವೇ ಕಾರಣ. ಕೆಲವು ಪೊಲೀಸ್ ಠಾಣೆಗಳಲ್ಲಿ 10-15 ವರ್ಷಗಳಿಂದ ಠಿಕಾಣಿ ಹೂಡಿದವರು ಇದ್ದಾರೆ. ಅವರನ್ನು ಬೇರೆ ಬೇರೆ ಜಿಲ್ಲೆಗಳಿಗೆ ವರ್ಗಾವಣೆ ಮಾಡಬೇಕು. ಹೆಡ್ ಕಾನ್ಸ್ ಟೇಬಲ್ ಆಗಿದ್ದವರು ರಾಜಕೀಯ ಬಲದಿಂದ ಎಸಿಪಿ ಅಧಿಕಾರಿಗೆ ಬೆದರಿಕೆ ಹಾಕುವ ಸ್ಥಿತಿಯಿದೆ. ಇದಕ್ಕೆಲ್ಲ ಕೊನೆ ಹಾಕಬೇಕು, ಹೊಸ ಅಧಿಕಾರಿ ಬಂದಿದ್ದಾರೆ. ನಮಗೆಲ್ಲ ವಿಶ್ವಾಸ ಇದೆ ಎಂದು ಹೇಳಿದರು.
ಕಾನೂನು ಬಿಗಿ ಮಾಡುತ್ತೇವೆ ; ಸಚಿವ
ಪೊಲೀಸ್ ಅಧಿಕಾರಿಗಳ ಜೊತೆಗೆ ಸಭೆ ನಡೆಸಿದ ಬಳಿಕ ಮಾಧ್ಯಮಕ್ಕೆ ಹೇಳಿಕೆ ನೀಡಿದ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಶಾಸಕರು, ರಾಜಕೀಯ ಮುಖಂಡರು ಕೂಡ ಬಾಯಿಗೆ ಬಂದಂತೆ ಮಾತನಾಡಿ ಪ್ರಚೋದನೆ ಮಾಡುತ್ತಾರೆ. ಪೊಲೀಸರು ಎಫ್ಐಆರ್ ಮಾಡಿದ್ರೂ ಬೇಲ್ ಮೇಲೆ ಬರುತ್ತಾರೆ. ಇಂಥದ್ದಕ್ಕೆ ಕಡಿವಾಣ ಹಾಕಬೇಕಾಗಿದೆ. ಕಾನೂನು ಬಿಗಿಗೊಳಿಸಲು ತಜ್ಞರ ಜೊತೆ ಚರ್ಚಿಸಿ ಮುಖ್ಯಮಂತ್ರಿ ಅವರಿಗೂ ಮನವರಿಕೆ ಮಾಡುತ್ತೇನೆ. ಈಗ ಇರುವ ಕಾನೂನಿನಲ್ಲಿ ಸ್ಪಷ್ಟತೆ ಇಲ್ಲದ್ದರಿಂದ ಈ ರೀತಿಯಾಗಿದೆ. ಮೂರು ಜಿಲ್ಲೆಗೆ ಕಾರ್ಯಪಡೆ ರಚನೆ ಮಾಡಲಾಗಿದೆ. ಇಲಾಖೆಯಲ್ಲಿ ಒಳ್ಳೆಯ ಹೆಸರಿರುವ ಅಧಿಕಾರಿಗಳನ್ನು ನೇಮಕ ಮಾಡಿದ್ದು, ಫುಲ್ ಪವರ್ ನೀಡಿದ್ದೇವೆ ಎಂದು ಹೇಳಿದ್ದಾರೆ.
Dakshina Kannada district in-charge Dinesh Gundu Rao on Saturday addressed a press conference at the Mangaluru police commissioner’s office, emphasizing the need for strict law enforcement and lasting peace in the region, which has witnessed recent communal disturbances.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm