ಬ್ರೇಕಿಂಗ್ ನ್ಯೂಸ್
06-06-25 07:20 pm Mangalore Correspondent ಕರಾವಳಿ
ಮಂಗಳೂರು, ಜೂ.6 : ಮೇ 29ರಂದು ಮೀನುಗಾರಿಕೆಗೆ ತೆರಳಿ ನಾಪತ್ತೆಯಾಗಿರುವ ಬೆಂಗರೆಯ ಇಬ್ಬರು ಮೀನುಗಾರರ ಮನೆಗೆ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಮಂಕಾಳ ಎಸ್. ವೈದ್ಯ ಶುಕ್ರವಾರ ಭೇಟಿ ನೀಡಿದ್ದು ಸಂತ್ರಸ್ತ ಕುಟುಂಬಕ್ಕೆ ಸಾಂತ್ವನ ಹೇಳಿ, ಮಿನುಗಾರರ ಸಂಕಷ್ಟ ಪರಿಹಾರ ನಿಧಿಯಿಂದ ತಲಾ 10 ಲಕ್ಷ ರೂ. ಚೆಕ್ ವಿತರಿಸಿದರು.
ಸಮುದ್ರಕ್ಕೆ ಬಿದ್ದು ನಾಪತ್ತೆಯಾದ ಇಬ್ಬರು ಮೀನುಗಾರರಿಗಾಗಿ ಶೋಧ ಕಾರ್ಯ ಇನ್ನೂ ನಡೆಯುತ್ತಿದೆ. ರಾಜ್ಯ ಸರಕಾರ ಎಲ್ಲ ರೀತಿಯ ನೆರವು ನೀಡಲಿದೆ ಎಂದು ಸಚಿವರು ತಿಳಿಸಿದರು. ಸಂಕಷ್ಟ ಪರಿಹಾರ ನಿಧಿಯಿಂದ ಮೀನುಗಾರರ ಕುಟುಂಬಗಳಿಗೆ ಇದುವರೆಗೆ 8 ಲಕ್ಷ ರೂ. ಪರಿಹಾರ ನೀಡಲಾಗುತ್ತಿತ್ತು. ರಾಜ್ಯ ಸರಕಾರ ಇದನ್ನು 10 ಲಕ್ಷ ರೂ.ಗೆ ಏರಿಸಿದೆ ಎಂದು ಸಚಿವರು ತಿಳಿಸಿದರು.



ಶಾಸಕರಾದ ವೇದವ್ಯಾಸ ಕಾಮತ್ ಮತ್ತು ಐವನ್ ಡಿಸೋಜಾ, ಮೀನುಗಾರಿಕೆ ನಿರ್ದೇಶಕ ದಿನೇಶ್ ಕುಮಾರ್, ಜಂಟಿ ನಿರ್ದೇಶಕ ಸಿದ್ಧಯ್ಯ, ಉಪ ನಿರ್ದೇಶಕ ದಿಲೀಪ್ ಕುಮಾರ್, ಮೀನುಗಾರ ಸಂಘಟನೆಗಳ ಮುಖಂಡರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಮೀನುಗಾರರ ಸುರಕ್ಷತೆ ; ಸಚಿವರಿಂದ ಸಭೆ
ಕಡಲಿನಲ್ಲಿ ಮೀನುಗಾರರ ಸುರಕ್ಷತಾ ಕ್ರಮಗಳು ಮತ್ತು ನಿಯಮಾವಳಿಗಳನ್ನು ಬಲಪಡಿಸುವ ಬಗ್ಗೆ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಮಂಕಾಳ ಎಸ್. ವೈದ್ಯ ಅಧ್ಯಕ್ಷತೆಯಲ್ಲಿ ಶುಕ್ರವಾರ ಮಂಗಳೂರಿನ ಕೋಸ್ಟ್ ಗಾರ್ಡ್ ಕಚೇರಿಯಲ್ಲಿ ಸಭೆ ನಡೆಯಿತು.
ಮೀನುಗಾರಿಕೆಗೆ ತೆರಳುವ ನಾಡದೋಣಿ, ಬೋಟುಗಳಲ್ಲಿ ಸುರಕ್ಷತಾ ಪರಿಕರಗಳಿಗೆ ಮೀನುಗಾರರು ಆದ್ಯತೆ ನೀಡಬೇಕು. ಸಮುದ್ರದ ಉಬ್ಬರ, ನದಿಗಳಲ್ಲಿ ನೀರಿನ ಹರಿವು ಹೆಚ್ಚಳದ ಸಂದರ್ಭದಲ್ಲಿ ಮೀನುಗಾರರಿಗೆ ಮುನ್ಸೂಚನೆ ನೀಡಬೇಕು. ಮೀನುಗಾರರು ಸಮುದ್ರದಲ್ಲಿ ಅಪಾಯದಲ್ಲಿ ಸಿಲುಕಿದ ಸಂದರ್ಭದಲ್ಲಿ ತಕ್ಷಣವೇ ಅವರಿಗೆ ನೆರವು ದೊರಕಿಸಲು ವ್ಯವಸ್ಥೆಗಳಾಗಬೇಕು ಎಂದು ಮಂಕಾಳ ಎಸ್. ವೈದ್ಯ ತಿಳಿಸಿದರು.
ಕೋಸ್ಟ್ ಗಾರ್ಡ್, ಮೀನುಗಾರಿಕೆ ಇಲಾಖೆಯ ಹಿರಿಯ ಅಧಿಕಾರಿಗಳು, ವಿವಿಧ ಮೀನುಗಾರರ ಸಂಘಟನೆಗಳು/ಒಕ್ಕೂಟಗಳ ಪ್ರಮುಖ ನಾಯಕರು ಸೇರಿದಂತೆ ಇತರ ಪಾಲುದಾರರು ಸಭೆಯಲ್ಲಿ ಭಾಗವಹಿಸಿದ್ದರು.
Mangalore Minister Mankal Vaidya Visits Homes of Missing Bengre Fishermen, Hands Over 10 Lakh Compensation Cheques to Each Family.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm