ಬ್ರೇಕಿಂಗ್ ನ್ಯೂಸ್
07-06-25 11:46 am Mangalore Correspondent ಕರಾವಳಿ
ಪುತ್ತೂರು, ಜೂನ್.7: ಬೆಂಗಳೂರಿನಿಂದ ಮಂಗಳೂರು ಬರುತ್ತಿದ್ದ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ರಾಷ್ಟ್ರೀಯ ಹೆದ್ದಾರಿ 75ರ ಗುಂಡ್ಯ ಬಳಿಯ ಬರ್ಚಿನಹಳ್ಳಿ ತಿರುವಿನಲ್ಲಿ ಪಲ್ಟಿಯಾದ ಘಟನೆ ಬೆಳಗಿನ ಜಾವ ಸಂಭವಿಸಿದೆ. ಅಪಘಾತದಲ್ಲಿ 16ಕ್ಕೂ ಹೆಚ್ಚು ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ.
ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ ನಲ್ಲಿ ಸುಮಾರು 30ಕ್ಕೂ ಹೆಚ್ಚು ಮಂದಿ ಪ್ರಯಾಣಿಸುತ್ತಿದ್ದರು. ಹೆಚ್ಚಿನ ಯುವಕರು ಬಕ್ರೀದ್ ಹಬ್ಬದ ಪ್ರಯುಕ್ತ ತಮ್ಮ ಊರುಗಳಿಗೆ ತೆರಳುತ್ತಿದ್ದರು. ಬೆಳಗಿನ ಜಾವ ಪ್ರಯಾಣಿಕರು ನಿದ್ದೆಯ ಮುಂಪರಿನಲ್ಲಿರುವಾಗಲೇ ಗುಂಡ್ಯ ಸಮೀಪದ ಬರ್ಚಿನಹಳ್ಳಿ ತಿರುವಿನ ಬಳಿ ಚಾಲಕನ ನಿಯಂತ್ರಣ ತಪ್ಪಿ ಬಸ್ ರಸ್ತೆಯ ಬಲಭಾಗಕ್ಕೆ ಪಲ್ಟಿ ಹೊಡೆದಿದೆ.
ಘಟನೆಯಲ್ಲಿ ಹಲವರು ಗಂಭೀರ ಗಾಯಗೊಂಡಿದ್ದಾರೆ. ಫಹದ್ (20) ಮೂಡಬಿದ್ರೆ, ರಂಝೀನ್(25) ಪರಂಗಿಪೇಟೆ, ಉಮ್ಮರ್ (53)ದೇರಳಕಟ್ಟೆ, ತಮೀನ್(19) ಪುತ್ತೂರು, ಇಷಾಮ್(19) ಸಾಲ್ಮರ ಪುತ್ತೂರು, ರುಕ್ಮಯ(24) ಉಪ್ಪಿನಂಗಡಿ, ಜಾಹಿರ್ (23) ಸಾಲೆತ್ತೂರು, ಶಮೀರ್ (28) ವಿಟ್ಲ, ಅನ್ಸಾರ್ (26) ವಿಟ್ಲ, ಸೋಮಶೇಖರ (55) ದಾಸರಪುರ ಬೆಂಗಳೂರು, ಶರತ್(35) ದಾಸರಪುರ ಬೆಂಗಳೂರು, ಡಾ. ಮಹಂತ್ ಗೌಡ (47) ನೆಲಮಂಗಲ ಬೆಂಗಳೂರು, ಸಿಮಾಕ್ (23), ಅಬ್ದುಲ್ ರಜೀದ್ (38) ಸಂಪ್ಯ ಪುತ್ತೂರು, ಪೌಝಿಲ್ (23), ಕೈಕಂಬ ಮೂಡುಬಿದ್ರೆ, ಅಲ್ತಾಫ್(28) ಎಂದು ಗಾಯಗೊಂಡವರನ್ನು ಗುರುತಿಸಲಾಗಿದೆ.
ಗಾಯಾಳುಗಳನ್ನು ತಕ್ಷಣ ನೆಲ್ಯಾಡಿಯ ಖಾಸಗಿ ಆಸ್ಪತ್ರೆಗೆ ಕೊಂಡೊಯ್ದು ಚಿಕಿತ್ಸೆ ಕೊಡಿಸಲಾಗಿದೆ. ಬಳಿಕ ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ 12 ಮಂದಿಯನ್ನು ಮಂಗಳೂರಿನ ವಿವಿಧ ಖಾಸಗಿ ಆಸ್ಪತ್ರೆಗಳಲ್ಲಿ ದಾಖಲಿಸಲಾಗಿದೆ.
A private bus traveling from Bengaluru to Mangaluru overturned near the Barchinalli curve on National Highway 75 close to Gundya in the early hours of Friday. The accident occurred after the driver reportedly lost control of the vehicle. The bus was carrying over 30 passengers, many of whom were youth heading home to celebrate the Bakrid festival. The accident took place while most passengers were asleep, leading to chaos and confusion.
01-08-25 11:34 pm
Mangaluru Correspondent
‘Comedy Kiladigalu’, Chandrashekhar Siddi Sui...
01-08-25 10:45 pm
Kannada Producer Ganesh, Film Dharmasthala Fi...
01-08-25 09:09 pm
Rape Case, Prajwal Revanna Verdict : ಮೈಸೂರಿನ...
01-08-25 02:55 pm
ಧರ್ಮ 'ಸ್ಥಳ' ಕೇಸ್ ; ಪಾಯಿಂಟ್ ನಂ.1ರಲ್ಲಿ ಸಿಕ್ಕ...
01-08-25 01:31 pm
01-08-25 10:48 pm
HK News Desk
ಭಾರತ, ರಷ್ಯಾದ್ದು ಸತ್ತ ಆರ್ಥಿಕತೆ, ಒಟ್ಟಿಗೇ ನಾಶವಾಗ...
01-08-25 11:44 am
2008ರ ಮಾಲೆಗಾಂವ್ ಸ್ಫೋಟ ಪ್ರಕರಣ ; ಸಾಧ್ವಿ ಪ್ರಜ್ಞ...
31-07-25 10:08 pm
Trump, Modi, Export Tariff: ಸ್ನೇಹಿತ ಎನ್ನುತ್ತಲ...
31-07-25 09:51 am
ಪಾಕಿಸ್ತಾನದ ಡಿಜಿಎಂಒ ಕರೆ ಮಾಡಿ ದಾಳಿ ನಿಲ್ಲಿಸಲು ಮನ...
30-07-25 09:06 am
02-08-25 10:51 pm
Mangalore Correspondent
Kallapu Highway News; ಕಲ್ಲಾಪು ಹೆದ್ದಾರಿಯಲ್ಲಿ ಬ...
02-08-25 03:51 pm
Inspector Manjunath Gowda, SIT, Dharmasthala:...
02-08-25 02:31 pm
Dharmasthala Case, UDR, SIT Police News; ಧರ್ಮ...
02-08-25 01:46 pm
Kerala Comes to Mangalore: Feast at Coral, Th...
02-08-25 01:40 pm
02-08-25 10:04 pm
Giridhar Shettt, Mangaluru
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm
Mangalore CCB Police, Drugs: ಆಂಧ್ರಪ್ರದೇಶದಿಂದ...
01-08-25 05:05 pm
13 ವರ್ಷದ ಬಾಲಕನ ಕಿಡ್ನಾಪ್ ; 5 ಲಕ್ಷ ರೂ. ಹಣ ತರುವಷ...
01-08-25 04:27 pm